News

ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ರಕ್ಷಾಬಂಧನ ಹಬ್ಬದಂದು ಮಹಿಳೆಯರ ಖಾತೆಗೆ 2 ಸಾವಿರ, ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಸಿದ್ದು…..!

ಕರ್ನಾಟಕ ರಾಜ್ಯದ ಕಾಂಗ್ರೇಸ್ ಸರ್ಕಾರ ಚುನಾವಣೆಗೂ ಮುನ್ನಾ ನೀಡಿದ ಗ್ಯಾರಂಟಿಗಳನ್ನು ಈಡೇರುಸುತ್ತಾ ಬರುತ್ತಿದೆ. ಅದರ ಭಾಗವಾಗಿಯೇ ಗೃಹಲಕ್ಷ್ಮೀ ಯೋಜನೆಗೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ರಕ್ಷಾಬಂಧನ ಹಬ್ಬದಂದೇ ಮಹಿಳೆಯರ ಖಾತೆಗೆ ಎರಡು ಸಾವಿರ ಜಮೆ ಆಗಿದ್ದು, ಮಹಿಳೆಯರು ಪುಲ್ ಖುಷಿಯಾಗಿದ್ದಾರೆ. ಇದೇ ವೇಳೆ ಬಿಜೆಪಿ ನಾಯಕರಿಗೆ ಕಾಂಗ್ರೇಸ್ ನಾಯಕರು ವೇದಿಕೆಯಲ್ಲಿ ತಮ್ಮದೇ ಆದ ಶೈಲಿಯಲ್ಲಿ ಟಾಂಗ್ ಕೊಟ್ಟಿದ್ದಾರೆ.

ಇನ್ನೂ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ದಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ ಸೇರಿದಂತೆ ಅನೇಕ ಕಾಂಗ್ರೇಸ್ ನಾಯಕರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಸಾವಿರಾರು ಸಂಖ್ಯೆಯ ಫಲಾನುಭವಿಗಳ ಸಮ್ಮುಖದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಇನ್ನೂ ರಾಜ್ಯದ ಪಂಚಾಯತಿ ಮಟ್ಟದಲ್ಲೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದ ಲೈವ್ ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಇನ್ನೂ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಯಾವ ಸರ್ಕಾರವೂ ಕೊಟ್ಟ ಮಾತನ್ನು ನೂರು ದಿನದಲ್ಲಿ ಈಡೇರಿಸಿಲ್ಲ. ಆದರೆ ನಮ್ಮ ಕಾಂಗ್ರೇಸ್ ಸರ್ಕಾರ ನೂರು ದಿನಗಳಲ್ಲಿ ನುಡಿದಂತೆ ನಡೆದುಕೊಂಡಿದ್ದೇವೆ. ಆ.27 ಕ್ಕೆ ನಮ್ಮ ಸರ್ಕಾರಕ್ಕೆ ನೂರು ದಿನ ತುಂಬಿದೆ. ನೂರು ದಿನದ ಸಾಧನೆ ಕೈಪಿಡಿಯನ್ನು ಬಿಡುಗಡೆ ಮಾಡಿದ್ದೇವೆ. ರಾಜ್ಯದ ಜನತೆಯ ಮುಂದೆ ಕೈಪಿಡಿಯ ಮೂಲಕ ನಮ್ಮ ಜವಾಭ್ದಾರಿಯನ್ನು ಮುಂದಿಟ್ಟಿದ್ದೇವೆ. ಪ್ರಣಾಳಿಕೆಯಲ್ಲಿ ನಾವು ಭರವಸೆ ಕೊಟ್ಟಿದ್ದು, ಅದರನ್ನು ಸಮರ್ಪಕವಾಗಿ ಜಾರಿ ಮಾಡಬೇಕಾಗಿರುವುದು ನಮ್ಮ ಧರ್ಮ, ಆ ಹಾದಿಯಲ್ಲೇ ಕೊಟ್ಟ ಮಾತಿನಂತೆ ನಾವು ನಡೆದುಕೊಂಡಿದ್ದೇವೆ. ಇದೀಗ 1.26 ಕೋಟಿ ಕುಟುಂಬದ ಯಜಮಾನಿಗೆ ಹಣ ಹಾಕಿದ್ದೇವೆ. ಕಾಂಗ್ರೇಸ್ ಸರ್ಕಾರ ಸದಾ ಬಡವರ ಪರವಾಗಿರುತ್ತೆ ಎಂದಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ದ ಗುಡುಗಿದ ಸಿದ್ದು, ನಮ್ಮ ಅನ್ನಭಾಗ್ಯ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಅಂತ ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡಲಿಲ್ಲ. ಅದಕ್ಕಾಗಿ ಹಣ ಕೊಡುತ್ತಿದ್ದೇವೆ. ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಹಿಂದೆ ಬಿಜೆಪಿ, ಜೆಡಿಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಗ್ಯಾರಂಟಿ ಯೋಜನೆ ಕೊಡಲು ಆಗಲ್ಲ ಎಂದು ಹೇಳಿದ್ದರು. ಆರ್ಥಿಕವಾಗಿ ದಿವಾಳಿಯಾಗುತ್ತೆ ಅಂತೆಲ್ಲ ಹೇಳಿದ್ದರು. ಆದರೆ ನಾವು ಯಶಸ್ವಿಯಾಗಿ ನಾಲ್ಕು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದು, ಯುವನಿಧಿ ಗ್ಯಾರಂಟಿಯನ್ನು ಡಿಸೆಂಬರ್‍ ಅಥವಾ ಜನವರಿಯಲ್ಲಿ ಜಾರಿಗೆ ತರುತ್ತೇವೆ. ಕಾಂಗ್ರೇಸ್ ಸರ್ಕಾರ ನುಡಿದಂತೆ ನಡೆದಿದೆ. ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.

Most Popular

To Top