News

ರಾಜ್ಯದ ಆ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ, ಅ.6 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ….!

ಕರ್ನಾಟಕ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರತಿ ನಿತ್ಯ ಮಳೆಯಾಗುತ್ತಿದ್ದು, ಮುಂದಿನ ಅಕ್ಟೋಬರ್‍ 6 ರವೆರೆಗೂ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆಯಂತೆ. ಈ ಪೈಕಿ ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಬಹುತೇಕ ಎಲ್ಲಾ ಕಡೆ ತಂಪಾದ ವಾತವರಣವಿದೆ. ಆಗಾಗ ಕೆಲವೊಂದು ಜಿಲ್ಲೆಗಳಲ್ಲಿ ಮಳೆಯ ಸಿಂಚನ ಆಗುತ್ತಿದೆ. ಮುಂದಿನ 5-6 ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆಯಂತೆ. ಅದರಲ್ಲೂ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆಯಂತೆ. ಉಳಿದ ಕಡೆ ಸಾಮಾನ್ಯ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಹಾಗೂ ಉತ್ತರ ಕನ್ನಡ ಸೇರಿದಂತೆ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಬಾಗಲಕೋಟೆ, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಲಿದೆ. ಮಂಗಳವಾರ ಸಹ ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಇನ್ನೂ ಅಕ್ಟೋಬರ್‍ 6 ರವರೆಗೆ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ಹಾವೇರಿ, ಬಾಗಲಕೋಟೆ, ಕಲರ್ಬುಗಿ, ಮೈಸೂರು, ರಾಯಚೂರು, ಶಿವಮೊಗ್ಗ, ತುಮಕೂರು, ಚಾಮರಾಜನಗರ, ಧಾರವಾಡ ಹಾಗೂ ಗದಗ ಸೇರಿದಂತೆ ಕೆಲವೊಂದು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.

Most Popular

To Top