News

ಹಾಸನ ಲೋಕಸಭಾ ಕ್ಷೇತ್ರದ ಪ್ರಜ್ವಲ್ ಗೆ ಬಿಗ್ ಶಾಖ್, ಸಂಸದ ಸ್ಥಾನದಿಂದ ಅನರ್ಹ, ಹೈಕೋರ್ಟ್ ಆದೇಶ……!

ದೇವೇಗೌಡ ಕುಟುಂಬ ಯುವ ರಾಜಕಾರಣಿ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ರವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದ್ದರು. ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಹಿನ್ನೆಲೆ ಅವರ ಆಯ್ಕೆಯನ್ನು ಅಸಿಂಧು ಗೊಳಿಸಿ ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ.

ಹಾಸನ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ ಪ್ರಜ್ವಲ್ ರೇವಣ್ಣ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಎಂದು ಪರಾಜಿತ ಅಭ್ಯರ್ಥಿ ಬಿಜೆಪಿ ಪಕ್ಷದ ಎ.ಮಂಜು ದೂರು ಸಲ್ಲಿಸಿದ್ದರು. ಆದಾಯ ತೆರಿಗೆ ವಿವರಗಳಿಗೆ ಸಂಬಂಧಿಸಿದಂತೆ ಆದಾಯದ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆಂದು ಗಂಭೀರ ಆರೋಪಗಳನ್ನು ಮಾಡಿದ್ದರು. ಪ್ರಜ್ವಲ್ ಆಯ್ಕೆಯನ್ನು ಅನರ್ಹಗೊಳಿಸಿ, ಅತೀ ಹೆಚ್ಚು ಮತ ಗಳಿಸಿದ ಎರಡನೇ ಅಭ್ಯರ್ಥಿಯಾದ ತಮನ್ನು ಆಯ್ಕೆ ಮಾಡಬೇಕೆಂದು ಎ.ಮಂಜು ಅರ್ಜಿ ಸಲ್ಲಿಕೆ ಮಾಡಿದ್ದರು.

ಇನ್ನೂ ಈ ಬಗ್ಗೆ ಅಂದಿನ ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫಾನ್ಸಿಸ್ ಅವರು ಕೂಡ ಈ ಕೇಸ್ ಆದಾಯ ತೆರಿಗೆ ಇಲಾಖೆ ತನಿಖೆಗೆ ಸೂಕ್ತ ಎಂದು ವರದಿ ನೀಡಿದ್ದ ಪರಿಣಾಮ ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣದ ಸಂಬಂಧ ಹೈಕೋರ್ಟ್‌ಗೆ ಹಾಜರಾಗಿದ್ದ ಪ್ರಜ್ವಲ್ ರೇವಣ್ಣ ರವರು ಸಹ ತಮ್ಮ ಹೇಳಿಕೆಯನ್ನು ನೀಡಿದ್ದರು. ಇನ್ನೂ ಈ ಬಗ್ಗೆ ಸುಧೀರ್ಘವಾಗಿ ಆಲಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ ಸಂಸತ್ ಸದಸ್ಯತ್ವದಿಂದ ಅನರ್ಹ ಗೊಳಿಸಿ ತೀರ್ಪು ನೀಡಿದೆ. ಇನ್ನೂ ಈ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ದತೆ ನಡೆಸುತ್ತಿದ್ದಾರೆ.

Most Popular

To Top