News

ಪ್ರೀತಿ ಹೆಸರಲ್ಲಿ ಯುವತಿಯ ಬಾಯಿಗೆ ಖಾರದಪುಡಿ ತುರುಕಿ, ತುಟಿಗೆ ಫೆವಿಕಿಕ್ ಅಂಟಿಸಿ ಅತ್ಯಾಚಾರ.….!

ಪ್ರೀತಿಯ ಹೆಸರಿನಲ್ಲಿ ಅನೇಕ ದುರ್ಘಟನೆಗಳು ನಡೆಯುತ್ತಿರುವುದು ಕೇಳಿದ್ದೇವೆ. ಪ್ರೀತಿ ನಿರಾಕರಿಸಿದ್ದಕ್ಕೆ, ಕೊಲೆ, ಆತ್ಮಹತ್ಯೆ, ಹಲ್ಲೆಗಳಂತಹ ಘಟನೆಗಳ ಬಗ್ಗೆ ಸುದ್ದಿಗಳನ್ನು ಕೇಳಿರುತ್ತೇವೆ. ಇದೀಗ ಅದೇ ಮಾದರಿಯ ಘಟನೆಯೊಂದು ನಡೆದಿದೆ. ಪ್ರೀತಿಯ ನಾಟವಾಡಿದ ಯುವಕ 23 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಕೂಡಿಟ್ಟು ಆಕೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಆಯನ್ ಪಠಾನ್ ಎಂಬಾತ 23ರ ಯುವತಿಯನ್ನು ಕೊಠಡಿಯಲ್ಲಿ ಕೂಡಿಟ್ಟು ಅತ್ಯಾಚಾರವೆಸಗಿದ್ದಾನೆ. ಯುವತಿಯ ಮನೆಯ ಪಕ್ಕದಲ್ಲಿದ್ದ ಆರೋಪಿ ಆಯನ್ ಪಠಾಣ್ ಪ್ರೀತಿಸುವ ನಾಟಕವಾಡಿದ್ದಾನೆ. ಬಳಿಕ ಮದುವೆಯಾಗುವುದಾಗಿಯೂ ನಂಬಿಸಿದ್ದಾನೆ. ಈ ಕುರಿತು ಯುವತಿಯ ಮನೆಯವರಿಗೂ ಸಹ ತಿಳಿದು ಎಚ್ಚರಿಕೆ ನೀಡಿದ್ದಾರೆ. ಆದರೂ ಆಯನ್ ಪಠಾಣ್ ಕಾಟ ವಿಪರೀತವಾಗುತ್ತಿದ್ದಂತೆ ಬೇರೆ ಗ್ರಾಮಕ್ಕೆ ತೆರಳಿದ್ದರು. ಆದರೆ ಪಠಾಣ್ ಮಾತಿಗೆ ಯುವತಿ ಮರುಳಾಗಿ ಮತ್ತೆ ಗುನಾ ಗ್ರಾಮಕ್ಕೆ ಆಗಮಿಸಿದ್ದಾಳೆ. ಮಾತುಕತೆ ಮಾಡಲು ಆಕೆಯನ್ನು ಕರೆಸಿಕೊಂಡಿದ್ದ ಆರೋಪಿ ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡಲು ಒತ್ತಾಯ ಮಾಡಿದ್ದಾನೆ. ಬಳಿಕ ಮೋಸಹೋಗಿದ್ದಾಗಿ ಯುವತಿಗೆ ಅರಿವಾಗುತ್ತಿದ್ದಂತೆ ಆತನಿಂದ ಹೊರಬರಲು ಆರಂಭಿಸಿದ್ದಾಳೆ. ಆದರೆ ಕೊಠಡಿಯಲ್ಲಿ ಕೂಡಿ ಹಾಕಿದ ಆಯನ್, ಬಾಯಿಗೆ ಖಾರದ ಪುಡಿ ಹಾಕಿ ತುಟಿಗಳಿಗೆ ಗಮ್ ಹಾಕಿ ಕ್ರೂರವಾಗಿ ಅತ್ಯಾಚಾರವೆಸಗಿದ್ದಾನೆ.

ಇನ್ನೂ ಈ ಕುರಿತು ಸ್ಥಳೀಯರಿಗೆ ಮಾಹಿತಿ ತಿಳಿದು ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಆರೋಪಿ ಆಯನ್ ಪಠಾನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನೂ ಯುವತಿಯ ಕುಟುಂಬಸ್ಥರು ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ತಮ್ಮ ಮಗಳ ಮೇಲೆ ಹಲ್ಲೆ ಮಾಡಿದಂತಹ ಆರೋಪಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಅಸ್ವಸ್ಥಗೊಂಡ ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯ ವಿರುದ್ದ ಐಪಿಸಿ ಸೆಕ್ಷನ್ 376, 294, 323 ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Most Popular

To Top