News

ಹೊಸ ಪಡಿತರ ಚೀಟಿ ಅರ್ಜಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಆಹಾರ ಸಚಿವ….!

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರದಲ್ಲಿದ್ದು, ಚುನಾವಣೆ ಸಮಯದಲ್ಲಿ ಘೋಷಣೆ ಮಾಡಿದ ಎಲ್ಲಾ ಗ್ಯಾರಂಟಿಗಳನ್ನು ಹಂತ ಹಂತವಾಗಿ ನೀಡುತ್ತಾ ಬರುತ್ತಿದೆ. ಇನ್ನೂ ಈಗಾಗಲೇ ಸಾವಿರಾರು ಸಂಖ್ಯೆಯ ಕುಟುಂಬಗಳು ಹೊಸ ಬಿಪಿಎಲ್ ರೇಷನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹೊಸ ರೇಷನ್ ಕಾರ್ಡ್‌ಗಾಗಿ ಅರ್ಜಿ ಹಾಕಿದವರಿಗೆ ರಾಜ್ಯ ಆರೋಗ್ಯ ಸಚಿವ ಕೆ.ಹೆಚ್.ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದಾರೆ.

ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸ ಪಡಿತರ ಚೀಟಿ ವಿತರಣೆಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳನ್ನು ನೀಡಿದ್ದಾರೆ. ಅನೇಕರು ವೈದ್ಯಕೀಯ ಸೌಲಭ್ಯ ಪಡೆದುಕೊಳ್ಳಲು ಕಾರ್ಡ್ ಕೇಳುತ್ತಿದ್ದಾರೆ. ವೈದ್ಯಕೀಯ ಸೌಲಭ್ಯಕ್ಕೆ ಆದ್ಯತೆ ನೀಡಿದ್ದೇವೆ ಆದ ಕಾರಣ ಹೊಸ ಕಾರ್ಡ್ ನೀಡಲು ತೀರ್ಮಾನ ಮಾಡಿದ್ದೇವೆ. ಇನ್ನೂ ಇಲ್ಲಿಯವರೆಗೂ ಮೂರು ಲಕ್ಷ ಹೊಸ ಅರ್ಜಿಗಳು ಬಂದಿದೆ. ಚುನಾವಣೆಯ ಕಾರಣದಿಂದ ವಿಳಂಭವಾಗಿದೆ. ಇದೀಗ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಆದಷ್ಟು ಶೀಘ್ರ ಅರ್ಜಿ ವಿಲೇವಾರಿ ಮಾಡುತ್ತೇವೆ. ಜೊತೆಗೆ ಪಡಿತರ ಚೀಟಿಯ ತಿದ್ದುಪಡಿ ಸಹ ಮಾಡುತ್ತೇವೆ. ಸರ್ವರ್‍ ಸಹ ಒಪೆನ್ ಆಗಿದೆ ಎಂದು ತಿಳಿಸಿದರು.

ಇನ್ನೂ ಆಗಸ್ಟ್ ಮಾಹೆಯಲ್ಲೂ ಸಹ 5 ಕೆಜಿ ಅಕ್ಕಿಯ ಬದಲು ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡುತ್ತೇವೆ. ಹಣ ವರ್ಗಾವಣೆ ಮಾಡಲು ಹಣದ ಕೊರತೆ ಇಲ್ಲ. ಚುನಾವಣೆಯ ಸಮಯದಲ್ಲಿ ಅಕ್ಕಿ ಕೊಡುವ ಗ್ಯಾರಂಟಿ ನೀಡಿದ್ದೇವೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ. ಸಿಎಂ ಸಿದ್ದರಾಮಯ್ಯ ನವರಿಗೆ ತುಂಭಾ ಅನುಭವವಿದೆ. ಅನ್ನ ಭಾಗ್ಯ ಯೋಜನೆ ಜಾರಿ ಮಾಡಿದ್ದು ಸಹ ಅವರೇ ಎಂದರು. ಇನ್ನೂ ಮುಂದಿನ ತಿಂಗಳು ಅನ್ನ ಭಾಗ್ಯ ಯೋಜನೆಯಡಿ ಅಕ್ಕಿ ನೀಡುತ್ತೇವೆ,. ಹೊಸ ಅರ್ಜಿದಾರರಿಗೂ ಸಹ ಅಕ್ಕಿ ನೀಡುತ್ತೇವೆ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಅಕ್ಕಿ ಕೊಡುವಂತೆ ಮನವಿ ಸಹ ಮಾಡಿದ್ದೇವೆ. ಮುಂದಿನ ತಿಂಗಳು ತಲಾ ೧೦ ಕೆಜಿ ಅಕ್ಕಿ ನೀಡಲು ಕ್ರಮ ವಹಿಸಲಾಗುತ್ತದೆ ಎಂದರು.

Most Popular

To Top