Film News

ಡಿವೋರ್ಸ್ ಆಗಿ 7 ತಿಂಗಳು, ಈಗ ಮಕ್ಕಳು ಬೇಕು ಎಂದ ಮೆಗಾ ಡಾಟರ್ ನಿಹಾರಿಕಾ, ವೈರಲ್ ಆದ ಕಾಮೆಂಟ್ಸ್……!

ಮೆಗಾ ಕುಟುಂಬದ ಏಕೈಕ ನಟಿ ನಿಹಾರಿಕಾ ಕೊಣಿದೆಲಾ ಕೆಲವು ತಿಂಗಳುಗಳಿಂದ ಸದಾ ಸುದ್ದಿಯಲ್ಲೇ ಇರುತ್ತಾರೆ. ಅದರಲ್ಲೂ ಕೆಲವು ದಿನಗಳ ಹಿಂದೆಯಷ್ಟೆ ಆಕೆ ಚೈತನ್ಯ ಜೊನ್ನಲಗಡ್ಡ ಜೊತೆಗೆ ವಿಚ್ಚೇದನ ಪಡೆದುಕೊಂಡು ಸುದ್ದಿಯಾಗಿದ್ದರು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಕೆಲವು ತಿಂಗಳುಗಳ ಹಿಂದೆಯಷ್ಟೆ ಆಕೆ ವಿಚ್ಚೇದನ ಪಡೆದುಕೊಂಡಿದ್ದರು. ಇದೀಗ ಆಕೆ ಮಕ್ಕಳನ್ನು ಪಡೆಯುವ ಬಗ್ಗೆ ಕಾಮೆಂಟ್ಸ್ ಮಾಡಿದ್ದು, ಆಕೆಯ ಕಾಮೆಂಟ್ ಗಳು ವೈರಲ್ ಆಗುತ್ತಿವೆ.

ಸದ್ಯ ಮೆಗಾ ಡಾಟರ್‍ ನಿಹಾರಿಕಾ ಸಿನಿರಂಗದಲ್ಲಿ ಸಕ್ಸಸ್ ಕಾಣಲು ತುಂಬಾನೆ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮದುವೆಯಾಗುವುದಕ್ಕೂ ಮುಂಚೆ ಆಕೆ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದ್ದರೂ ಸಹ ಆಕೆ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಮದುವೆಯಾದ ಬಳಿಕ ಸಿನೆಮಾಗಳಿಂದ ದೂರವೇ ಉಳಿದರು. ಆದರೆ ಆಕೆ ಕೆಲವೊಂದು ಕಾರಣಗಳಿಂದ ಚೈತನ್ಯ ಜೊನ್ನಲಗಡ್ಡ ಜೊತೆಗೆ ವಿಚ್ಚೇದನ ಪಡೆದುಕೊಂಡಿದ್ದಾರೆ. ಇದೀಗ ಸಿನೆಮಾಗಳಲ್ಲಿ ನಟಿಸಲು ಆಫರ್‍ ಗಳಿಗಾಗಿ ಸಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ವೆಬ್ ಸಿರೀಸ್ ಗಳಲ್ಲೂ ಸಹ ತನ್ನ ಅದೃಷ್ಟವನ್ನು ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ಇನ್ನೂ ನಿಹಾರಿಕಾ ಚೈತನ್ಯ ಜೊನ್ನಲಗಡ್ಡ ಜೊತೆಗೆ ವಿಚ್ಚೇದನ ಪಡೆದುಕೊಂಡ ಬಳಿಕ ಸದಾ ಒಂದಲ್ಲ ಒಂದು ಪೋಸ್ಟ್ ಮಾಡುವ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಇದೀಗ ಆಕೆ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಆಕೆ ಕೆಲವೊಂದು ಕಾಮೆಂಟ್ ಗಳನ್ನು ಮಾಡಿದ್ದು, ಅವು ವೈರಲ್ ಆಗುತ್ತಿವೆ. ಸಂದರ್ಶನದಲ್ಲಿ ಮಾತನಾಡುತ್ತಾ ನನಗೆ ಮಕ್ಕಳು ಎಂದು ತುಂಬಾ ಇಷ್ಟ, ನಾನು ಮಕ್ಕಳನ್ನು ಪಡೆಯಬೇಕು ಎಂದು ಹೇಳಿದ್ದಾರೆ. ಜೊತೆಗೆ ಪರೋಕ್ಷವಾಗಿ ತಾನು ಎರಡನೇ ಮದುವೆ ಮಾಡಿಕೊಳ್ಳುವುದಾಗಿ ಸಹ ಹೇಳಿದ್ದಾರೆ. ಇನ್ನೂ ನಿಹಾರಿಕಾ ಕಾಮೆಂಟ್ ಗಳು ವೈರಲ್ ಆಗುತ್ತಿದ್ದು, ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ.

ವಿಚ್ಚೇದನ ಪಡೆದುಕೊಂಡ ಬಳಿಕ ನಿಹಾರಿಕಾ ಸಿನೆಮಾಗಳ ಮೇಲೆ ಪುಲ್ ಪೋಕಸ್ ಇಟ್ಟಿದ್ದಾರೆ. ಅವಕಾಶಗಳಿಗಾಗಿ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿದ್ದಾರೆ. ಪಿಂಕ್ ಎಲಿಫೆಂಟಾ ನಿರ್ಮಾಣ ಸಂಸ್ಥೆಯ ಮೂಲಕ ಕೆಲವೊಂದು ವೆಬ್ ಸಿರೀಸ್ ಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ಕೆಲವೊಂದು ಸಿನೆಮಾಗಳಲ್ಲಿ ಸಹ ಆಕೆ ನಟಿಸುತ್ತಿದ್ದಾರೆ.

Most Popular

To Top