ಮೂರು ರಾಜ್ಯಗಳ ಹಲವು ಕಡೆ ಭಾರಿ ಮಳೆ ನಿರೀಕ್ಷೆ, ಹವಾಮಾನ ಇಲಾಖೆ ಮುನ್ಸೂಚನೆ…!

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಹಲವು ಕಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಮಿಳುನಾಡು, ಕೇಳರ, ಕರ್ನಾಟಕದ ದಕ್ಷಿಣ ಒಳನಾಡಿ ಹಲವು ಕಡೆ, ಪುದುಚೆರಿ, ಕಾರೈಕಲ್, ಲಕ್ಷದ್ವೀಪಗಳಲ್ಲಿ…

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಹಲವು ಕಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಮಿಳುನಾಡು, ಕೇಳರ, ಕರ್ನಾಟಕದ ದಕ್ಷಿಣ ಒಳನಾಡಿ ಹಲವು ಕಡೆ, ಪುದುಚೆರಿ, ಕಾರೈಕಲ್, ಲಕ್ಷದ್ವೀಪಗಳಲ್ಲಿ ಭಾರಿ ಮಳೆಯಾಗುವ ಸಾದ್ಯತೆಯಿದೆ ಎಂದು ಹೇಳಲಾಗಿದೆ.

ಕರಾವಳಿ ಆಂಧ್ರ, ರಾಯಲಸೀಮಾ, ಯಾನಂ ಹಾಗೂ ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆಯಂತೆ. ಅಂಡಮಾನ್ ನಿಕೋಬಾರ್‍ ದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗಲಿದೆ. ಮಧ್ಯ ಮಹಾರಾಷ್ಟ್ರ, ಛತ್ತೀಸ್ ಗಢ, ತೆಲಂಗಾಣ, ಉತ್ತರ ಒಳನಾಡು, ಕೊಂಕಣ-ಗೋವಾ, ಒಡಿಶಾ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎನ್ನಲಾಗಿದೆ. ಈಶಾನ್ಯ ಮಾನ್ಸೂನ್ ಚುರುಕುಗೊಂಡ ಹಿನ್ನೆಲೆಯಲ್ಲಿ ಕೇರಳದಲ್ಲಿ ಕಳೆದ ಶುಕ್ರವಾರದಿಂದ ಭಾರಿ ಮಳೆಯಾಗುತ್ತಿದೆ. ಇಡುಕ್ಕಿ, ಕೋಝಿಕ್ಕೋಡ್ ಮತ್ತು ವಯನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವ ಕಾರಣ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನ.7ರವರೆಗೂ ಕೇರಳದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಇನ್ನೂ ತಮಿಳುನಾಡಿನಲ್ಲೂ ಸಹ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕರಾವಳಿಯ ಕೆಲವು ಜಿಲ್ಲೆಗಳು ಹಾಗೂ ಪಶ್ವಿಮ ಘಟ್ಟ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಬಹುದು ಎನ್ನಲಾಗಿದ್ದು, ಸೋಮವಾರದವರೆಗೂ ಭಾರಿ ಮಳೆಯಾಗಬಹುದೆಂದು ಹೇಳಲಾಗಿದೆ. ಇನ್ನೂ ನ.7 ರವರೆಗೂ ಮಳೆ ಇದ್ದರೂ, ಅದರ ತೀವ್ರತೆಯು ಕ್ರಮೇಣ ಕಡಿಮೆಯಾಗಲಿದೆ ಎಂದು ಚೆನೈ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ ಎನ್ನಲಾಗಿದೆ.