Film News

ಪ್ಯಾನ್ ಇಂಡಿಯಾ ಸಿನಿಮಾ ‘ಗಮನಂ’ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ಹ್ಯಾಟ್ರಿಕ್ ಹೀರೋ

ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ, ಏಕಕಾಲಕ್ಕೆ 5 ಭಾಷೆಗಳಲ್ಲಿ ಸಿನಿಮಾಗಳು ಬಿಡುಗಡೆಯಾಗಿ ಹೆಚ್ಚು ಜನರನ್ನು ತಲುಪುತ್ತಿವೆ. ಕೆಜಿಎಫ್ ಚಾಪ್ಟರ್ 1 ಸಿನಿಮಾದಿಂದ ಈ ಟ್ರೆಂಡ್ ಹೆಚ್ಚಾಯಿತು. ಇದೀಗ ಪ್ಯಾನ್ ಇಂಡಿಯಾ ಸಿನಿಮಾಗಳು ಹಾಗೂ ಬೇರೆ ಭಾಷೆ ಸಿನಿಮಾಗಳು ಕನ್ನಡಕ್ಕೆ ಡಬ್ ಆಗುವುದು ಕೂಡ ಸಾಮಾನ್ಯ ಎಂಬಂತಾಗಿದೆ.

 

ಕೆಜಿಎಫ್ ಚಾಪ್ಟರ್ 1, ಅವನೇ ಶ್ರೀಮನ್ನಾರಾಯಣ ನಂತರ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ತಯಾರಾಗಿದ್ದು ಇಂದು ಟ್ರೈಲರ್ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಹೆಸರು ‘ಗಮನಂ’, ಏಕ ಕಾಲಕ್ಕೆ ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಭಾಷೆಯಲ್ಲಿ ತಯಾರಾಗಿದೆ. ಗಮನಂ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ಹಿರಿಯ ನಟ ಚಾರು ಹಾಸನ್, ನಿತ್ಯ ಮೆನನ್, ಶ್ರೀಯ ಶರಣ್, ಪ್ರಿಯಾಂಕ ಜವಾಲ್ಕರ್ ಹಾಗೂ ಮುಂತಾದವರು ನಟಿಸಿದ್ದಾರೆ.

 

ಇಂದು ಗಮನಂ ಸಿನಿಮಾದ ಟ್ರೈಲರ್ ಬಿಡುಗಡೆಯಾಗುತ್ತಿದ್ದು, ಕನ್ನಡ ಟ್ರೈಲರ್ ಅನ್ನು ಹ್ಯಾಟ್ರಿಕ್ ಹೀರೋ ಶಿವ ರಾಜ್ ಕುಮಾರ್ ಬಿಡುಗಡೆ ಮಾಡಲಿರುವುದು ವಿಶೇಷ. ಗಮನಂ ಸಿನಿಮಾಗೆ ಸ್ವರ ಮಾಂತ್ರಿಕ ಇಳಯರಾಜ ಅವರ ಸಂಗೀತವಿದೆ. ಈ ಸಿನಿಮಾವನ್ನು ಮಹಿಳಾ ನಿರ್ದೇಶಕಿ ಸುಜನಾ ರಾವ್ ನಿರ್ದೇಶನ ಮಾಡಿದ್ದಾರೆ. ಕ್ರಿಯಾ ಫಿಲ್ಮ್ಸ್ ಕಾರ್ಪ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ರಮೇಶ್ ಕರುತೂರಿ, ವೆಂಕಿ ಪುಶದಾಪು, ಮತ್ತು ಜ್ಞಾನಶೇಖರ್ ಈ ಸಿನಿಮಾ ನಿರ್ಮಾಪಕರು.
ಸಿನಿಮಾದಲ್ಲಿನ ಪ್ರತಿಯೊಂದು ಪಾತ್ರವೂ ಪ್ರೇಕ್ಷಕರ ಮನಸ್ಸಿಗೆ ಕನೆಕ್ಟ್ ಆಗಲಿದೆಯಂತೆ. ಅಂತಹ ಕಥಾವಸ್ತು ಹೊಂದಿರುವ ಸಿನಿಮಾ ಗಮನಂ.

Trending

To Top