ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಮೈಲ್ಡ್ ಸ್ಟ್ರೋಕ್, ಆರೋಗ್ಯವಾಗಿದ್ದಾರೆ ಕುಮಾರಣ್ಣ….!

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಅನಾರೋಗ್ಯಕ್ಕೆ ತುತ್ತಾಗಿದ್ದು, ನಿನ್ನೆ ಬೆಳಿಗ್ಗೆ ಬೆಂಗಳೂರಿನ ಜಯನಗರದಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಚೇತರಿಕೆಯಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಸಹ ಬಿಡುಗಡೆ ಮಾಡಲಾಗಿತ್ತು.…

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಅನಾರೋಗ್ಯಕ್ಕೆ ತುತ್ತಾಗಿದ್ದು, ನಿನ್ನೆ ಬೆಳಿಗ್ಗೆ ಬೆಂಗಳೂರಿನ ಜಯನಗರದಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಚೇತರಿಕೆಯಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಸಹ ಬಿಡುಗಡೆ ಮಾಡಲಾಗಿತ್ತು. ಇನ್ನೂ ಆಸ್ಪತ್ರೆಗೆ ಭೇಟಿ ನೀಡಿದ ಹೆಚ್.ಡಿ.ಕೆ ಕುಟುಂಬ ಯಾರೂ ಆತಂಕಪಡುವ ಅಗತ್ಯವಿಲ್ಲ ಕುಮಾರಸ್ವಾಮಿಯವರು ಆರೋಗ್ಯದಿಂದ ಇದ್ದಾರೆ ಎಂದು ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿಯವರ ಎಡಭಾಗದಲ್ಲಿ ರಕ್ತನಾಳ ಸಮಸ್ಯೆಯಾಗಿ, ಎಡಭಾಗಕ್ಕೆ ಮೈಲ್ಡ್ ಸ್ಟ್ರೋಕ್ ಆಗಿತ್ತು. ಆ ಪರಿಣಾಮ ದಿಂದ ಮಾತುಗಳು ತೊದಲುತ್ತಿದ್ದವು. ತುಂಬಾ ಸುಸ್ತಾಗಿದ್ದರು. ಆಸ್ಪತ್ರೆಗೆ ದಾಖಲಾದ ಒಂದೇ ಗಂಟೆಯಲ್ಲೇ ಅವರು ಚೇತರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ತುರ್ತು ಚಿಕಿತ್ಸಾ ಕೊಠಡಿಯಿಂದ ಐಸಿಯು ಗೆ ಶಿಫ್ಟ್ ಮಾಡಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಸದ್ಯ ಅವರು ಆರೋಗ್ಯದಿಂದ ಇದ್ದಾರೆ. ಇನ್ನೂ ಎರಡು ಮೂರು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾಗುತ್ತದೆ. ಇಂದು ಮತ್ತೊಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡಿದ ವೈದ್ಯ ಡಾ.ಸತೀಶ್ ಚಂದ್ರ ತಿಳಿಸಿದ್ದರು.

ಇನ್ನೂ ಕುಮಾರಸ್ವಾಮಿಯವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಳಿಕ ಅವರ ಆರೋಗ್ಯದ ಪರಿಸ್ಥಿತಿ ಬಗ್ಗೆ ಅನಿತಾ ಕುಮಾರಸ್ವಾಮಿ ಸಹ ಮಾಹಿತಿ ನೀಡಿದ್ದಾರೆ. ಕುಮಾರಸ್ವಾಮಿಯವರು ಆರೋಗ್ಯದಿಂದ ಇದ್ದಾರೆ. ಯಾರೂ ಸುಳ್ಳುಸುದ್ದಿಗಳಿಗೆ ಕಿವಿಗೊಡಬೇಡಿ. ರಾಜ್ಯದ ಜನತೆ ಆತಂಕ ಪಡೋದು ಬೇಡ. ಅವರನ್ನು ಒಂದೇ ದಿನದಲ್ಲಿ ಡಿಸ್ಚಾರ್ಜ್ ಮಾಡುತ್ತೀವಿ ಅಂತಾ ಹೇಳಿದ್ರು ಆದರೆ ನಾನೇ ಬೇಡ ಅಂತ ಹೇಳಿದ್ದೀನಿ. ಇನ್ನೂ ಚಿಕಿತ್ಸೆ ಪಡೆದುಕೊಂಡು ಅವರು ಸಂಪೂರ್ಣವಾಗಿ ಗುಣಮುಖರಾಗಿ ಬಂದು ಜನರ ಸೇವೆ ಮಾಡಲಿದ್ದಾರೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಇನ್ನೂ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ರವರು ಸಹ ಕುಮಾರಸ್ವಾಮಿಯವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಬೊಮ್ಮಾಯಿ ರವರು ಅನಿತಾ ಕುಮಾರಸ್ವಾಮಿ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ರವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಕುಮಾರಸ್ವಾಮಿಯವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.