ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ…..!

Follow Us :

ದೇಶದ ಅನೇಕ ರಾಜ್ಯಗಳಲ್ಲಿ ಬೇಸಿಗೆ ತಾಪ ಏರುತ್ತಿದ್ದು, ಜನರು ಸಮಸ್ಯೆಗೆ ಸಿಲುಕಿದ್ದಾರೆ. ಇದೀಗ ಹವಾಮಾನ ಇಲಾಖೆ ಗುಡ್ ನ್ಯೂಸ್ ಒಂದನ್ನು ನೀಡಿದ್ದು, ಮಾ.26 ರವರೆಗೆ ದೇಶದ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ. ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ಮ ಜಮ್ಮು ಕಾಶ್ಮೀರಾ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ವ್ಯಾಫ್ತಿಯಲ್ಲಿ ಗುಡುಗು ಸಹಿತಿ ಲಘು ಮಳೆ ಅಥವಾ ಹಿಮ ಬೀಳಲಿದೆ ಎಂದು ಐಎಂಡಿ ತಿಳಿಸಿದೆ.

ಮಾ.26ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಹಿಮಾಲಯ ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲಿ ಗುಡುಗು ಹಾಗೂ ಮಿಂಚಿನೊಂದಿಗೆ ಸಾಧಾರಣ ಮಳೆಯಾಗಲಿದೆ. ಅಸ್ಸಾಂ ಹಾಗೂ ಮೇಘಾಲಯದಲ್ಲಿ ಮಾ.25 ರವರೆಗೆ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಇನ್ನೂ ಪಂಜಾಬ್ ಹಾಗೂ ಹರ್ಯಾಣದಲ್ಲಿ ಮಾಚ್ 24 ರವರೆಗೂ ಮಳೆಯಾಗಲಿದೆ. ಜಮ್ಮು ಕಾಶ್ಮೀರ, ಲಡಾಕ್, ಗಿಲ್ಗಿಟ್, ಬಾಲ್ವಿಸ್ತಾನ್, ಉತ್ತರಾಖಂಡ, ಹಿಮಾಚಲ ಪ್ರದೇಶ ಹಾಗೂ ಮುಜಫರಾಬಾದ್ ಗಳಲ್ಲಿ ಗುಡುಗು-ಮಿಂಚು ಸಹಿತಿ ಲಘು ಮಳೆ/ಹಿಮ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಐಎಂಡಿ ಈಗಾಗಲೇ ತಿಳಿಸಿದ ಮಾಹಿತಿಯಂತೆ ಈ ಬಾರಿ ಮುಂಗಾರು ಉತ್ತಮವಾಗಿರಲಿದೆಯಂತೆ. ಕಳೆದ ವರ್ಷ ಬರಗಾಲದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ತತ್ತರಿಸಿಹೋಗಿತ್ತು. ಜನ ಜಾನುವಾರುಗಳು ನೀರಿಲ್ಲದೇ ಪರದಾಡುವಂತಾಗಿದೆ. ಆದರೆ ಈ ಭಾರಿ ಮುಂಗಾರು ಮಳೆ ಚೆನ್ನಾಗಿ ಬೀಳುವ ಮುನ್ಸೂಚನೆ ಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ಮಾತ್ರವಲ್ಲದೇ ಜನರು ಸಹ ಖುಷಿಯಾಗಿದ್ದಾರೆ. ಮಳೆ ಯಾವ ರೀತಿಯಲ್ಲಿ ರೈತನಿಗೆ ಸಹಾಯ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.