News

ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ಸೂಚಿಸಿದ ಸಂಸದೆ ಸುಮಲತಾ, ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆ…..!

ದೇಶದಾದ್ಯಂತ ಲೋಕಸಭಾ ಚುನಾವಣೆ-2024ರ ಚುನಾವಣೆಯ ಅಬ್ಬರ ಜೋರಾಗಿದೆ. ಕರ್ನಾಟಕದಲ್ಲಿ ಸಹ ಚುನಾವಣೆಯ ಕಾವು ದಿನದಂದ ದಿನಕ್ಕೇ ಏರುತ್ತಿದ್ದೆ. ಅದರಲ್ಲೂ ಕೆಲವೊಂದು ಕ್ಷೇತ್ರಗಳ ಚುನಾವಣಾ ಅಖಾಡವಂತೂ ಭಾರಿ ಕುತೂಹಲ ಕೆರಳಿಸಿತ್ತು. ಅದರಲ್ಲಿ ಮಂಡ್ಯ ಕ್ಷೇತ್ರ ಸಹ ಒಂದಾಗಿತ್ತು. ಹಾಲಿ ಸಂಸದೆ ಸುಮಲತಾ ಅಂಬರೀಶ್ ರವರ ಸ್ಪರ್ಧೆಯ ಬಗ್ಗೆ ಭಾರಿ ಸುದ್ದಿಯಾಗುತ್ತಿದ್ದು, ಇದೀಗ ಆಕೆ ತಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡೋಲ್ಲ, ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ಸೂಚಿಸುವುದಾಗಿ ಹಾಗೂ ಶೀಘ್ರದಲ್ಲೇ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ಸಂಸದೆ ಸುಮಲತಾ ರವರು ಏ.3 ರಂದು ಚುನಾವಣೆಗೆ ಸ್ಫರ್ಧೆ ಮಾಡುವ ಕುರಿತು ಮಂಡ್ಯದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದರು ಅದರಂತೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ನಾನು ಕಾಂಗ್ರೇಸ್ ಪಕ್ಷಕ್ಕೆ ಹೋಗುವುದಿಲ್ಲ ಬೇರೆ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸ್ವತಃ ಪ್ರಧಾನಿಯವರು ನನಗೆ ತಿಳಿಸಿದ್ದರು. ಆಕಸ್ಮಿಕವಾಗಿ ನಾನು ರಾಜಕೀಯಕ್ಕೆ ಬಂದೆ. ಐದು ವರ್ಷಗಳ ಹಿಂದೆ ನನಗೆ ಐತಿಹಾಸಿಕ ಗೆಲುವು ನೀಡಿದ್ದೀರಾ. ಈ ಅವಧಿಯಲ್ಲಿ ನನ್ನ ಜೊತೆಗಿದ್ದ ಎಲ್ಲರಿಗೂ ವಂದನೆಗಳು. ನಾನು ಜನಪರ ಸಮಸ್ಯೆಗಳ ಪರ ನಿಂತಿದ್ದೇನೆ. ಜಿಲ್ಲೆ ಅಭಿವೃದ್ದಿ ಮಾಡುವುದಷ್ಟೆ ನನ್ನ ಮನಸ್ಸನಲ್ಲಿತ್ತು. ಮೈ ಶುಗರ್‍ ಕಾರ್ಖಾನೆಗಾಗಿ ಎರಡು ವರ್ಷ ಹೊರಾಟ ಮಾಡಿದ್ದೇನೆ. ಕೆ.ಆರ್‍.ಎಸ್ ಡ್ಯಾಂ ಸಂರಕ್ಷಣೆ ಹಾಗೂ ಅಕ್ರಮ ಗಣಿಗಾರಿಕೆ ವಿರುದ್ದ ಯುದ್ದ ಮಾಡಿದ್ದೇನೆ. 2019 ಅದೊಂದು ಬೇರೆ ತರಹದ ಸವಾಲಾಗಿತ್ತು. ಇದೀಗ ಮತ್ತೊಂದು ಸವಾಲು ಎದುರಿಸುತ್ತಿದ್ದೇನೆ. ಬಿಜೆಪಿಯಲ್ಲಿ ಟಿಕೆಟ್ ಪಡೆದುಕೊಳ್ಳಲು ತುಂಬಾ ಹೋರಾಟ ಮಾಡಿದ್ದೆ. ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ನಿಲ್ಲುವಂತೆ ಹೇಳಿದ್ದರು. ಆದರೆ ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗೊಲ್ಲ. ಗೆದ್ದರು ಸೋತರೂ ಮಂಡ್ಯ ಬಿಟ್ಟು ಹೋಗಲ್ಲ ಎಂದು ಅವರಿಗೆ ತಿಳಸಿದ್ದೆ.

ಇನ್ನೂ ಸುಮಲತಾ ಅವಶ್ಯಕತೆ ನಮಗೆ ಬೇಕಾಗಿಲ್ಲ ಎಂದು ಕ್ರಾಂಗೇಸ್ ನವರು ಹೇಳಿದ್ದರು. ಕಾಂಗ್ರೇಸ್ ನವರು ಬೇಡ ಎಂದಿದ್ದಾರೆ, ನಾನು ಹೋಗಲ್ಲ. ನನಗೆ ಗೌರವ ಇಲ್ಲದ ಕಡೆ ಹೋಗಿ ಎಂದು ಒತ್ತಾಯಿಸಬೇಡಿ. ಕೇಂದ್ರ ಸರ್ಕಾರ ನಾಲ್ಕು ಸಾವಿರ ಕೋಟಿ ಅನುದಾನ ನೀಡಿದೆ. ಪ್ರತಿಯೊಂದು ವಿಚಾರದಲ್ಲೂ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದರು. ಸಂಸದೆಯ ಸ್ಥಾನ ಶಾಶ್ವತವಲ್ಲ, ಆದರೆ ನಾನು ಮಂಡ್ಯದ ಸೊಸೆಯಾಗಿ ಕೊನೆಯವರೆಗೂ ಉಳಿಯುತ್ತೇನೆ. ಇಂದು ಬದಲಾದ ಪರಿಸ್ಥಿತಿ ಹಾಗೂ ಸನ್ನಿವೇಶವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಹಠ ಸಾಧನೆ ಮಾಡುವ ಉದ್ದೇಶ ಇದ್ದರೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬಹುದು. ಆದರೆ ಅದರಿಂದ ಯಾರಿಗೆ ಲಾಭವಾಗುತ್ತದೆ? ಬಂದಂತಹ ಅವಕಾಶಗಳನ್ನು ಮಂಡ್ಯಕ್ಕಾಗಿ ಬಿಟ್ಟಿದ್ದೇನೆ. ನಾನು ಲಾಭಕ್ಕಾಗಿ ಯೋಚನೆ ಮಾಡಿದ್ದರೇ ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಿದ್ದೆ ಎಂದು ಸುಮಲತಾ ರವರು ತಮ್ಮ ಚುನಾವಣೆಯ ಸ್ಪರ್ಧೆಯ ಬಗ್ಗೆ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದಾರೆ.

Most Popular

To Top