ಇತಿಹಾಸದಲ್ಲೇ ಮೊದಲ ಬಾರಿಗೆ ಪಾಕಿಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಹಿಂದೂ ಮಹಿಳೆ……!

Follow Us :

ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ದಾಳಿ, ದೌರ್ಜನ್ಯ ಹೆಚ್ಚಾಗುತ್ತಿರುವ ಬಗ್ಗೆ ಸುದ್ದಿಗಳನ್ನು ಕೇಳುತ್ತಲೇ ಇರುತ್ತೇವೆ. ಪಾಕಿಸ್ತಾನವನ್ನು ಭಯೋತ್ಪಾದಕರ ಸ್ವರ್ಗ ಎಂದೂ ಸಹ ಕರೆಯಲಾಗುತ್ತದೆ. ಹಿಂದೂಗಳ ಮೇಲೆ ದೌಜ್ಜನ್ಯಗಳು ಹೆಚ್ಚಾಗುತ್ತಿರುವ ನಡುವೆ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರಂತೆ. ಖೈಬರ್‍ ಪಖ್ತುಂಖ್ವಾದ ಬುನೇರ್‍ ಜಿಲ್ಲೆಯಿಂದ ಆಕೆ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯಿಂದ ಸ್ಪರ್ಧೆ ಮಾಡಲಿದ್ದಾರೆ.

ಪಾಕಿಸ್ತಾನದಲ್ಲಿ ಮುಂಬರುವ ವರ್ಷ ಅಂದರೇ 2024 ಫೆಬ್ರವರಿ 8 ರಂದು 16ನೇ ರಾಷ್ಟ್ರೀಯ ಅಸೆಂಬ್ಲಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲೇ ಸವೀರಾ ಪ್ರಕಾಶ್ ಎಂಬ ಹಿಂದೂ ಯುವತಿ ಸ್ಪರ್ಧೆ ಮಾಡಲಿದ್ದಾರಂತೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಜೊತೆಗೆ ಗುರ್ತಿಸಿಕೊಂಡಿರುವ ಸವೀರಾ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿಯುತ್ತಿದ್ದಾರೆ. ಬುನೇರ್‍ ಜಿಲ್ಲೆ ಪಿಕೆ-25 ಕ್ಷೇತ್ರದಿಂದ ಸಾಮಾನ್ಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸವೀರಾ ರವರತಂದೆ ಓಂ ಪ್ರಕಾಶ್ ಕಳೆದ 35 ವರ್ಷಗಳಿಂದ ಪಿಪಿಪಿ ಪಕ್ಷ ಸದ್ಯರಾಗಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇನ್ನೂ ಸವೀರಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವ ಬಗ್ಗೆ ಕ್ವಾಮಿ ವತನ್ ಪಕ್ಷದ ನಾಯಕ ಸಲೀಮ್ ಖಾನ್ ಎಂಬುವವರು ಮಾದ್ಯಮವೊಂದಕ್ಕೆಮಾಹಿತಿ ನೀಡಿದ್ದಾರೆ. ಹಿಂದೂ ಮಹಿಳೆಯೊಬ್ಬರು ಚುನಾವಣೆಗೆ ಸ್ಫರ್ಧಿಸುತ್ತಿರುವ ಇದೇ ಮೊದಲು ಎಂದು ತಿಳಿಸಿದ್ದಾರೆ.

ಇನ್ನೂ ಸವೀರಾ ಪ್ರಕಾಶ್ ಅಬೋಟಾಬಾದ್ ಇಂಟರ್‍ ನ್ಯಾಷನಲ್ ಮೆಡಿಕಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಬುನರ್‍ ನಲ್ಲಿ ಆಕೆ ಪಿಪಿಪಿ ಪಕ್ಷದ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ 2022 ರಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನೂ ನಾನು ನಮ್ಮ ತಂದೆಯಂತೆ ರಾಜಕೀಯದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನ ಮಾಡುತ್ತೇನೆ. ಹಿಂದುಳಿದ ಜನರ ಅಭಿವೃದ್ದಿಗೆ ಶ್ರಮಿಸುತ್ತೇನೆ. ಡಿ.23 ರಂದು ಚುನಾವಣೆ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷದ ಹಿರಿಯ ನಾಯಕರು ನನ್ನ ನಾಮಪತ್ರ ಅನುಮೋದಿಸಲಿದ್ದಾರೆ. ಜನರ ಸೇವೆಗೆ ನಾನು ಬದ್ದಳಾಗಿದ್ದೇನೆ ಎಂದು ಆಕೆ ಹೇಳಿದ್ದಾರೆ.  ಒಟ್ಟಿನಲ್ಲಿ ಬುನರ್‍ ಪ್ರದೇಶ ಪಾಕಿಸ್ತಾನದೊಂದಿಗೆ ವಿಲೀನಗೊಂಡ 55 ವರ್ಷಗಳ ಇತಿಹಾಸದಲ್ಲೇ ಹಿಂದೂ ಮಹಿಳೆ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ.