Film News

ಮಾಡರ್ನ್ ಲುಕ್ಸ್ ನಲ್ಲಿ ಮಿಂಚಿದ ಕಾಂತಾರ ಬ್ಯೂಟಿ, ಹಾಟ್ ಟ್ರೀಟ್ ನೀಡಿದ ಕಾಂತಾರ ಫೇಂ ಸಪ್ತಮಿ ಗೌಡ ….!

ಸ್ಯಾಂಡಲ್ ವುಡ್ ನಲ್ಲಿ ಇತ್ತಿಚಿಗೆ ತೆರೆಕಂಡ ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನೆಮಾ ಈಗಾಗಲೇ ದೊಡ್ಡ ಕ್ರೇಜ್ ಪಡೆದುಕೊಂಡಿದ್ದು, ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸಿನೆಮಾ ರಂಗಗಳ ಸೆಲೆಬ್ರೆಟಿಗಳಿಗೂ ಸಹ ಈ ಸಿನೆಮಾವನ್ನು ಮನಸಾರೆ ಹೊಗಳಿದ್ದಾರೆ. ಈ ಸಿನೆಮಾದಲ್ಲಿ ಗುಡ್ಡಗಾಡು ಪ್ರದೇಶದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡ ಸಪ್ತಮಿ ಗೌಡ ಇದೀಗ ಮಾಡರ್ನ್ ಲುಕ್ಸ್ ಕೊಟ್ಟಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಇನ್ನೂ ನಟಿ ಸಪ್ತಮಿ ಗೌಡ ಕಾಶ್ಮೀರಿ ಫೈಲ್ಸ್ ಫೇಂ ನ ವಿವೇಕ್ ಅಗ್ನಿಹೋತ್ರಿರವರ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇತ್ತಿಚಿಗಷ್ಟೆ ಆಕೆ ಚಿತ್ರತಂಡವನ್ನು ಸಹ ಸೇರಿಕೊಂಡಿದ್ದಾರೆ ಎನ್ನಲಾಗಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ವಾಕ್ಸಿನ್ ವಾರ್‍ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ವಿವೇಕ್ ಅಗ್ನಿಹೋತ್ರಿ ಕಾಂತಾರ ಸಿನೆಮಾ ನೋಡಿ ಅದರಲ್ಲಿ ಸಪ್ತಮಿ ಗೌಡ ನಟನೆಯನ್ನು ಮೆಚ್ಚಿದ್ದಾರೆ ಜೊತೆಗೆ ಅವರ ಸಿನೆಮಾಗೆ ಆಕೆ ಸ್ಯೂಟ್ ಆಗುತ್ತಾರೆ ಎಂದು ಆಕೆಯನ್ನು ಸಿನೆಮಾಗಾಗಿ ಆಯ್ಕೆ ಮಾಡಿದ್ದಾರೆ ಎಂದು ಈ ಹಿಂದೆ ಅವರೇ ಹೇಳಿದ್ದರು. ಸದ್ಯ ಬಾಲಿವುಡ್ ಸಿನೆಮಾದಲ್ಲಿ ಬ್ಯುಸಿಯಾಗಿರುವ ಸಪ್ತಮಿ ಗೌಡ ಹಾಟ್ ಪೋಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ನಟಿ ಸಪ್ತಮಿ ಗೌಡ ಪಾಪ್ ಕಾರ್ನ್ ಮಂಕಿ ಟೈಗರ್‍ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಸಪ್ತಮಿ ಗೌಡ ರಿಷಭ್ ಶೆಟ್ಟಿಯವರ ಕಾಂತಾರ ಸಿನೆಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್‍ ಆದರು. ಕಾಂತಾರ ಸಿನೆಮಾದ ಬಳಿಕ ಸಪ್ತಮಿ ಗೌಡ ರವರಿಗೆ ಭಾರಿ ಆಫರ್‍ ಗಳು ಹುಡುಕಿಕೊಂಡು ಬರುತ್ತಿವೆ. ಈ ಹಾದಿಯಲ್ಲೇ ಆಕೆ ವಿವೇಕ್ ಅಗ್ನಿಹೋತ್ರಿ ರವರ ದಿ ವ್ಯಾಕ್ಸಿನ್ ವಾರ್‍ ಸಿನೆಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಕಾಳಿ ಎಂಬ ಕನ್ನಡ ಸಿನೆಮದಲ್ಲಿ ಅಭಿಷೇಕ್ ಅಂಬರೀಶ್ ಜೊತೆಗೂ ನಟಿಸುತ್ತಿದ್ದಾರೆ. ಇನ್ನೂ ಸಾಲು ಸಾಲು ಸಿನೆಮಾಗಳ ನಡುವೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರ ನಿದ್ದೆಗೆಡಿಸುತ್ತಿರುತ್ತಾರೆ.

ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಸಪ್ತಮಿ ಗೌಡ ಇದೀಗ ಕೆಲವೊಂದು ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಬಿಳಿ ಬಣ್ಣದ ಟಾಪ್ ಮೇಲೆ ಗ್ರೇ ಕಲರ್‍ ಕೋಟ್ ಧರಿಸಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಪಿಂಕ್ ಹಾಗೂ ವೈಟ್ ಮಿಕ್ಸ್ ಕಲರ್‍ ಇರುವಂತಹ ಶೂ ಧರಿಸಿ ತುಂಬಾ ಮುದ್ದಾಗಿ ಕಾಣಿಸಿಕೊಳ್ಳುವುದರ ಜೊತೆಗೆ ಹಾಟ್ ಆಗಿಯೂ ಕಾಣಿಸಿಕೊಂಡಿದ್ದಾರೆ. ಇನ್ನೂ ಮಾಡರ್ನ್ ಲುಕ್ ನಲ್ಲಿ ಕಾಣಿಸಿಕೊಂಡ ಸಪ್ತಮಿ ಗೌಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳೂ ಸಹ ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

Most Popular

To Top