News

ಮಂಡ್ಯದಲ್ಲಿ ನನ್ನ ಸ್ಪರ್ಧೆ ಖಚಿತ ಎಂದ ಸಂಸದೆ ಸುಮಲತಾ, ಮತಷ್ಟು ಕುತೂಹಲ ಹುಟ್ಟಿಸಿದ ಸುಮಲತಾ ಹೇಳಿಕೆ…..!

ದೇಶದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಸೀಟುಗಳು ಹೆಚ್ಚು ಗೆಲ್ಲಬೇಕು ಎಂದು ಮೈತ್ರಿ ಕೂಟಗಳೂ ಸಹ ರಚನೆಯಾಗಿದೆ. ಕರ್ನಾಟಕದಲ್ಲೂ ಸಹ ಲೋಕಸಭಾ ಚುನಾವಣೆಯ ಹವಾ ಜೋರಾಗಿಯೆ ನಡೆಯುತ್ತಿದೆ. ಅದರಲ್ಲೂ ಮಂಡ್ಯ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರ ಎಂದೇ ಹೇಳಬಹುದಾಗಿದೆ. ಸದ್ಯ ಮಂಡ್ಯ ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಈ ಬಾರಿಯೂ ಸಹ ಮಂಡ್ಯದಿಂದಲೇ ಸ್ಪರ್ಧೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಇದೀಗ ಚರ್ಚೆ ಜೋರಾಗಿ ನಡೆಯುತ್ತಿದೆ.

ಕರ್ನಾಟದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ತುಂಬಾನೆ ಸದ್ದು ಮಾಡುತ್ತಿದೆ. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಸಹ ಭಾರಿ ಸದ್ದು ಮಾಡಿದ್ದು, ಇದೀಗ ಮತ್ತೆ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ ಜೆಡಿಎಸ್ ಎನ್.ಡಿ.ಎ ಕೂಟ ಸೇರಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಕ್ಷೇತ್ರಕ್ಕಾಗಿ ಜೆಡಿಎಸ್ ಪಟ್ಟು ಹಿಡಿದಿದೆ ಎನ್ನಲಾಗಿದೆ. ಮಂಡ್ಯದಲ್ಲಿ ಜೆಡಿಎಸ್ ಪಕ್ಷ ಬಲಿಷ್ಟವಾಗಿದೆ. ಈ ಕಾರಣದಿಂದ ಜೆಡಿಎಸ್ ಪಕ್ಷ ಮಂಡ್ಯ ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಇನ್ನೂ ಈಗಾಗಲೇ ಸುಮಲತಾ ಬಿಜೆಪಿಯಿಂದ ಸ್ಪರ್ಧೆ ಮಾಡಲು ತೆರೆಮರೆಯಲ್ಲಿ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಕಳೆದ ಬಾರಿ ಕುಮಾರಸ್ವಾಮಿ ತಮ್ಮ ಮಗನನ್ನು ಸುಮಲತಾ ವಿರುದ್ದ ಕಣಕ್ಕಿಳಿಸಿ ಸೋತಿದ್ದು, ಇದೀಗ ಮತ್ತೆ ಮಂಡ್ಯ ಕ್ಷೇತ್ರದ ಸೀಟಿಗಾಗಿ ಪಟ್ಟು ಹಿಡಿದಿದೆ. ಬಿಜೆಪಿ ಸಹ ಜೆಡಿಎಸ್ ಗೆ ಸ್ಥಾನ ಬಿಟ್ಟುಕೊಡಲು ಒಪ್ಪುವ ಸಾಧ್ಯತೆ ಸಹ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ಇದೀಗ ಮಂಡ್ಯದಲ್ಲಿ ಸುಮಲತಾ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ಮಂಡ್ಯ ಬಿಡುವ ಮಾತೇ ಇಲ್ಲ. ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಕೊನೆಯವರೆಗೂ ಹೊರಾಡುತ್ತೇನೆ. ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು, ನನ್ನ ಸ್ಪರ್ಧೆ ಖಚಿತ ಎಂದು ಹೇಳಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲ ಪಡಿಸುವ ಕೆಲಸಗಳನ್ನು ಸಾಕಷ್ಟು ಮಾಡಿದ್ದೇನೆ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಟಿಕೆಟ್ ಅಂತಿಮವಾಗುವವರೆಗೂ ಕಾದು ನೋಡುತ್ತೇನೆ. ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ಸಾಧ್ಯತೆ ಇದೆ. ನನಗಾಗಿ ಟಿಕೆ ಕೇಳ್ತಾ ಇಲ್ಲ, ಮಂಡ್ಯ ಜನತೆಗಾಗಿ ಹೋರಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಸದ್ಯ ಕರ್ನಾಟಕದಲ್ಲಿ ಮಂಡ್ಯ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರವಾಗಿದೆ ಎಂದು ಹೇಳಲಾಗುತ್ತಿದೆ. ಇತ್ತ ಕಾಂಗ್ರೇಸ್ ಪಕ್ಷ ಕಾದು ನೋಡುವ ತಂತ್ರ ಮಾಡುತ್ತಿದೆ. ಒಂದು ವೇಳೆ ಬಿಜೆಪಿಯಿಂದ ಸುಮಲತಾ ರವರಿಗೆ ಟಿಕೆಟ್ ಸಿಗದೇ ಇದ್ದರೇ ಕಾಂಗ್ರೇಸ್ ನಿಂದ ಆಕೆಗೆ ಟಿಕೆಟ್ ನೀಡುವ ಪ್ಲಾನ್ ಸಹ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಸುಮಲತಾ ಇದೀಗ ನೀಡಿರುವ ಹೇಳಿಕೆಗಳು ಮತಷ್ಟು ಚರ್ಚೆಗೆ ಕಾರಣವಾಗಿದೆ.

Most Popular

To Top