News

ವಸತಿ ಶಾಲಾ – ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಯಿಲ್ಲ, ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ವಾಪಸ್ ಪಡೆದ ಸರ್ಕಾರ…..!

ಕರ್ನಾಟಕದಲ್ಲಿ ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಬ್ರೇಕ್ ಹಾಕಿದೆ. ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ವಸತಿ ಶಾಲಾ – ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸದಂತೆ ಸರ್ಕಾರದ ಸೂಚನೆಯ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿತ್ತು. ಸುತ್ತೋಲೆ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಈ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆದುಕೊಂಡಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳಾದ ಯುಗಾದಿ, ರಂಜಾನ್, ಕ್ರಿಸ್ ಮಸ್, ಸಂಕ್ರಾಂತಿ ಈದ್ ಮಿಲಾದ್ ಸೇರಿದಂತೆ ಯಾವುದೇ ಧರ್ಮದ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ. ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ ಹಾಗೂ ಕೆಲವು ಮಹಾಪುರುಷರ ಜಯಂತಿ ಸೇರಿದಂತೆ 10 ಆಚರಣೆಗಳನ್ನು ಮಾತ್ರ ಆಚರಣೆ ಮಾಡುವಂತೆ ಸುತ್ತೋಲೆ ಹೊರಡಿಸಲಾಗಿತ್ತು. ಅದರಂತೆ ಗಣರಾಜ್ಯೋತ್ಸವ ಸ್ವಾತಂತ್ರ್ಯ ದಿನಾಚರಣೆ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ, ಅಂಬೇಡ್ಕರ್ ಜಯಂತಿ, ವಾಲ್ಮೀಕಿ ಜಯಂತಿ, ಕನಕದಾಸರ ಜಯಂತಿ, ಬಸವ ಜಯಂತಿ, ಸಂವಿಧಾನ ದಿನಾಚರಣೆ ಹಾಗೂ ಯೋಗ ದಿನಾಚರಣೆಗಳನ್ನು ಮಾತ್ರ ಆಚರಣೆ ಮಾಡುವಂತೆ ಸುತ್ತೋಲೆ ಹೊರಡಿಸಿತ್ತು. ಇನ್ನೂ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಖಂಡಿಸಿದ್ದು, ಮಾದ್ಯಮಗಳಲ್ಲಿ ಸಹ ಸುದ್ದಿ ಪ್ರಕಟವಾಗಿತ್ತು.

ಇನ್ನೂ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ನಿರ್ಬಂಧದ ಆದೇಶದ ಬಗ್ಗೆ ಆಕ್ರೋಷ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸರ್ಕಾರ ಈ ಆದೇಶವನ್ನು ಹಿಂಪಡೆದಿದೆ. ಈ ಆದೇಶವನ್ನು ಸಚಿವ ಹೆಚ್.ಸಿ.ಮಹದೇವಪ್ಪ ರವರ ಸೂಚನೆಯ ಮೇರೆಗೆ ಹೊರಡಿಸಲಾಗಿತ್ತು ಎನ್ನಲಾಗಿದೆ. ಈ ಕುರಿತು ಬಿಜೆಪಿ ಎಂ.ಎಲ್.ಸಿ ರವಿಕುಮಾರ್‍ ಸಹ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಈ ನಡೆಯ ವಿರುದ್ದ ಆಕ್ರೋಷ ಹೊರಹಾಕಿದ್ದರು. ಚುನಾವಣಾ ದೃಷ್ಟಿಯಿಂದ ಈ ರೀತಿಯ ಆದೇಶ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಕಿಡಿಕಾರಿದ್ದರು.

Most Popular

To Top