Film News

ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ದ ಜಾತಿ ನಿಂದನೆ ಆರೋಪ, ಎಫ್.ಐ.ಆರ್ ದಾಖಲು…..!

ಕನ್ನಡ ಕಿರುತೆರೆಯಲ್ಲಿ ಭಾರಿ ಸದ್ದು ಮಾಡುವ ಶೋಗಳಲ್ಲಿ ಬಿಗ್ ಬಾಸ್ ಒಂದಾಗಿದೆ. ಕೆಲವು ದಿನಗಳ ಹಿಂದೆಯಷ್ಟೆ ಹುಲಿಉಗುರು ಧರಿಸಿದ ಆರೋಪದಡಿ ಸಂತೋಷ್ ಎಂಬ ಸ್ಪರ್ಧಿ ಜೈಲಿಗೆ ಹೋಗಿ ಜಾಮೀನಿನ ಮೇರೆಗೆ ವಾಪಸ್ಸು ಬಂದು ಮತ್ತೆ ಬಿಗ್ ಬಾಸ್ ಮನೆ ಸೇರಿದ್ದಾರೆ. ಇದೀಗ ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ದ ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಎಫ್.ಐ.ಆರ್‍ ದಾಖಲಾಗಿದೆ.

ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ದ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಶೋ ನಲ್ಲಿ ತನಿಷಾ ಡ್ರೋನ್ ಪ್ರತಾಪ್ ಜೊತೆ ಮಾತನಾಡುವ ಸಮಯದಲ್ಲಿ ಬೋವಿ ಜನಾಂಗದ ಬಗ್ಗೆ ಅವಮಾನಕರವಾದ ಪದ ಬಳಸಿದ್ದಾರೆ ಎಂದು ದೂರು ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವವರು ದೂರ ನೀಡಿದ್ದು, ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ. ಬೋವಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಇನ್ನೂ ತನಿಷಾ ಕುಪ್ಪುಂಡ ವಿರುದ್ದ ದೂರು ದಾಖಲಾಗಿದ್ದು, ಬಿಗ್ ಬಾಸ್ ಮನೆಯಿಂದ ಆಕೆಯನ್ನು ಹೊರಹಾಕಬೇಕು. ಜೊತೆಗೆ ಆಕೆಯ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಎಸ್.ಸಿ/ಎಸ್.ಟಿ ಕಾಯ್ದೆಯಡಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಲಾಗಿದೆ. ಬಿಗ್ ಬಾಸ್ ನಿಂದ ಹೊರಬಂದು ಮತ್ತೆ ಮನೆಗೆ ಎಂಟ್ರಿ ಕೊಟ್ಟ ಸಂತೋಷ್ ಬಳಿಕ ತನಿಷಾ ಸಹ ಜೈಲು ಸೇರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top