News

ರಾಜ್ಯದ ಹಲವು ಕಡೆ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಡಿ.7 ರವೆಗೂ ಮಿಹಾಂಗ್ ಸೈಕ್ಲೋನ್ ಎಫೆಕ್ಟ್…..!

ಕರ್ನಾಟಕ ರಾಜ್ಯದಲ್ಲಿ ಮಿಹಾಂಗ್ ಚಂಡಮಾರುತದ ಪರಿಣಾಮ ಎದುರಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಡಿ.7 ರವರೆಗೂ ಉತ್ತಮ ಮಳೆಯಾಗಲಿದೆಯಂತೆ. ಶುಕ್ರವಾರ ಕರಾವಳಿ, ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಡಿ.4 & 5 ರಂದು ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.

ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ಶನಿವಾರವೂ ಸಹ ಉತ್ತಮ ಮಳೆಯಾಗುವ ಮುನ್ಸೂಚನೆಯಿದ್ದು, ಎಲ್ಲೋ ಅಲರ್ಟ್ ಸಹ ಘೋಷಣೆಯಾಗಿದೆ. ಕುದುರೆಮುಖ, ಪುತ್ತೂರು, ಬಂಟ್ವಾಳ, ಮೂಡಬಿದಿರೆ ಸೇರಿದಂತೆ ಹಲವು ಕಡೆ ಶುಕ್ರವಾರ ಭಾರಿ ಮಳೆಯಾಗಿದೆ. ಚಾಮರಾಜನಗರ, ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ದಕ್ಷಣ ಹಾಗೂ ಉತ್ತರ ಕನ್ನಡ, ತುಮಕೂರು, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಪಪ್ರಮಾಣದ ಚದುರಿದ ಮಳೆಯಾಗಿದೆ ಎನ್ನಲಾಗಿದೆ.

ಇನ್ನೂ ಭಾನುವಾರ ರಾಜ್ಯದ ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಅದೇ ರೀತಿ ಡಿಸೆಂಬರ್‍ 4 ರಂದು ಕಲ್ಯಾಣ ಕರ್ನಾಟಕದ ಹಲವು ಕಡೆ ಉತ್ತಮ ಮಳೆಯಾಗುವ ಸೂಚನೆ ಇದೆ. ಯಾದಗಿರಿ, ರಾಯಚೂರು, ವಿಜಯನಗರ, ವಿಜಯಪುರ, ಗದಗ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ ಎನ್ನಲಾಗಿದೆ.

Most Popular

To Top