Film News

ಮತ್ತೆ ಸ್ಟಾರ್ ನಟಿ ಕಾಜಲ್ ಅಗರ್ವಾಲ್ ಗರ್ಭಿಣಿಯಂತೆ, ಹಲ್ ಚಲ್ ಸೃಷ್ಟಿಸಿದ ರೂಮರ್….!

ದಕ್ಷಿಣ ಭಾರತದ ಬಹುಬೇಡಿಕೆ ನಟಿ ಹಾಗೂ ಸ್ಟಾರ್‍ ನಟಿ ಕಾಜಲ್ ಅಗರ್ವಾಲ್ ಸಿನೆಮಾಗಳಿಂದ ದೂರ ವುಳಿದರೂ ಸಹ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಇತ್ತೀಚಿಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗುವಿನೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ. ಇದೀಗ ಸೆಕೆಂಡ್ ಇನ್ನಿಂಗ್ಸ್ ಸಹ ಶುರು ಮಾಡಿರುವ ಕೆಲವೊಂದು ಕ್ರೇಜಿ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ಕಾಜಲ್ ಅಗರ್ವಾಲ್ ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿಯೊಂದು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ನಟಿ ಕಾಜಲ್ ಅಗರ್ವಾಲ್ ಕೆರಿಯರ್‍ ಚೆನ್ನಾಗಿರುವಾಗಲೇ ತನ್ನ ಬಾಲ್ಯದ ಸ್ನೇಹಿತ ಗೌತಮ್ ಕಿಚ್ಲು ಎಂಬಾತನನ್ನು ವಿವಾಹವಾದರು. ಕಳೆದ 2020 ರಲ್ಲಿ ಅವರ ವಿವಾಹ ಅದ್ದೂರಿಯಾಗಿ ನೆರವೇರಿತ್ತು. ಕಳೆದ 2022ರ ಏಪ್ರಿಲ್ ಮಾಹೆಯಲ್ಲಿ ಆಕೆ ಗಂಡು ಮಗುವಿಗೆ ಜನ್ಮನೀಡಿದರು. ಆತನಿಗೆ ನೀಲ್ ಕಿಚ್ಲು ಎಂದು ಸಹ ನಾಮಕರಣ ಮಾಡಿದ್ದು, ಆತನೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತಿದ್ದಾರೆ. ಮದುವೆ, ಮಗು ಕಾರಣದಿಂದ ಆಕೆ ಸಿನೆಮಾಗಳಿಂದ ವಿರಾಮ ತೆಗೆದುಕೊಂಡಿದ್ದರು. ಸದ್ಯ ಆಕೆ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ.  ಸೆಕೆಂಡ್ ಇನ್ನೀಂಗ್ಸ್ ನಲ್ಲೂ ಸಹ ಆಕೆ ಭಾರಿ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಕಾಜಲ್ ಅಗರ್ವಾಲ್ ರವರಿಗೆ ಸಂಬಂಧಿಸಿದ ಹೊಸ ಸುದ್ದಿಯೊಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಆ ಕಾರಣದಿಂದಲೇ ಆಕೆ ಸಿನೆಮಾಗಳಿಂದ ಬ್ರೇಕ್ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಸಹ ಕೇಳಿಬರುತ್ತಿದೆ.

ನಟಿ ಕಾಜಲ್ ಅಗರ್ವಾಲ್ ಮತ್ತೆ ಗರ್ಭಿಣಿಯಾಗಿದ್ದಾರೆ. ಆ ಕಾರಣದಿಂದಲೇ ಆಕೆ ಸಿನೆಮಾಗಳಿಂದ ಸಂಪೂರ್ಣವಾಗಿ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಜೋರಾಗಿಯೇ ಕೇಳಿಬರುತ್ತಿದೆ. ಇನ್ನೂ ಈ ಸುದ್ದಿಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ. ಆದರೆ ಸುದ್ದಿ ಮಾತ್ರ ಸಖತ್ ವೈರಲ್ ಆಗುತ್ತಿದೆ. ಕೆಲವು ದಿನಗಳ ಹಿಂದೆ ಸಹ ತನ್ನ ಮಗನ ಲಾಲನೆ ಪಾಲನೆಗಾಗಿ ಆಕೆ ಸಿನೆಮಾಗಳಿಂದ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಸಹ ಕೇಳಿಬಂದಿತ್ತು. ಇದೀಗ ಆಕೆ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಇನ್ನೂ ಈ ಬಗ್ಗೆ ಕಾಜಲ್ ಅಗರ್ವಾಲ್ ಯಾವ ರೀತಿಯಲ್ಲಿ ರಿಯಾಕ್ಟ್ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯ ಕಾಜಲ್ ಅಗರ್ವಾಲ್ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ಖ್ಯಾತ ನಿರ್ದೇಶಕ ಶಂಕರ್‍ ಹಾಗೂ ಕಮಲ್ ಹಾಸನ್ ಕಾಂಬಿನೇಷನ್ ನಲ್ಲಿ ಸೆಟ್ಟೇರಿರುವ ಇಂಡಿಯನ್-2, ನಂದಮೂರಿ ಬಾಲಕೃಷ್ಣ ರವರ ಭಗವಂತ್ ಕೇಸರಿ ಸಿನೆಮಾದಲ್ಲಿ ಸಹ ಕಾಜಲ್ ನಟಿಸುತ್ತಿದ್ದಾರೆ. ಜೊತೆಗೆ ಕಾಜಲ್ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಲೇ ಇದ್ದಾರೆ.

Most Popular

To Top