Film News

ರೆನ್ಯುಮರೇಷನ್ ಏರಿಸಿದ ಅನುಪಮಾ, ಹಾಟ್ ದೃಶ್ಯಗಳಿಗೂ ಸೈ ಎಂದ ಮಲ್ಲು ಬ್ಯೂಟಿ, ಭಾರಿ ಸಂಭಾವನೆ ಡಿಮ್ಯಾಂಡ್ ಅಂತೆ…..!

ಮಲ್ಲೂ ಬ್ಯೂಟಿ ಅನುಪಮಾ ಪರಮೇಶ್ವರನ್ ಕ್ಯೂಟ್ ನಟಿ ಎಂತಲೇ ಫೇಂ ಸಂಪಾದಿಸಿಕೊಂಡಿದ್ದರು. ಮಲಯಾಳಂ ಮೂಲದ ನಟಿಯಾದರೂ ಸಹ ಅನುಪಮಾ ತೆಲುಗು ಪ್ರೇಕ್ಷರಿಗೆ ತುಂಬಾ ಹತ್ತಿರವಾದರು. ಸಿನೆಮಾಗಳಲ್ಲಿ ಹೋಮ್ಲಿಯಾಗಿ, ಓವರ್‍ ಗ್ಲಾಮರ್‍ ಶೋ ಮಾಡದೇ ಕ್ರೇಜ್ ಸಂಪಾದಿಸಿಕೊಂಡ ನಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಇದೀಗ ಆಕೆ ಕೆಲವೊಂದು ಹಾಟ್ ಸೀನ್ ಗಳಲ್ಲೂ ಸಹ ನಟಿಸಲು ಸೈ ಎನ್ನುತ್ತಿದ್ದಾರಂತೆ ಜೊತೆಗೆ ಆಕೆ ತಮ್ಮ ಸಂಭಾವನೆಯನ್ನು ಸಹ ಏರಿಸಿದ್ದಾರೆ ಎನ್ನಲಾಗುತ್ತಿದ್ದು, ಸಿನೆಮಾ ಒಂದಕ್ಕೆ ಆಕೆ ಭಾರಿ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರೇಮಂ ಎಂಬ ಮಲಯಾಳಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅನುಪಮಾ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬಹುಬೇಡಿಕೆ ನಟಿಯಾದರು. ಶತಮಾನಂ ಭವತಿ, ಹಲೋ ಗುರು ಪ್ರೇಮ ಕೋಸಮೇ, ಉನ್ನದಿ ಒಕ್ಕಟೆ ಜೀವಿತಂ ಸಿನೆಮಾದಲ್ಲಿ ನಟಿಸಿ ಖ್ಯಾತಿ ಪಡೆದುಕೊಂಡರು. ಇನ್ನೂ ಇತ್ತಿಚಿಗೆ ಆಕೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನೆಮಾಗಳನ್ನು ಮುಡಿಗೇರಿಸಿಕೊಂಡರು. ಕಾರ್ತಿಕೇಯ-2, 18 ಪೇಜಸ್, ಬಟರ್‍ ಪ್ಲೈ ಸಿನೆಮಾದಲ್ಲಿ ನಟಿಸಿದ್ದರು. ಈ ಮೂರು ಸಿನೆಮಾಗಳು ಆಕೆಗೆ ಒಳ್ಳೆಯ ಸಕ್ಸಸ್ ತಂದುಕೊಟ್ಟಿತ್ತು. ಅದರಲ್ಲೂ ಕಾರ್ತಿಕೇಯ-2 ಸಿನೆಮಾ ಪ್ಯಾನ್ ಇಂಡಿಯಾ ಸಿನೆಮಾ ಆಗಿದ್ದು, ಆಕೆ ಈ ಸಿನೆಮಾದ ಮೂಲಕ ತುಂಬಾನೆ ಖ್ಯಾತಿ ಪಡೆದುಕೊಂಡರು. ಜೊತೆಗೆ ಸಿನೆಮಾಗಳ ಜೊತೆಗೆ ಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಹಾಟ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಭಾರಿ ಸದ್ದು ಮಾಡುತ್ತಿದ್ದಾರೆ. ತೆಲುಗು, ತಮಿಳು ಹಾಗೂ ಮಲಯಾಳಂ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ. ಕರಿಯರ್‍ ಬಿಗಿನಿಂಗ್ ನಲ್ಲಿ ಆಕೆ ತುಂಬಾನೆ ಪದ್ದತಿಯಾಗಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಇದೀಗ ಆಕೆ ಗ್ಲಾಮರ್‍ ಶೋ ಮಾಡೋಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಜೊತೆಗೆ ಸಿನೆಮಾಗಳ ವಿಚಾರದಲ್ಲೂ ಸಹ ಆಕೆ ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿದ್ದಾರಂತೆ. ಸದ್ಯ ಆಕೆ ಸಿದ್ದು ಜೊನ್ನಲಗಡ್ಡ ಜೊತೆಗೆ ಡಿಜೆ ಟಿಲ್ಲು ಸ್ಕ್ವೇರ್‍ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನೆಮಾದ ಶೂಟಿಂಗ್ ಸಹ ಭರದಿಂದ ಸಾಗುತ್ತಿದೆ. ಈ ಸಿನೆಮಾದಲ್ಲಿ ಆಕೆ ರೊಮ್ಯಾಂಟಿಕ್ ದೃಶ್ಯಗಳಲ್ಲೂ ಸಹ ನಟಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಆಕೆ ತನ್ನ ಸಂಭಾವನೆಯನ್ನೂ ಸಹ ಏರಿಸಿದ್ದಾರಂತೆ. ಸದ್ಯ ಅನುಪಮ ಕೋಟಿ ರೂಪಾಯಿಯವರೆಗೂ ಸಂಭಾವನೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

Most Popular

To Top