News

ಲೋಕಸಭಾ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಕೋಡಿಮಠದ ಶ್ರೀಗಳ ಭವಿಷ್ಯ, ವರ್ಕೌಟ್ ಆಗುತ್ತಾ ಮೈತ್ರಿ?

ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದೆ. ಈಗಾಗಲೇ ಲೋಕಸಭಾ ಚುನಾವಣಾ ಕಾವು ಸಹ ಶುರುವಾಗಿದೆ ಎಂದು ಹೇಳಬಹುದಾಗಿದೆ. ಕೆಲವು ದಿನಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿ ಲೋಕಸಭಾ ಚುನಾವಣೆ ಎದುರಿಸಲಿದೆ ಎಂಬ ಚರ್ಚೆ ಸಹ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಕೋಡಿಮಠದ ಶ್ರೀಗಳು ಲೋಕಸಭಾ ಚುನಾವಣೆಯ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರವರು ಹುಬ್ಬಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ 2024 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದು.  ಅದು ಅವರವರ ವಿಚಾರಕ್ಕೆ ಬಿಟ್ಟಿದ್ದು, ಅದರ ಬಗ್ಗೆ ಹೇಳಲು ಆಗುವುದಿಲ್ಲ. ದೇಶದ ಬಗ್ಗೆ ಈ ಹಿಂದೆ ಹೇಳಿದ್ದೇನೆ. ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಕಾದಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರ ಹಾಗೂ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ. ಯುಗಾದಿ ನಂತರ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಇನ್ನೂ ಇದೇ ವೇಳೆ ಉಚಿತ ಭಾಗ್ಯಗಳ ಬಗ್ಗೆ ಸಹ ಕೋಡಿಶ್ರೀ ಮಾತನಾಡಿದ್ದಾರೆ. ರಾಜ್ಯ ಸರ್ಕಾರದ ಉಚಿತ ಭಾಗ್ಯಗಳಿಂದ ಆರ್ಥಿಕ ದಿವಾಳಿಯಾಗುತ್ತದೆ ಎಂಬ ಆರೋಪಕ್ಕೆ ಕೋಡಿಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರ ಘೋಷಣೆ ಮಾಡಿದ ಉಚಿತ ಭಾಗ್ಯಗಳಿಂದ ಆರ್ಥಿಕ ದಿವಾಳಿ ಆಗುವುದಿಲ್ಲ. ರಾಜ್ಯ ಸಂಪತ್ತಿನಿಂದ ಕೂಡಿರುತ್ತದೆ. ಉಚಿತ ಭಾಗ್ಯಗಳಿಂದ ಜನಸಾಮಾನ್ಯರಿಗೂ ಸಾಕಷ್ಟು ಅನುಕೂಲಗಳಾಗಲಿವೆ. ಕೇಂದ್ರ ಸಹ ಆರ್ಥಿಕವಾಗಿ ಸದೃಡವಾಗಿರುತ್ತದೆ. ಭಾರತ ಆರ್ಥಿಕ ದಿವಾಳಿಯಾಗುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ಬರದ ಬಗ್ಗೆ ಸಹ ಮಾತನಾಡಿದ್ದಾರೆ.

ಮನುಷ್ಯ ಮಾಡಿದ ತಪ್ಪುಗಳನ್ನು ಆ ದೇವರು ಕ್ಷಮಿಸುತ್ತಾನೆ. ಆದರೆ ಅವನು ಮಾಡಿದ ಪಾಪ ಕರ್ಮಗಳು ಮನುಷ್ಯನನ್ನು ಎಂದಿಗೂ ಕ್ಷಮಿಸುವುದಿಲ್ಲ. ಅವನು ಮಾಡಿದ ಪಾಪ ಕರ್ಮಗಳೇ ಇಂತಹ ಪರಿಣಾಮಗಳಿಗೆ ಕಾರಣವಾಗಿದೆ. ಕರ್ಮ ಪಾಪಗಳು ಹೆಚ್ಚಾದಾಗ ಪ್ರಾಕೃತಿಕ ವಿಕೋಪಗಳನ್ನು ಎದುರಿಸಬೇಕಾಗುತ್ತದೆ. ಅಮಾವಾಸ್ಯೆಯ ಬಳಿಕ ಇನ್ನೂ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ. ಇನ್ನೂ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರವರ ಧರ್ಮದವರ ಹೇಳಿಕೆ, ಅದು ಅವರ ನೋವಿನ ಸಂಗತಿಯಾಗಿದೆ. ಅವರ ನೋವನ್ನು ಹೇಳಿಕೊಂಡಿದ್ದಾರೆ. ಆದರೆ ಯಾರೂ ಕೂಡ ಧರ್ಮದ ವಿಚಾರದಲ್ಲಿ ರಾಜಕೀಯ ಬೆರೆಸಬಾರದು ಎಂದು ತಿಳಿಸಿದ್ದಾರೆ.

Most Popular

To Top