Film News

ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನಗಳ ಭರ್ತಿಗೆ ಅವಕಾಶ

ಬೆಂಗಳೂರು: ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸುವಂತಹ ಪ್ರದೇಶಗಳಿಗೆ ಸರ್ಕಾರ ನಿರ್ಭಂಧ ಹೇರಿತ್ತು. ನಂತರ ಕೊಂಚ ಕೊಂಚ ಸಡಲಿಕೆ ನೀಡುತ್ತಾ ಬಂದಿದ್ದು, ಅದರ ಭಾಗವಾಗಿ ಚಿತ್ರಮಂದಿರಗಳಲ್ಲಿ ಶೇ.50 ಆಸನಗಳಿಗೆ ಮಾತ್ರ ಅವಕಾಶ ಇದ್ದದ್ದನ್ನು, ಫೆ.1 ರಿಂದ ಶೇ.100 ರಷ್ಟು ಆಸನಗಳ ಭರ್ತಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಕೋವಿಡ್ ನಿಯಾಮಗಳಿಗಳು ಇದೇ ಜ.31 ರಂದು ರವರೆಗೆ ಮಾತ್ರ ಚಾಲ್ತಿಯಲ್ಲಿದ್ದು, ಬಳಿಕ ಕೇಂದ್ರ ಸರ್ಕಾರ ಹಲವು ಸಡಲಿಕೆಗಳನ್ನು ನೀಡಲಿದೆಯಂತೆ. ಇದರ ಅಂಗವಾಗಿ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನಗಳ ಭರ್ತಿಗೆ ಅವಕಾಶ ನೀಡಬಹುದಾಗಿದೆ ಎನ್ನಲಾಗುತ್ತಿದೆ. ಈ ಕುರಿತು ಕೇಂದ್ರ ಸರ್ಕಾರ ನೀಡುವ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸಹ ತಿಳಿಸಿದೆಯಂತೆ.

ಇನ್ನೂ ಪೂರ್ಣ ಪ್ರಮಾಣದ ಆಸನಗಳ ಭರ್ತಿಗೆ ಅವಕಾಶ ನೀಡಿದರೂ ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಿದ್ದು, ಚಿತ್ರಮಂದಿರಗಳು ಕಡ್ಡಾಯವಾಗಿ ಸಾನಿಟೈಸ್ ಮಾಡಬೇಕಿದೆ. ಜೊತೆಗೆ ಚಿತ್ರಮಂದಿರಗಳಲ್ಲಿನ ಸ್ವಚ್ಚತೆ ಕುರಿತಂತೆಯೂ ಹೊಸ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನೂ ಈ ಶುಭ ಸುದ್ದಿ ದೊರೆಯುತ್ತಿದ್ದಂತೆ ನಿರ್ಮಾಪಕರು ಸಂತಸದಲ್ಲಿದ್ದಾರೆ. ಕೋಟ್ಯಂತರ ರೂಪಾಯಿಗಳ ಬಂಡವಾಳ ಹೂಡಿ ಬಿಗ್ ಸ್ಟಾರ್‍ಸ್ ಜೊತೆ ಬಿಗ್ ಬಜೆಟ್ ಸಿನೆಮಾಗಳನ್ನು ನಿರ್ಮಾಣ ಮಾಡಿದ್ದು, ಶೇ.50 ರಷ್ಟು ಆಸನಗಳ ಭರ್ತಿಗೆ ಅವಕಾಶ ನೀಡಿದ್ದರಿಂದಾಗಿ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದರೆಂಬ ಮಾತುಗಳ ಸಹ ಕೇಳಿಬಂದಿತ್ತು. ಇದೀಗ ಸರ್ಕಾರ ಪೂರ್ಣ ಪ್ರಮಾಣದ ಆಸನಗಳ ಭರ್ತಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಫೆಬ್ರವರಿಯಿಂದ ಚಲನಚಿತ್ರ ಬಿಡುಗಡೆಯ ಹಬ್ಬವೇ ಬರಲಿದೆ ಎನ್ನಲಾಗುತ್ತಿದೆ.

Trending

To Top