ಸಲೂನ್ ನಲ್ಲಿ ಜನರಿಗೆ ಕ್ಷೌರ ಮಾಡಿ ವಿಭಿನ್ನ ರೀತಿಯಲ್ಲಿ ಮತಯಾಚನೆ ಮಾಡಿದ ಅಭ್ಯರ್ಥಿ…..!

Follow Us :

ಸದ್ಯ ದೇಶದಲ್ಲಿ ಲೋಕಸಭಾ ಚುನಾವಣೆಯ ಅಬ್ಬರ ಜೋರಾಗಿಯೇ ನಡೆಯುತ್ತಿದೆ. ಅಭ್ಯರ್ಥಿಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಮತದಾರರಿಗೆ ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಇದೀಗ ತಮಿಳುನಾಡಿನಲ್ಲಿ ಅಭ್ಯರ್ಥಿಯೊಬ್ಬರು ವಿಭಿನ್ನ ರೀತಿಯಲ್ಲಿ ಮತಯಾಚನೆ ಮಾಡಿ ಸುದ್ದಿಯಾಗಿದ್ದಾರೆ. ಅಷ್ಟಕ್ಕೂ ಆ ಅಭ್ಯರ್ಥಿ ಯಾರು, ಯಾವ ರೀತಿಯಲ್ಲಿ ಮತಯಾಚನೆ ಮಾಡಿದ್ದಾರೆ ಎಂಬ ವಿಚಾರಕ್ಕೆ ಬಂದರೇ,

ತಮಿಳುನಾಡಿನ ಪರಮೇಶ್ವರಂನ ರಾಮನಾಥಪುರಂ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರು ವಿಭಿನ್ನವಾಗಿ ಮತಯಾಚನೆ ಮಾಡಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಪಾರಿರಾಜನ್ ಎಂಬಾತನೇ ವಿಭಿನ್ನವಾಗಿ ಮತಯಾಚನೆ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಮತದಾರರ ಗಮನ ಸೆಳೆಯುವ ನಿಟ್ಟಿನಲ್ಲಿ ಅವರು ಕ್ಷೌರಿಕರಾಗಿ ಕೆಲ ಸಮಯ ಕ್ಷೌರಿಕರಾಗಿ ಕೆಲಸ ಮಾಡಿದ್ದಾರೆ. ಮತದಾರರನ್ನು ಮನವೊಲಿಸಲು ಕೈಯಲ್ಲಿ ರೇಜರ್‍ ಹಿಡಿದು ಜನರಿಗೆ ಗಡ್ಡ ಬೋಳಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗಿದೆ. ವಿನೂತನ ರೀತಿಯಲ್ಲಿ ಅಭ್ಯರ್ಥಿಯ ಪ್ರಚಾರದ ಸ್ಟೈಲ್ ನೋಡಿ ಪರ ವಿರೋಧದ ಕಾಮೆಂಟ್ ಗಳು ಹರಿದುಬರುತ್ತಿದೆ.

ಇನ್ನೂ ಕಳೆದ ಮಾರ್ಚ್ 16 ರಂದು ಚುನಾವಣಾ ಆಯೋಗ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಘೋಷಣೆ ಮಾಡಿತ್ತು. ಚುನಾವಣೆ ದಿನಾಂಕಗಳು ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಪುಲ್ ಆಕ್ಟೀವ್ ಆಗಿ ಚುನಾವಣಾ ಕಣಕ್ಕೆ ಧುಮಿಕಿದೆ. ಈ ಬಾರಿ ಬಿಜೆಪಿ ಪಕ್ಷ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ಕಾಂಗ್ರೇಸ್ ಪಕ್ಷ ಸಹ ಕೆಲವೊಂದು ಪಕ್ಷಗಳನ್ನು ಒಗ್ಗೂಡಿಸಿಕೊಂಡು I.N.D.I.A ಕೂಟ ರಚಿಸಿಕೊಂಡಿದೆ. ಇನ್ನೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಲ್ಲಲ್ಲಿ ಸೀರೆಗಳು, ಕುಕ್ಕರ್‍ ಗಳು, ಹಣವನ್ನು ಸಹ ಚುನಾವಣಾಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಾರೆ.