News

ರಾಜ್ಯದ ಮಹಿಳೆಯರಿಗೆ ಶಾಕ್ ಕೊಟ್ಟ ಕಾಂಗ್ರೇಸ್ ಸರ್ಕಾರ, ಗೃಹ ಲಕ್ಷ್ಮೀ ಯೋಜನೆ ಸ್ಥಗಿತ ….!

ಕರ್ನಾಟಕ ರಾಜ್ಯದ ಕಾಂಗ್ರೇಸ್ ಸರ್ಕಾರ ಚುನಾವಣೆಯ ಸಮಯದಲ್ಲಿ ನೀಡಿದ ಗ್ಯಾರಂಟಿಗಳನ್ನು ಒಂದೊಂದಾಗಿ ಪೂರೈಸುತ್ತಾ ಬರುತ್ತಿದೆ. ಅದರಲ್ಲಿ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದೆ. ರಾಜ್ಯದ ಕುಟುಂಬದ ಯಜಮಾನಿಗೆ ಎರಡು ಸಾವಿರ ನೀಡುವ ಯೋಜನೆ ಇದಾಗಿದ್ದು,  ಕೆಲವು ದಿನಗಳ ಹಿಂದೆಯಷ್ಟೆ ಚಾಲನೆ ನೀಡಿಲಾಯಿತು. ಆದರೆ ಇದೀಗ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ನೊಂದಣಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ.

ಆ.30 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ ಸೇರಿದಂತೆ ಅನೇಕ ಕಾಂಗ್ರೇಸ್ ನಾಯಕರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಸಾವಿರಾರು ಸಂಖ್ಯೆಯ ಫಲಾನುಭವಿಗಳ ಸಮ್ಮುಖದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಅಂದೇ ನೊಂದಾಯಿತ ಅನೇಕ ಮಹಿಳೆಯರ ಖಾತೆಗೆ ಎರಡು ಸಾವಿರ ಜಮೆ ಆಗಿದೆ. ಆದರೆ ಇದೀಗ ನೊಂದಣಿಯಾಗ ಮಹಿಳೆಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಗೃಹಲಕ್ಷ್ಮೀ ಯೋಜನೆಗೆ ನೊಂದಣಿಯನ್ನು ಸ್ಥಗಿತಗೊಳಿಸಿದೆ.

ಇನ್ನೂ ಈ ಬಗ್ಗೆ ಕರ್ನಾಟಕ ಸರ್ಕಾರ ಪ್ರಕಟನೆ ಹೊರಡಿಸಿದೆ. ನೊಂದಾಯಿತ ಫಲಾನುಭವಿಗಳ ಖಾತೆಗೆ ಎರಡು ಸಾವುರ ಹಣ ಜಮಾ ಮಾಡುವ ಸಮಯದಲ್ಲಿ ಗೊಂದಲ ಮೂಡಬಾರದೆಂಬ ದೃಷ್ಟಿಯಿಂದ ಗೃಹ ಲಕ್ಷ್ಮಿ ಯೋಜನೆಯ ಹೊಸ ನೊಂದಣಿಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೊಂದಣಿಯಾದ ಫಲಾನುಭವಿಗಳಿಗೆ  ಮೊಲದ ಕಂತಿನ ಹಣ ಜಮೆಯಾದ ಬಳಿಕ ನೊಂದಣಿ ಕಾರ್ಯ ಮತ್ತೆ ಪ್ರಾರಂಭಿಸಲಾಗುವುದು. ಜೊತೆಗೆ ಶೀಘ್ರವಾಗಿ ಹೊಸ ನೊಂದಣಿಗೆ ಅವಕಾಶ ಸಹ ಮಾಡಿಕೊಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 1902 ಸಂಖ್ಯೆಗೆ ಕರೆ ಮಾಡಿ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

Most Popular

To Top