Film News

51ನೇ ಫಿಲಂ ಫೆಸ್ಟಿವಲ್ ಗೆ ಚಾಲನೆ ನೀಡಿದ ಸುದೀಪ್: ಕನ್ನಡದಲ್ಲೇ ಮಾತಾಡಿದ ಕಿಚ್ಚ

ಪಣಜಿ: ಗೋವಾದ ಪಣಜಿಯಲ್ಲಿ ನಡೆದ 51ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಕನ್ನಡ ಸಿನಿರಂಗದ ಖ್ಯಾತ ನಟ ಕಿಚ್ಚ ಸುದೀಪ್ ಹಾಗೂ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಚಾಲನೆ ನೀಡಿದರು.

ಮೊಟ್ಟಮೊದಲ ಬಾರಿಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುದೀಪ್ ರವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಅಷ್ಟೇ ಅಲ್ಲದೇ ಕಿಚ್ಚ ಸುದೀಪ್ ಸಿನಿಮಾ ರಂಗಕ್ಕೆ ಭೇಟಿ ನೀಡಿ ೨೫ ವರ್ಷ ಪೂರೈಸಿದ್ದು ಗೋವಾ ಚಿತ್ರೋತ್ಸವ ಸುದೀಪ್ ರವರನ್ನು ಗೌರವಿಸಿ ಶುಭಾಷಯಗಳನ್ನು ಸಹ ತಿಳಿಸಿತು.

ಇನ್ನೂ ಕಾಯಕ್ರಮದಲ್ಲಿ ಕನ್ನಡದಲ್ಲಿಯೇ ತಮ್ಮ ಭಾಷಣವನ್ನು ಪ್ರಾರಂಭಿಸಿದ ಸುದೀಪ್ ಪ್ರತಿಯೊಬ್ಬರಿಗೂ ಕನ್ನಡ ಚಿತ್ರರಂಗದ ಪರವಾಗಿ ಕರ್ನಾಟಕದ ಪರವಾಗಿ ಈ ಕಿಚ್ಚನಿಂದ ನಮಸ್ತೆ ಎಂದು ಮಾತು ಆರಂಭಿಸಿ ಕನ್ನಡಪ್ರೇಮ ಸಾರಿದರು. ಸಿನೆಮಾ ಹಾಗೂ ಕ್ರೀಡೆಗೆ ಭಾಷೆ, ಗಡಿ ಎಲ್ಲವನ್ನೂ ಮೀರಿ, ಎಲ್ಲರನ್ನೂ ಒಗ್ಗೂಡಿಸುವ ಶಕ್ತಿಯಿದೆ. ಇದರಿಂದಲೇ ಇಲ್ಲಿ ದೊಡ್ಡ ಮಟ್ಟದಲ್ಲಿ ಸಿನೆಮಾ ಉತ್ಸವ ನಡೆಯುತ್ತಿದೆ. ನನ್ನ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು ಎಂದು ಸಂತಸ ಹಂಚಿಕೊಂಡರು.

ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೊದಲ ಕನ್ನಡ ನಟ ಎಂಬ ಹಿರಿಮೆಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪಾತ್ರರಾಗಿದ್ದು, ಕನ್ನಡ ಸಿನೆಮಾರಂಗದ ಗಣ್ಯರು ಸೇರಿದಂತೆ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ. ಜೊತೆಗೆ ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರವರು ಸಹ ಗೋವಾ ಚಿತ್ರೋತ್ಸವದಲ್ಲಿ ಸುದೀಪ್ ಮುಖ್ಯ ಅತಿಥಿಯಾಗಿರುವುದು ಕರ್ನಾಟಕ ಹೆಮ್ಮೆ ಎಂದು ಟ್ವೀಟ್ ಮಾಡಿದ್ದಾರೆ.

Trending

To Top