News

ಕೆ.ಎ.ಎಸ್ ಅಧಿಕಾರಿಯಾಗಲು ಬಯಸುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, 384 ಕೆಎಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

ಅನೇಕರು ಕೆ.ಎ.ಎಸ್ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಬಯಸುತ್ತಿರುತ್ತಾರೆ. ಅಂತಹ ಅಭ್ಯರ್ಥಿಗಳಿಗಾಗಿ ಶುಭಸುದ್ದಿಯೊಂದಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವಂತಹ 384 ಗೆಜೆಟೆಡ್ ಪ್ರೊಬೆಷನರ್‍ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಮಾ.4 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ತಹಸೀಲ್ದಾರ್‍, ಡಿ.ವೈ.ಎಸ್‌.ಪಿ, ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು ಸೇರಿದಂತೆ 159 ಗ್ರೂಪ್ ಎ ಹುದ್ದೆಗಳು ಹಾಗೂ 225 ಗ್ರೂಪ್ ಬಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇದರಲ್ಲಿ 77 ಹುದ್ದೆಗಳು ಕಲ್ಯಾಣ ಕರ್ನಾಟಕ ವೃದದ ಹುದ್ದೆಗಳೂ ಸಹ ಸೇರಿದೆ. ಮಾ.4 ರಿಂದ ಕೆ.ಪಿ.ಎಸ್.ಸಿ ಅಂತರ್ಜಾಲ ತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏ.4 ಆಗಿದ್ದು, ಮೇ. 5 ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ತಾತ್ಕಲಿಕ ದಿನಾಂಕ ನಿಗದಿಪಡಿಸಲಾಗಿದೆ.

ಭಾರತದಲ್ಲಿ ಕಾನೂನು ರೀತ್ಯ ಸ್ಥಾಪನೆಯಾದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಬಾರಿ ವಯೋಮಿತಿಯಲ್ಲಿ ಸಹ ಸಡಿಲಿಕೆಯನ್ನು ಹೆಚ್ಚಿಸಲಾಗಿದೆ. ಕೋವಿಡ್ ಸೇರಿದಂತೆ ಕೆಲವೊಂದು ಕಾರಣಗಳಿಂದ ಕಳೆದ ಐದಾರು ವರ್ಷ ಕೆಎಎಸ್ ನೇಮಕಾತಿ ನಡೆದಿರಲಿಲ್ಲ. ಈ ಕಾರಣದಿಂದ ಮೂರು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷ, ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷ ನಿಗಧಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆ.ಪಿ.ಎಸ್.ಸಿ ಅಧಿಕೃತ ತಾಣವನ್ನು ಭೇಟಿ ನೀಡಬಹುದಾಗಿದೆ.

Most Popular

To Top