Film News

ಬ್ಲೂ ಸೀರೆಯನ್ನು ಧರಿಸಿ, ಸೊಂಟವನ್ನು ಬಳುಕಿಸುತ್ತಾ ಹಾಟ್ ಪೋಸ್ ಗಳನ್ನು ಕೊಟ್ಟ ಮಲಯಾಳಿ ಕುಟ್ಟಿ ಅನುಪಮಾ……..!

ಸೌತ್ ಸಿನಿರಂಗದ ನಟಿ ಅನುಪಮಾ ಕ್ಯೂಟ್ ನಟಿ ಎಂತಲೇ ಫೇಂ ಸಂಪಾದಿಸಿಕೊಂಡಿದ್ದರು. ಮಲಯಾಳಂ ಮೂಲದ ನಟಿಯಾದರೂ ಸಹ ಅನುಪಮಾ ತೆಲುಗು ಪ್ರೇಕ್ಷರಿಗೆ ತುಂಬಾ ಹತ್ತಿರವಾದರು. ಸೌತ್ ನ ವಿವಿಧ ಭಾಷೆಗಳಲ್ಲಿ ಆಕೆ ವಿವಿಧ ಸಿನೆಮಾಗಳಲ್ಲಿ ನಟಿಸಿದ್ದರು. ಸಿನೆಮಾಗಳಲ್ಲಿ ಹೋಮ್ಲಿಯಾಗಿ, ಓವರ್‍ ಗ್ಲಾಮರ್‍ ಶೋ ಮಾಡದೇ ಕ್ರೇಜ್ ಸಂಪಾದಿಸಿಕೊಂಡ ನಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ದಿನೇ ದಿನೇ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಬ್ಲೂ ಕಲರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದು, ವಿಡಿಯೋ ವೈರಲ್ ಆಗುತ್ತಿವೆ.

ಪ್ರೇಮಂ ಎಂಬ ಮಲಯಾಳಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅನುಪಮಾ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬಹುಬೇಡಿಕೆ ನಟಿಯಾದರು. ಶತಮಾನಂ ಭವತಿ, ಹಲೋ ಗುರು ಪ್ರೇಮ ಕೋಸಮೇ, ಉನ್ನದಿ ಒಕ್ಕಟೆ ಜೀವಿತಂ ಸಿನೆಮಾದಲ್ಲಿ ನಟಿಸಿ ಖ್ಯಾತಿ ಪಡೆದುಕೊಂಡರು. ಇನ್ನೂ ಇತ್ತಿಚಿಗೆ ಆಕೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನೆಮಾಗಳನ್ನು ಮುಡಿಗೇರಿಸಿಕೊಂಡರು. ಕಾರ್ತಿಕೇಯ-2, 18 ಪೇಜಸ್, ಬಟರ್‍ ಪ್ಲೈ ಸಿನೆಮಾದಲ್ಲಿ ನಟಿಸಿದ್ದರು. ಈ ಮೂರು ಸಿನೆಮಾಗಳು ಆಕೆಗೆ ಒಳ್ಳೆಯ ಸಕ್ಸಸ್ ತಂದುಕೊಟ್ಟಿತ್ತು. ಅದರಲ್ಲೂ ಕಾರ್ತಿಕೇಯ-2 ಸಿನೆಮಾ ಪ್ಯಾನ್ ಇಂಡಿಯಾ ಸಿನೆಮಾ ಆಗಿದ್ದು, ಆಕೆ ಈ ಸಿನೆಮಾದ ಮೂಲಕ ತುಂಬಾನೆ ಖ್ಯಾತಿ ಪಡೆದುಕೊಂಡರು. ಇದೀಗ ಆಕೆ ಕ್ಯೂಟ್ ಅಂಡ್ ಹಾಟ್ ಡ್ಯಾನ್ಸ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದು ವಿಡಿಯೋ ವೈರಲ್ ಆಗಿದೆ.

ಮಲ್ಲು ಬ್ಯೂಟಿ ಅನುಪಮಾ ಪರಮೇಶ್ವರನ್  ಬ್ಲೂ ಕಲರ್‍ ಸೀರೆಯಲ್ಲಿ ಸಿಂಪುಲ್ ಸ್ಟೆಪ್ಸ್ ಹಾಕುತ್ತಾ ವಿಡಿಯೋ ಮಾಡಿದ್ದಾರೆ. ಸಿಂಪಲ್ ಆಗಿ ಸ್ಟೆಪ್ಸ್ ಹಾಕಿದರೂ ಆಕೆಯ ಕ್ಯೂಟ್ ನೆಸ್ ಗೆ ಯುವಕರು ಫಿದಾ ಆಗಿದ್ದಾರೆ. ಬಳಕುವ ಸೊಂಟದ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಈ ವಿಡಿಯೋ ವನ್ನು ಆಕೆ ತನ್ನ ಇನ್ಸ್ಟಾ ಗ್ರಾಂನಲ್ಲಿ ಶೇರ್‍ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅನುಪಮಾ ಡ್ಯಾನ್ಸ್ ಗೆ ಫಿದಾ ಆದ ನೆಟ್ಟಿಗರು ಹಾಗೂ ಅಭಿಮಾನಿಗಳು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಜೊತೆಗೆ ಆಕೆ ಅಪ್ಸರೆಯಂತೆ ಇದ್ದೀಯಾ ಎಂದು ಹೊಗಳುತ್ತಾ ವಿಡಿಯೋ ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಅನುಪಮಾ ಡಿಜೆ ಟಿಲ್ಲು ಸೀಕ್ವೆಲ್ ಟಿಲ್ಲು ಸ್ಕ್ವೇರ್‍ ನಲ್ಲಿ ಸಿದ್ದು ಜೊನ್ನಲಗಡ್ಡ ಜೊತೆಗೆ ನಟಿಸುತ್ತಿದ್ದಾರೆ. ಇದರ ಜೊತೆಗೆ ಲೇಡಿ ಓರಿಯೆಂಟೆಡ್ ಸೈರನ್ ಎಂಬ ಸಿನೆಮಾದಲ್ಲಿ, ಮಾಸ್ ಮಹಾರಾಜ ರವಿತೇಜ ಜೊತೆಗೆ ಈಗಲ್ ಎಂಬ ಸಿನೆಮಾದಲ್ಲಿ ಸಹ ನಟಿಸುತ್ತಿದ್ದಾರೆ. ಈ ರೀತಿಯಲ್ಲಿ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Most Popular

To Top