Film News

ಬ್ಲೂ ಕಲರ್ ಮಾಡ್ರನ್ ಡ್ರೆಸ್ ನಲ್ಲಿ ಬ್ಯೂಟಿಪುಲ್ ಪೋಸ್ ಕೊಟ್ಟ ಮಲಯಾಳಂ ಕುಟ್ಟಿ, ಕರ್ಲಿ ಹೇರ್ ಮೂಲಕ ಹುಡುಗರನ್ನು ಫಿದಾ ಮಾಡಿದ ಅನುಪಮಾ…..!

ಮಲಯಾಳಂ ಮೂಲದ ನಟಿ ಅನುಪಮಾ ಕ್ಯೂಟ್ ನಟಿ ಎಂತಲೇ ಫೇಂ ಸಂಪಾದಿಸಿಕೊಂಡಿದ್ದರು. ಮಲಯಾಳಂ ಮೂಲದ ನಟಿಯಾದರೂ ಸಹ ಅನುಪಮಾ ತೆಲುಗು ಪ್ರೇಕ್ಷರಿಗೆ ತುಂಬಾ ಹತ್ತಿರವಾದರು. ಸೌತ್ ನ ವಿವಿಧ ಭಾಷೆಗಳಲ್ಲಿ ಆಕೆ ವಿವಿಧ ಸಿನೆಮಾಗಳಲ್ಲಿ ನಟಿಸಿದ್ದರು. ಸಿನೆಮಾಗಳಲ್ಲಿ ಹೋಮ್ಲಿಯಾಗಿ, ಓವರ್‍ ಗ್ಲಾಮರ್‍ ಶೋ ಮಾಡದೇ ಕ್ರೇಜ್ ಸಂಪಾದಿಸಿಕೊಂಡ ನಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ದಿನೇ ದಿನೇ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಕ್ಯೂಟ್ ಅಂಡ್ ಫನ್ನಿ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

ಪ್ರೇಮಂ ಎಂಬ ಮಲಯಾಳಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅನುಪಮಾ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬಹುಬೇಡಿಕೆ ನಟಿಯಾದರು. ಶತಮಾನಂ ಭವತಿ, ಹಲೋ ಗುರು ಪ್ರೇಮ ಕೋಸಮೇ, ಉನ್ನದಿ ಒಕ್ಕಟೆ ಜೀವಿತಂ ಸಿನೆಮಾದಲ್ಲಿ ನಟಿಸಿ ಖ್ಯಾತಿ ಪಡೆದುಕೊಂಡರು. ಇನ್ನೂ ಇತ್ತಿಚಿಗೆ ಆಕೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನೆಮಾಗಳನ್ನು ಮುಡಿಗೇರಿಸಿಕೊಂಡರು. ಕಾರ್ತಿಕೇಯ-2, 18 ಪೇಜಸ್, ಬಟರ್‍ ಪ್ಲೈ ಸಿನೆಮಾದಲ್ಲಿ ನಟಿಸಿದ್ದರು. ಈ ಮೂರು ಸಿನೆಮಾಗಳು ಆಕೆಗೆ ಒಳ್ಳೆಯ ಸಕ್ಸಸ್ ತಂದುಕೊಟ್ಟಿತ್ತು. ಅದರಲ್ಲೂ ಕಾರ್ತಿಕೇಯ-2 ಸಿನೆಮಾ ಪ್ಯಾನ್ ಇಂಡಿಯಾ ಸಿನೆಮಾ ಆಗಿದ್ದು, ಆಕೆ ಈ ಸಿನೆಮಾದ ಮೂಲಕ ತುಂಬಾನೆ ಖ್ಯಾತಿ ಪಡೆದುಕೊಂಡರು.

ಇನ್ನೂ ಈ ಹಿಂದೆ ಅನುಪಮಾ ಅಷ್ಟೊಂದು ಗ್ರಾಮರ್‍ ಶೋ ಮಾಡುತ್ತಿರಲಿಲ್ಲ. ಆದರೆ ಇತ್ತಿಚಿಗೆ ಆಕೆ ಕೊಂಚ ಓವರ್‍ ಆಗಿಯೇ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಜೋರನ್ನು ಏರಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಬ್ಲೂ ಗೌನ್ ನಲ್ಲಿ ಕ್ಯೂಟ್ ಎಕ್ಸ್‌ ಪ್ರೆಷನ್ಸ್ ಕೊಟ್ಟಿದ್ದಾರೆ. ಕರ್ಲಿ ಹೇರ್‍ ಮೂಲಕ, ಮತ್ತೇರಿಸುವಂತಹ ಲುಕ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಕ್ಯೂಟ್ ಅಂಡ್ ಫನ್ನಿ ಪೋಸ್ ಗಳ ಮೂಲಕ ಅಭಿಮಾನಿಗಳನ್ನು ಫಿದಾ ಮಾಡಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಮಾಡುತ್ತಾ ಪೊಟೋಗಳನ್ನು ಮತಷ್ಟು ವೈರಲ್ ಆಗುತ್ತಿವೆ.

ಇನ್ನೂ ಆಕೆ ಮತ್ತೊಂದು ಇಂಟ್ರಸ್ಟಿಂಗ್ ಪೋಸ್ಟ್ ಸಹ ಹಂಚಿಕೊಂಡಿದ್ದಾರೆ. ವೀಕೆಂಡ್ಸ್ ನಲ್ಲಿ ಆಕೆ ಏನು ಮಾಡುತ್ತಾರೆ ಎಂಬುದನ್ನು ರಿವೀಲ್ ಮಾಡಿದ್ದಾರೆ. ವೀಕೆಂಡ್ಸ್ ನಲ್ಲಿ ಅನೇಕ ನಟಿಯರು ವೆಕೇಷನ್ ಗಳಿಗೆ ಹಾರುತ್ತಿರುತ್ತಾರೆ. ಆದರೆ ಅನುಪಮಾ ಮಾತ್ರ ಮನೆಯಲ್ಲಿಯೇ ಇದ್ದು ಕೆಲಸ ಮಾಡಿಕೊಳ್ಳುತ್ತಿರುತ್ತಾರಂತೆ. ಮನೆಯಲ್ಲಿನ ಕೆಲಸಗಳನ್ನು ಮಾಡಿಕೊಳ್ಳುತ್ತಿರುವ ವಿಡಿಯೋ ಒಂದನ್ನು ಸಹ ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಹ ಸಖತ್ ವೈರಲ್ ಆಗುತ್ತಿದೆ. ಇದೀಗ ಆಕೆ ಡಿಜೆ ಟಿಲ್ಲು-2. ಸೈರನ್, ಈಗಲ್ ಎಂಬ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Most Popular

To Top