News

ಕಾಂಗ್ರೇಸ್ ಸರ್ಕಾರಕ್ಕೆ ಶಾಕ್ ಕೊಟ್ಟ ಮದ್ಯ ಪ್ರಿಯರು, ಎಣ್ಣೆ ಮಾರಾಟದಲ್ಲಿ ಭಾರಿ ಕುಸಿತ…..!

ಕಳೆದ ನಾಲ್ಕು ವರ್ಷಗಳ ಹಿಂದೆ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ಶೇ.20ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿತ್ತು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಹಣದ ಕ್ರೂಢೀಕರಣ ಮಾಡುವ ಹಿನ್ನೆಲೆಯಲ್ಲಿ ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿತ್ತು. ಆದರೆ ಮದ್ಯ ಪ್ರಿಯರು ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ಮದ್ಯ ಮಾರಾಟದಲ್ಲಿ ಭಾರಿ ಕುಸಿತ ಕಂಡಿದ್ದು, ಸರ್ಕಾರಕ್ಕೆ ಬರುವ ಆದಾಯ ಸಹ ಕಡಿಮೆಯಾಗಿದೆ. ಇದೀಗ ಮದ್ಯ ಮಾರಾಟ ಪ್ರಮಾಣ ಹೆಚ್ಚಳ ಮಾಡುವಂತೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಆಡಳಿತಕ್ಕೆ ಬರುವ ಮುನ್ನಾ ಚುನಾವಣೆ ಪ್ರಚಾರದ ಸಮಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ತಿಳಿಸಿತ್ತು. ಅದರಂತೆ ಅಧಿಕಾರಕ್ಕೆ ಬಂದ ಮೇಲೆ ಹಂತ ಹಂತವಾಗಿ ಗ್ಯಾರಂಟಿಗಳನ್ನು ಈಡೇರಿಸುತ್ತಾ ಸಹ ಬರುತ್ತಿದೆ. ಗ್ಯಾರಂಟಿ ಯೋಜನೆಗಳ ಜಾರಿಗೆ ಆದಾಯ ಕ್ರೂಡಿಕರಣದತ್ತ ಸರ್ಕಾರ ಮುಂದಾಗಿದ್ದು, ಅದರಂತೆ ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಇಂದು ಸಭೆ ನಡೆಸಿದರು. ಸಭೆಯಲ್ಲಿ ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾರೆ. ಈ ವೇಲೆ ವಾಣಿಜ್ಯ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಮುಂದಿನ ತ್ರೈಮಾಸಿಕದಲ್ಲಿ ಆದಾಯ ಸಂಗ್ರಹಿಸಲು ಕ್ರಮ ವಹಿಸುವಂತೆ ತೆರಿಗೆ ಸಂಗ್ರಹದ ಗುರಿ ತಲುಪುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಇನ್ನೂ ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ, ಇಲಾಖೆಯ ಪ್ರಗತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ತೆರಿಗೆ ಸಂಗ್ರಹ ಕಡಿಮೆಯಾಗಿರುವ ಮಾಹಿತಿ ಲಭ್ಯವಾಗಿದೆ. ಇದೇ ವೇಳ ಅಬಕಾರಿ ಸುಂಕ ಹೆಚ್ಚಳ ಮಾಡಿದ್ದರಿಂದ ಮದ್ಯ ಮಾರಾಟ ಸಹ ಇಳಿಮುಖ ಕಂಡಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಮದ್ಯ ಮಾರಾಟ ಮಾಡಲು ಅಧಿಕಾರಿಗಳು ಕ್ರಮ ವಹಿಸಬೇಕು. ಜೊತೆಗೆ ಗುರಿಗಿಂತ ಹೆಚ್ಚಿನ ಆದಾಯ ಸಂಗ್ರಕ್ಕೆ ಅಧಿಕಾರಿಗಳು ಪ್ರಯತ್ನಗಳನ್ನು ನಡೆಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ಸಹ ನೀಡಿದ್ದಾರೆ.

Most Popular

To Top