ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ 18 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…..!

Follow Us :

ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವಂತಹ ಸ್ಟೆನೋಗ್ರಾಫರ್‍, ಜವಾನ, ಟೈಪಿಸ್ಟ್ ಸೇರಿದಂತೆ ಒಟ್ಟು 18 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ನವೆಂಬರ್​ 29ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಡಿಸೆಂಬರ್​ 28 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಿದೆ.

ಹುದ್ದೆಗಳ ವಿವರ:  ಗದಗ ಜಿಲ್ಲಾ ನ್ಯಾಯಾಲಯದಿಂದ ಅರ್ಜಿ ಆಹ್ವಾನಿಸಲಾದ ಹುದ್ದೆಗಳ ವಿವರಕ್ಕೆ ಬಂದರೇ, ಶೀಘ್ರ ಲಿಪಿಗಾರ 2, ಟೈಪಿಸ್ಟ್​​ 3, ಟೈಪಿಸ್ಟ್​​- ಕಾಪಿಸ್ಟ್​​ 3, ಜವಾನ 10 ಒಟ್ಟು 18 ಹುದ್ದೆಗಳು ಖಾಲಿಯಿದೆ. ವಿದ್ಯಾರ್ಹತೆಯ ವಿಚಾರಕ್ಕೆ ಬಂದರೇ, ಶೀಘ್ರ ಲಿಪಿಗಾರ / ಬೆರಳಚ್ಚುಗಾರ ಹುದ್ದೆಗಳಿಗೆ ಪಿಯುಸಿ ಅಥವಾ ಕಮರ್ಷಿಯಲ್​ ಪ್ರಾಕ್ಟಿಸ್​ನಲ್ಲಿ 3 ವರ್ಷದ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಭಾಷೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಟೆಪಿಸ್ಟ್​​- ಕಾಪಿಸ್ಟ್​​ ಹುದ್ದೆಗಳಿಗೆ ಪಿಯುಸಿ ಅಥವಾ ಕಮರ್ಷಿಯಲ್​ ಪ್ರಾಕ್ಟಿಸ್​ನಲ್ಲಿ 3 ವರ್ಷದ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕಿರಿಯ ಕನ್ನಡ ಮತ್ತು ಇಂಗ್ಲಿಷ್​ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರರ್ಣರಾಗಿರಬೇಕು. ಜವಾನ ಹುದ್ದೆಗೆ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಟ ವಯೋಮಿತಿ 18 ವರ್ಷ, ಗರಿಷ್ಟ ವಯೋಮಿತಿ 35 ವರ್ಷ ಆಗಿದೆ. ಪರಿಶಿಷ್ಟ ಜಾತಿ/ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಪರಿಶಿಷ್ಟ ಜಾತಿ/ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಉಳಿದ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ ನಿಗಧಿಪಡಿಸಲಾಗಿದೆ. ಈ ಹುದ್ದೆಗಳಿಗೆ ಲಿಖಿ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು gadag.dcourts.gov.in ತಾಣಕ್ಕೆ ಭೇಟಿ ನೀಡಬಹುದಾಗಿದೆ.