ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಜೆಡಿಎಸ್ ನಿಂದ ಪ್ರಜ್ವಲ್ ಅಮಾನತು…!

Follow Us :

ರಾಜ್ಯ ಸೇರಿದಂತೆ ದೇಶದಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ ಪ್ರಜ್ವಲ್ ರೇವಣ್ಣರವರ ಪೆನ್ ಡ್ರೈವ್ ಕೇಸ್ ವಿಚಾರವಾಗಿ ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಿದ ಮಂಗಳವಾರ ಆದೇಶ ಹೊರಡಿಸಿದೆ. ಜೆಡಿಎಸ್ ಪಕ್ಷದ ಕೋರ್‍ ಕಮಿಟಿಯ ಸಭೆಯ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅಮಾನತು ನಿರ್ಧಾರ ಪ್ರಕಟಿಸಿ, ರಾಷ್ಟ್ರೀಯ ಅಧ್ಯಕ್ಷರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯ ವೆಸಗಿದ್ದಾರೆ ಎನ್ನಲಾದ ಕೆಲವೊಂದು ವಿಡಿಯೋಗಳು ಮಾದ್ಯಮಗಳು ಹಾಗೂ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ವಿರೋಧ ಪಕ್ಷದವರು ತೀವ್ರ ವಾಗ್ದಾಳಿ ಸಹ ನಡೆಸುತ್ತಿದ್ದಾರೆ. ಪಕ್ಷದ ಘನತೆ ಹಾಗೂ ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಧಕ್ಕೆ ಉಂಟಾಗಿರುತ್ತದೆ. ಜೊತೆಗೆ ರಾಜ್ಯ ಕಾಂಗ್ರೇಸ್ ಸರ್ಕಾರ ವಿಡಿಯೋಗಳ ತನಿಖೆ ನಡೆಸಲು ಎಸ್.ಐ.ಟಿ ಸಹ ರಚನೆ ಮಾಡಿದೆ. ಈ ಎಲ್ಲಾ ಕಾರಣಗಳಿಂದ ಜೆಡಿಎಸ್ ಪಕ್ಷ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಪ್ರಜ್ವಲ್ ರೇವಣ್ಣರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತು ಮಾಡಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಆರ್‍.ಶಿವಕುಮಾರ್‍ ಆದೇಶ ಹೊರಡಿಸಿದ್ದಾರೆ.

ಸದ್ಯ ರಾಜ್ಯ ರಾಜಕಾರಣದಲ್ಲಿ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ನಿಮಿತ್ತ ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಲಾಗಿದೆ. ತನಿಖೆ ಸಹ ಪ್ರಗತಿಯಲ್ಲಿದೆ. ಈ ನಡುವೆ ಪ್ರಕರಣದ ವರದಿಯನ್ನು ಮೂರು ದಿನಗಳಲ್ಲಿ ಸಲ್ಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಕರ್ನಾಟಕದ ಡಿಜಿ-ಐಜಿಪಿಗೆ ನೊಟೀಸ್ ನೀಡಿದೆ. ಜೊತೆಗೆ ಪ್ರಕರಣದ ಬಗ್ಗೆ ಕ್ರಿಮಿನಲ್ ತನಿಖೆಗೆ ಸೈಬರ್‍ ಕ್ರೈಂ ವಿಭಾಗಕ್ಕೆ ರಾಜ್ಯ ಮಹಿಳಾ ಆಯೋಗ ಪತ್ರ ಸಹ ಬರೆದಿದ್ದಾರೆ ಎಂದು ತಿಳಿದುಬಂದಿದೆ.