ವಿವಾದಾತ್ಮಕ ಹೇಳಿಕೆ ಕೊಟ್ಟ ಕರ್ನಾಟಕ ಗೃಹ ಸಚಿವ, ಹಿಂದೂ ಧರ್ಮ ಯಾವಾಗ, ಯಾರಿಗೆ ಹುಟ್ಟಿತು ಎಂದ ಪರಮೇಶ್ವರ್…….!

Follow Us :

ದೇಶದಲ್ಲಿ ಹಿಂದೂ ಧರ್ಮದ ಬಗ್ಗೆ ಆಗಾಗ ಕೆಲವೊಂದು ಹೇಳಿಕೆಗಳ ಕಾರಣದಿಂದ ಭಾರಿ ಮಟ್ಟದ ಚರ್ಚೆ ನಡೆಯುತ್ತಿರುತ್ತದೆ. ಕೆಲವು ದಿನಗಳ ಹಿಂದೆಯಷ್ಟೆ ತಮಿಳುನಾಡಿನ ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸಹ ಸನಾತನ ಧರ್ಮದ ಬಗ್ಗೆ ಕೆಲವೊಂದು ಹೇಳಿಕೆಗಳನ್ನು ನೀಡಿದ್ದರು. ಇದೀಗ ಕರ್ನಾಟಕದ ಗೃಹ ಸಚಿವ ಡಾ.ಜಿ.ಪರಮೇಶ್ವರ್‍ ಸಹ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ರವರ ಪುತ್ರ ಸಚಿವ ಉದಯನಿಧಿ ಸ್ಟಾಲಿನ್ ಕೆಲವು ದಿನಗಳ ಹಿಂದೆಯಷ್ಟೆ ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಆ ಹೇಳಿಕೆ ಕಾರಣದಿಂದ ಇಡೀ ದೇಶದಾದ್ಯಂತ ಆಕ್ರೋಷ ವಿವಾದ ಹುಟ್ಟಿಹಾಕಿದೆ. ಅನೇಕರು ಉದಯನಿಧಿ ಸ್ಟಾಲಿನ್ ವಿರುದ್ದ ಆಕ್ರೋಷ ಹೊರಹಾಕುತ್ತಿದ್ದಾರೆ. ಮತ್ತೆ ಕೆಲವರು ಆತನಿಗೆ ಬೆಂಬಲ ಸಹ ನೀಡುತ್ತಿದ್ದಾರೆ. ಇನ್ನೂ ಈ ವಿವಾದ ಹಸಿಯಾಗಿರುವ ಸಮಯದಲ್ಲೇ ಕರ್ನಾಟಕದ ಗೃಹ ಸಚಿವ ಡಾ.ಜಿ.ಪರಮೇಶ್ವರ್‍ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅನೇಕರ ಆಕ್ರೋಷಕ್ಕೆ ಕಾರಣವಾಗಿದೆ.

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಮೇಶ್ವರ್‍ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಶ್ವದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಅದರಲ್ಲಿ ಹಿಂದೂ ಧರ್ಮ ಯಾವಾಗ ಹುಟ್ಟಿತ್ತು. ಯಾರು ಹುಟ್ಟು ಹಾಕಿದ್ರು ಎಂಬುದು ದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ. ನಮ್ಮ ದೇಶದಲ್ಲಿ ಜೈನ, ಬೌದ್ದ ಧರ್ಮ ಹುಟ್ಟಿರುವ ಇತಿಹಾಸವಿದೆ. ವಿದೇಶದಿಂದ ಕ್ರೈಸ್ತ ಹಾಗೂ ಇಸ್ಲಾಂ ಧರ್ಮಗಳು ನಮ್ಮ ದೇಶಕ್ಕೆ ಬಂದಿದೆ. ಆದರೆ ಹಿಂದೂ ಧರ್ಮ ಯಾವಾಗ ಹುಟ್ಟಿತ್ತು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಆದರೆ ಪ್ರಪಂಚದಲ್ಲಿರುವ ಎಲ್ಲಾ ಧರ್ಮಗಳ ಸಾರಾಂಶ ಒಂದೇ ಆಗಿದೆ. ಎಲ್ಲಾ ಧರ್ಮಗಳು ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ಬಯಸುತ್ತದೆ ಎಂದು ಸಚಿವ ಪರಮೇಶ್ವರ್‍ ತಿಳಿಸಿದ್ದಾರೆ. ಇನ್ನೂ ಪರಮೇಶ್ವರ್‍ ರವರ ಹೇಳಿಕೆ ಎಲ್ಲಿಯವರೆಗೂ ಹೋಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈಗಾಗಲೇ ಅನೇಕರು ಪರಮೇಶ್ವರ್‍ ರವರ ಹೇಳಿಕೆಯನ್ನು ವಿರೋಧಿಸುತ್ತಿದ್ದಾರೆ.