News

ಈ ಬಾರಿಯಾದ್ರು ರೈತ ಮಕ್ಕಳಿಗೆ ಕನ್ಯೆ ಸಿಗಲಿ ಮಾದಪ್ಪ ಎಂದು ಪಾದಯಾತ್ರೆ ಹೊರಟ ಯುವಕರು……!

ಶಿವರಾತ್ರಿ ಹತ್ತಿರವಾಗುತ್ತಿದ್ದಂತೆ ಮಾದಪ್ಪನ ಸನ್ನಿಧಾನಕ್ಕೆ ರಾಜ್ಯದ ವಿವಿಧ ಕಡೆಯಿಂದ ಭಕ್ತರು ಆಗಮಿಸುತ್ತಿದ್ದಾರೆ. ಅದರಲ್ಲೂ ತಮ್ಮ ಮಗನಿಗೆ ಒಳ್ಳೆ ಕನ್ಯೆ ಸಿಗಲಿ ಎಂದು ಬರುವಂತಹ ಪಾದಯಾತ್ರಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಮಳವಳ್ಳಿ ತಾಲೂಕಿನ ಅಂಚೆದೊಡ್ಡಿ ಗ್ರಾಮಕ್ಕೆ ಗ್ರಾಮವೇ ಪಾದಯಾತ್ರೆಯಲ್ಲಿ ಭಾಗಿಯಾಗಿದೆ. ಈ ಗ್ರಾಮದ ರೈತ ಮಹಿಳೆಯರು ತಮ್ಮ ಗಂಡು ಮಕ್ಕಳಿಗೆ ಒಳ್ಳೆ ಕನ್ಯೆ ಸಿಗಲಿ ಅಂತ ಹರಕೆ ಕಟ್ಟಿ ಪಾದಯಾತ್ರೆ ನಡೆಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಂಚೆದೊಡ್ಡ ಗ್ರಾಮಸ್ಥರು ಕೈಯಲ್ಲೊಂದು ಊರುಗೋಲು, ತಲೆಯ ಮೇಲೆ ಹಳದಿ ಟೋಪಿ ಇಟ್ಟುಕೊಂಡು, ಭಕ್ತಿಯಿಂದ ಊಘೇ ಮಾದಪ್ಪ ಎಂದು ಕೂಗೂತ್ತಾ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ತಾಳೆ ಬೆಟ್ಟದ ಸಮೀಪವಿರುವ ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಗ್ರಾಮದ ರೈತ ಮಹಿಳೆಯರು ತಮ್ಮ ಗಂಡು ಮಕ್ಕಳಿಗೆ ಒಳ್ಳೆಯ ಕನ್ಯೆ ಸಿಗಲಿ ಎಂದು ಹರಕೆ ಕಟ್ಟಿ ಪಾದಯಾತ್ರೆ ನಡೆಸಿದ್ದಾರೆ. ಜೊತೆಗೆ ಬೆಂಗಳೂರಿನವರೂ ಸಹ ತಮಗೆ ಒಳ್ಳೆಯದಾಗಲಿ ಎಂದೂ ಸಹ ಪಾದಯಾತ್ರೆ ಮಾಡುತ್ತಿದ್ದಾರೆ. ಮತ್ತೆ ಕೆಲವರು ತಮ್ಮ ಪೂರ್ವಜರ ಕಾಲದಿಂದಲೂ ಪಾದಯಾತ್ರೆ ನಡೆಸುತ್ತಿದ್ದು, ಅದರಂತೆ ಅನೇಕರು ಪಾದಯಾತ್ರೆ ಮಾಡುತ್ತಿದ್ದಾರೆ.

ಇನ್ನೂ ರಾಜ್ಯದ ವಿವಿಧ ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದು, ಈ ಪೈಕಿ ರೈತರ ಮಕ್ಕಳಿಗೆ ಕನ್ಯೆ ಸಿಗಲಿ ಎಂದು ಪಾದಯಾತ್ರೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎನ್ನಬಹುದು. ಮಾದಪ್ಪನ ದರ್ಶನ ಪಡೆದು ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಬೇಡಿಕೊಂಡರೇ ಇಷ್ಟಾರ್ಥ ಸಿದ್ದಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ಕಾರಣದಿಂದಲೇ ದೀಪಾವಳಿ, ಯುಗಾದಿ ಹಾಗೂ ಶಿವರಾತ್ರಿ ಸಮಯದಲ್ಲಿ ಮಾದಪ್ಪನ ದರ್ಶನಕ್ಕೆ ಪಾದಯಾತ್ರೆ ಮಾಡುತ್ತಿರುತ್ತಾರೆ.

Most Popular

To Top