News

ವಿಶೇಷ ತರಗತಿಯ ನೆಪದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಶಿಕ್ಷಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ದೂರು ದಾಖಲು……!

ಕಾನೂನು ಎಷ್ಟೇ ಕಠಿಣವಾದರೂ ಬಾಲಕೀಯರಿಂದ ವೃದ್ದರವರೆಗೂ ಲೈಂಗಿಕ ದೌರ್ಜನ್ಯಗಳು ನಡೆಯುತ್ತಲೇ ಇರುತ್ತವೆ. ಶಾಲೆಯನ್ನು ದೇವಾಲಯವೆಂದೇ ಕರೆಯಲಾಗುತ್ತದೆ. ಶಿಕ್ಷಕರನ್ನು ತಂದೆ ತಾಯಿ ಹಾಗೂ ದೇವರಿಗೆ ಸಮ ಎಂದೇ ಕರೆಯಲಾಗುತ್ತದೆ. ಆದರೆ ಇಲ್ಲೊಬ್ಬ ಶಾಲೆಯ ಮುಖ್ಯ ಶಿಕ್ಷಕ ಸ್ಪೇಷಲ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಯಾದಗರಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕ ಹಣಮೇಗೌಡ ಎಂಬಾತನೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಾಗಿದ್ದಾನೆ, ಆರೋಪಿ ಹಣಮೇಗೌಡ ಕಳೆದ ನಾಲ್ಕು ವರ್ಷದಿಂದ ಶಾಲೆಯ ಮುಖ್ಯ ಶಿಕ್ಷಕನಾಗಿದ್ದಾನೆ. ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತನೆ ಮಾಡುವುದು, ಲೈಂಗಿಕ ಕಿರುಕುಳ ನೀಡುವುದನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದ ಎನ್ನಲಾಗಿದೆ. ಜೊತೆಗೆ ಸ್ಪೇಷಲ್ ಕ್ಲಾಸ್ ನೆಪದಲ್ಲೂ ಸಹ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದ ಎನ್ನಲಾಗಿದೆ. ಹಲವು ವಿದ್ಯಾರ್ಥಿನಿಯರು ಶಿಕ್ಷಕ ಹಣಮೇಗೌಡನಿಂದ ಲೈಂಗಿಕ ಕಿರುಕುಳಕ್ಕೆ ತುತ್ತಾಗಿರುವ ಆರೋಪ ಸಹ ಕೇಳಿಬಂದಿದೆ.

ಇನ್ನೂ ವಿದ್ಯಾರ್ಥಿನಿಯರೋಂದಿಗೆ ಅನುಚಿತ ವರ್ತನೆ ಮಾಡಿದ ಆರೋಪದಡಿ ಸಿಇಒ ಗರೀಮಾ ಪನ್ವಾರ್‍ ರವರು ಆರೋಪಿ ಹಣಮೇಗೌಡನಿಗೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬಳಿಕ ನಾಲ್ಕು ಜನ ಶಿಕ್ಷಣ ಇಲಾಖೆಯ ಅಧಿಕಾರಗಳ ತಂಡ ಶಾಲೆಗೆ ಭೇಟಿ ನೀಡಿ ಮಕ್ಕಳನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಶಾಲೆಯ ವಿದ್ಯಾರ್ಥಿನಿಯರು ಶಿಕ್ಷಕ ನೀಡಿದ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಾರೆ. ವರದಿಯ ಬಳಿಕ ಯಾದಗಿರಿ ಡಿಡಿಪಿಐ ಮಂಜುನಾಥ್ ರವರು ಶಿಕ್ಷಕ ಹಣಮೇಗೌಡ ವಿರುದ್ದ ಪೋಕ್ಸೋ ಕಾಯ್ದಯಡಿ ಕೇಸ್ ದಾಖಲು ಮಾಡಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Most Popular

To Top