News

ಹಿಜಾಬ್ ಧರಿಸಿದ ಮಹಿಳೆಯನ್ನು ಭಾರತ ದೇಶದ ಪ್ರಧಾನಿಯಾಗಿ ನೋಡುವಾಸೆ ಇದೆ ಎಂದ ಓವೈಸಿ….!

ಅಲ್ ಇಂಡಿಯಾ ಮಜ್ಲಿಸ್ ಇತೆಹದುಲ್ ಮುಸ್ಲಿಮೀನ್ (AIMIM) ಪಕ್ಷದ ಅಧ್ಯಕ್ಷ ಓವೈಸಿ ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಇದೀಗ ಮತ್ತೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಹಿಜಾಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಲು ಬಯಸುತ್ತೇನೆ ಎಂದು ಮುಸ್ಲೀಂ ಮಹಿಳೆಯೊಬ್ಬರು ಭಾರತದ ಪ್ರಧಾನಿಯಾಗಬೇಕೆಂಬ ಆಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಮತ್ತೆ ಅಭ್ಯರ್ಥಿಯಾಗಿ ಅಸಾದುದ್ದೀನ್ ಓವೈಸಿ ಕಣಕ್ಕಿಳಿದಿದ್ದಾರೆ. ಜೊತೆಗೆ ಲೋಕಸಭಾ ಚುನಾವಣೆ ನಿಮಿತ್ತ ದೇಶದ ಹಲವು ಕ್ಷೇತ್ರಗಳಲ್ಲಿ ಎಐಎಂಐಎಂ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಹಾರದ ಕಿಶನ್ ಗಂಜ್ ಲೋಕಸಭಾ ಕ್ಷೇತ್ರದಿಂದ ತನ್ನ ಪಕ್ಷದಿಂದ ಕಣ್ಣಕ್ಕಿಳಿದಿರುವ ಅಭ್ಯರ್ಥಿ ಅಖ್ತರುಲ್ ಇಮ್ರಾನ್ ಪರ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ಸಂಬಂಧ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು ನಾನು ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.  ಇದೇ ಸಮಯದಲಿ ನರೇಂದ್ರ ಮೋದಿ ವಿರುದ್ದ ತೀವ್ರ ವಾಗ್ದಾಳಿ ಸಹ ನಡೆಸಿದ್ದಾರೆ. ಬಿಜೆಪಿ ಮುಸ್ಲೀಂರ ಹಿಜಾಬ್ ಧರಿಸುವ ಸ್ವಾತಂತ್ಯ್ರವನ್ನು ಕಿತ್ತುಕೊಳ್ಳಲು ಯತ್ನಿಸುತ್ತಿದೆ. ನಾವು ಹಿಜಾಬ್, ಮುಸುಕು ಹಾಗೂ ಚಾದರ ಧರಿಸುವ ಮುಸ್ಲೀಂ ಮಹಿಳೆಯರ ಹಕ್ಕನ್ನು ರಕ್ಷಿಸಲು ಮುಂದಾಗುತ್ತೇವೆ ಎಂದು ಹೇಳಿದ್ದಾರೆ.

ಇನ್ನೂ ಕಿಶನ್ ಗಂಜ್ ಕ್ಷೇತ್ರದಲ್ಲಿ ಕಾಂಗ್ರೇಸ್ ತನ್ನ ಹಾಲಿ ಸಂಸದ ಮೊಹಮದ್ ಜಾವೇದ್ ರವರಿಗೆ ಟಿಕೆಟ್ ನೀಡಿದೆ. ಎನ್.ಡಿ.ಎ ಮೈತ್ರಿಕೂಟವೂ ಜೆಡಿಯುನ ಮುಜಾಹಿದ್ ಅಲಂ ರವರಿಗೆ ಬೆಂಬಲ ಘೋಷಣೆ ಮಾಡಿದೆ. ಆದ್ದರಿಂದ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಯಿದೆ. ಎಲ್ಲರೂ ತಮ್ಮ ಅಭ್ಯರ್ಥಿಯ ಗೆಲುವಿಗೆ ಭರದಿಂದ ಪ್ರಚಾರದಲ್ಲಿ ತೊಡಗಿದ್ದಾರೆ. ಏ.26 ರಂದು 2ನೇ ಹಂತದ ಚುನಾವನೆ ನಡೆಯಲಿದೆ.

Most Popular

To Top