News

ಬಳ್ಳಾರಿ ವಿವಿ ಮಹತ್ವದ ಘೋಷಣೆ, ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ತೃತೀಯ ಲಿಂಗಿಗಳಿಗೆ ಉಚಿತ ಶಿಕ್ಷಣ….!

ತೃತೀಯ ಲಿಂಗಿಗಳಿಗೆ ಉಚಿತ ಶಿಕ್ಷಣ ಕೊಟ್ಟು ಅವರನ್ನು ಮುಖ್ಯ ವಾಹಿನಿಗೆ ತರಲು ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಮಹತ್ತರ ಹೆಜ್ಜೆ ಇಟ್ಟಿದೆ. ಶ್ರೀಕೃಷ್ಣ ದೇವರಾಯ ವಿವಿಯಲ್ಲಿ ತೃತೀಯ ಲಿಂಗಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧಾರ ಮಾಡಿದ್ದು, ಈ ನಿರ್ಧಾರದಂತೆ ತೃತೀಯ ಲಿಂಗಿಗಳೂ ಸೇರಿದಂತೆ ದೇವದಾಸಿ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ಬಳ್ಳಾರಿಯ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ತೃತೀಯ ಲಿಂಗಿಗಳು ಹಾಗೂ ದೇವದಾಸಿ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈಗಾಗಲೇ ಸಿಂಡಿಕೇಟ್ ನಲ್ಲಿ ಉಚಿತ ಶಿಕ್ಷಣ ನೀಡುವ ಬಗ್ಗೆ ಅನುಮೋದನೆ ಸಹ ಪಡೆದುಕೊಂಡಿದೆ. ರಾಜ್ಯದಲ್ಲಿ ಸುಮಾರು 46 ಸಾವಿ ಮಾಜಿ ದೇವದಾಸಿಗಳಿದ್ದು, ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸುಮಾರು 15 ಸಾವಿರ ಮಾಜಿ ದೇವದಾಸಿಗಳಿದ್ದು, ಮೂರು ಸಾವಿರಕ್ಕೂ ಅಧಿಕ ದೇವದಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎನ್ನಲಾಗಿದೆ.

ಈ ಕಾರಣದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಲಯ ಈ ಮಹತ್ತರ ನಿರ್ಧಾರ ತೆಗೆದುಕೊಂಡಿದೆ. ತೃತೀಯ ಲಿಂಗಿಗಳು ಹಗೂ ಮಾಜಿ ದೇವಾದಾಸಿ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಮೂಲಕ ಮಹತ್ತರ ಹೆಜ್ಜೆ ಇಟ್ಟಿದ್ದು, ವಿಶ್ವ ವಿದ್ಯಾಲಯದ ಈ ಕಾರ್ಯಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Most Popular

To Top