ರಾಜ್ಯದಲ್ಲಿ ನ.25 ರವರೆಗೂ ಭಾರಿ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ…!

Follow Us :

ಈ ವರ್ಷದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಅನೇಕ ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿದೆ. ರೈತ ಸಂಕಷ್ಟದಲ್ಲಿದ್ದಾನೆ. ಬೇಸಿಗೆಯಲ್ಲಿ ನೀರಿನ ಅಭಾವ ಕಾಡಬಹುದೆಂಬ ಆತಂಕ ಸಹ ಮನೆ ಮಾಡಿದೆ. ಈ ನಡುವೆ ರಾಜ್ಯದ ಕೆಲವು ಕಡೆ ಮಳೆಯಾಗುತ್ತಿದೆ. ಇದೀಗ ಬೆಂಗಳೂರು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ  ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೊಂದು ಜಿಲ್ಲೆಗೆಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಂತೂ ಭಾರಿ ಮಳೆಯಾಗಲಿದೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಸಹ ಕೆಲವೊಂದು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಇದೀಗ ಮತ್ತೆ ಮಳೆಯ ಮುನ್ಸೂಚನೆ ದೊರೆತಿದೆ. ಈ ಮಳೆ ನ.25 ರವರೆಗೂ ಸುರಿಯಲಿದೆ ಎಂದು ಹೇಳಲಾಗುತ್ತಿದೆ.

ಇನ್ನೂ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ರಾಮನಗರ, ಕೊಡುಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆಯಂತೆ. ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಹ ಮಳೆಯಾಗುವ ಸೂಚನೆ ಇದೆ ಎನ್ನಲಾಗಿದೆ. ಇನ್ನೂ ಹೆಚ್ಚು ಮಳೆಯಾಗುವಂತಹ ಜಿಲ್ಲೆಗಳ ಜಿಲ್ಲಾಡಳಿತಗಳು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.