ಪ್ರವಾಸದಲ್ಲಿ ವಿದ್ಯಾರ್ಥಿಯೊಂದಿಗೆ ರೊಮ್ಯಾನ್ಸ್ ಮಾಡಿದ ಶಿಕ್ಷಕಿಯನ್ನು ಅಮಾನತ್ತು ಮಾಡಿದ ಶಿಕ್ಷಣ ಇಲಾಖೆ….!

Follow Us :

ಡಿಸೆಂಬರ್‍ ಮಾಹೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ಪ್ರವಾಸಗಳನ್ನು ಕೈಗೊಳ್ಳುವುದು ಸಾಮಾನ್ಯವಾಗಿರುತ್ತದೆ. ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಸಹ ಶಾಲಾ ಪ್ರವಾಸಕ್ಕೆ ಹೋಗುತ್ತಾರೆ. ಅದೇ ರೀತಿ ಪ್ರವಾಸಕ್ಕೆ ಹೋದ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾನ್ಸ್ ಮಾಡಿದ ಕಾರಣದಿಂದಾಗಿ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದೆ.

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಪ್ರೌಢಶಾಲಾ ವಿದ್ಯಾರ್ಥಿಯೊಂದಿಗೆ ರೊಮ್ಯಾನ್ಸ್ ಮಾಡಿ ಆ ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೊಗಳು ವೈರಲ್ ಆಗುತ್ತಿದ್ದಂತೆ ಗ್ರಾಮಸ್ಥರು ಶಿಕ್ಷಕಿಯ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಜೊತೆಗೆ ಈ ಬಗ್ಗೆ ಮಾದ್ಯಮಗಳಲ್ಲಿಯೂ ಸಹ ಸುದ್ದಿ ಪ್ರಕಟಗೊಂಡಿದ್ದು, ಬಳಿಕ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಭಾರಿ ಮುಖ್ಯ ಶಿಕ್ಷಕಿ ಪುಷ್ಪಲತಾ ಎಂಬುವವರನ್ನು ಅಮಾನತ್ತು ಗೊಳಿಸಿ ಆದೇಶ ಹೊರಡಿಸಿದೆ.

ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ತನ್ನ ಮಗನ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಆತನೊಂದಿಗೆ ರೊಮ್ಯಾಂಟಿಕ್ ಆಗಿ ವರ್ತನೆ ಮಾಡಿದ್ದಾರೆ. ಈ ಸಂಬಂಧ ವಿಡಿಯೋ ಹಾಗೂ ಪೊಟೋಗಳನ್ನು ಸಹ ಚಿತ್ರೀಕರಣ ಮಾಡಲಾಗಿದೆ. ಈ ಪೊಟೋಗಳು ಸೋರಿಕೆಯಾಗಿ ಪೋಷಕರು ಹಾಗೂ ಗ್ರಾಮಸ್ಥರ ಆಕ್ರೋಷಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿಯೊಂದಿಗೆ ಆಕೆ ವಿವಿಧ ಭಂಗಿಗಳಲ್ಲಿ ಪೊಟೋ ತೆಗೆಸಿಕೊಂಡಿದ್ದಾರೆ. ಇದು ಸಾಲದು ಎಂಬಂತೆ ವಿದ್ಯಾರ್ಥಿ ಶಿಕ್ಷಕಿಯನ್ನು ಮುದ್ದಾಡಿದ್ದರೇ, ಶಿಕ್ಷಕಿ ಸಹ ವಿದ್ಯಾರ್ಥಿಗೆ ಮುತ್ತಿಟ್ಟಿದ್ದಾರೆ. ಈ ಪೊಟೋಗಳು ಎಲ್ಲಾ ಕಡೆ ಹರಿದಾಡಿದ್ದು, ಶಿಕ್ಷಕಿಯ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದರು. ಸುದ್ದಿ ಮಾದ್ಯಮಗಳಲ್ಲಿ ಸುದ್ದಿ ಪ್ರಕಟಗೊಂಡ ಬಳಿಕ ಹಾಗೂ ಸ್ಥಳೀಯರ ಆಕ್ರೋಷಕ್ಕೆ ಮಣಿದ ಶಿಕ್ಷಣ ಇಲಾಖೆ ಮುಖ್ಯ ಶಿಕ್ಷಕಿಯನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.