News

ಆ.3೦ ರಂದು ಗೃಹಲಕ್ಷ್ಮೀ ಯೋಜನೆ ಚಾಲನೆ, ಮೈಸೂರಿನಲ್ಲಿ ಅಗತ್ಯ ಸಿದ್ದತೆಗಳ ಆರಂಭ….!

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಆಡಳಿತದಲ್ಲಿದ್ದು, ಚುನಾವಣೆ ಸಮಯದಲ್ಲಿ ನೀಡಿದ ಗ್ಯಾರಂಟಿಗಳನ್ನು ಒಂದೊಂದಾಗಿ ನೀಡುತ್ತಾ ಬಂದಿದೆ. ಇದೀಗ ಬಹುನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಗೆ ಅರ್ಜಿಗಳನ್ನು ಸಹ ಸಲ್ಲಿಸಲಾಗುತ್ತಿದ್ದು, ಇದೀಗ ಈ ಯೋಜನೆಗೆ ಆ.30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತದೆ. ಜೊತೆಗೆ ಕಾರ್ಯಕ್ರಮಕ್ಕೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೋಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ಇನ್ನೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‍ ಮಾತನಾಡಿ. ಈಗಾಗಲೇ ಗೃಹ ಲಕ್ಷ್ಮೀ ಯೋಜನೆಗೆ ಸುಮಾರು 1.09 ಕೋಟಿಗೂ ಅಧಿಕ ಮಂದಿ ನೊಂದಣಿ ಮಾಡಿಸಿಕೊಂಡಿದ್ದಾರೆ. ಈ ಯೋಜನೆಯಡಿ ಮನೆಯ ಯಜಮಾನಿಗೆ ಮಾಸಿಕ ಎರಡು ಸಾವಿರ ಹಣ ನೀಡಲಾಗುತ್ತಿದೆ. ಈ ಯೋಜನೆಗೆ ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಮಹತ್ವದ ಯೋಜನೆಗೆ ಚಾಲನೆ ಸಿಗುತ್ತಿರುವುದು ನ್ನ ಅದೃಷ್ಟ. ಈ ಕಾರ್ಯಕ್ರಮಕ್ಕೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಈ ಚಾಲನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‍ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ ಎಂದು ನಮ್ಮೂರ ನಾಗರ ಪಂಚಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‍ ತಿಳಿಸಿದ್ದಾರೆ.

ಇನ್ನೂ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜನೆ ಮಾಡಲು ಸಕಲ ಸಿದ್ದತೆಗಳು ನಡೆಯುತ್ತಿದೆ. ಈ ಸಂಬಂಧ ಪರಿಸೀಲನೆ ಮಾಡಲು ಮೈಸೂರಿಗೆ ತೆರಳುತ್ತೇನೆ. ಈ ವೇಳೆ ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು ಹಾಗೂ ಶಾಸಕರೊಂದಿಗೆ ಒಂದು ಸುತ್ತಿನ ಸಭೆಯನ್ನು ಸಹ ನಡೆಸುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಗೃಹಜ್ಯೋತಿ ಯೋಜನೆಗೆ ಕಲಬುರ್ಗಿಯಲ್ಲಿ ಚಾಲನೆ ನೀಡಲಾಗಿ‌ತ್ತು. ಅದೇ ಮಾದರಿಯಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ಕೊಡಲು ತೀರ್ಮಾನ ಮಾಡಲಾಗಿತ್ತು. ಆದರೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಯವರ ಡೇಟ್ ಸಿಗದ ಕಾರಣ ಆ.30 ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಚಾಲನೆ ಸಿಗಲಿದೆ. ಅಂದೇ ಈ ಯೋಜನೆಯಡಿ ನೊಂದಾಯಿಸಿದ ಫಲಾನುಭವಿಗಳಿಗೆ ಎರಡು ಸಾವಿರ ಸಹ ಜಮೆಯಾಗಬಹುದು ಎಂದು ಹೇಳಲಾಗಿದೆ.

Most Popular

To Top