News

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಗ್ಯಾಪ್ ರೇಪ್ ಮಾಡಿದ ದುರುಳರು, ಸೇತುವೆ ಮೇಲಿಂದ ಎಸೆದ ಕಾಮುಕರು……!

ನಾಗರೀಕ ಸಮಾಜದಲ್ಲಿ ಆಗಾಗ ಕಾಮುಕರ ಅಟ್ಟಹಾಸ ನಡೆಯುತ್ತಿರುತ್ತದೆ. 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಸೇತುವೆ ಮೇಲಿಂದ ಎಸೆದ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದ ಗ್ವಾಲಿಯರ್‍ ನಲ್ಲಿ ನಡೆದಿದೆ. ಸದ್ಯ ಸಂತ್ರಸ್ತೆ ಬಾಲಕಿಯನ್ನು ಗ್ವಾಲಿಯರ್‍ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಆರೋಪಿಗಳ ಬಂಧನಕ್ಕೆ ತನಿಖಾ ತಂಡ ಬಲೆ ಬೀಸಿದೆ.

ಮಧ್ಯಪ್ರದೇಶದ ಗ್ವಾಲಿಯರ್‍ ನಲ್ಲಿ ಹತ್ತನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯನ್ನು ಅಪರಿಸಿದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿದ್ದಾರೆ. ಅತ್ಯಾಚಾರವೆಸಗಿ ಆಕೆಯನ್ನು ಸೇತುವೆ ಮೇಲಿಂದ ಕೆಳಕ್ಕೆ ಎಸೆದಿದ್ದಾರೆ. ಇದರಿಂದಾಗಿ ಆಕೆಯ ಪಕ್ಕೆಲುಬುಗಳು, ಕಾಲುಗಳು ಮುರಿದಿದೆ. ಜೊತೆಗೆ ಆಕೆಯ ಖಾಸಗಿ ಅಂಗಾಗಳ ಮೇಲೆ ಸಹ ಗಾಯಗಳಾಗಿದೆ ಎಂದು ಹೇಳಲಾಗಿದೆ. ಇನ್ನೂ ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಗ್ವಾಲಿಯರ್‍ ನ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಕಳೆದ ಜ.29 ರಂದು ನಡೆದಿದೆ ಎಂದು ಹೇಳಲಾಗಿದೆ.

ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಗೆ ಪ್ರಜ್ಞೆ ಬಂದ ಬಳಿಕ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಬಾಲಕಿ ಕೋಚಿಂಗ್ ಗೆ ತೆರಳುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಆಕೆಯನ್ನು ಕಿಡ್ನಾಪ್ ಮಾಡಿದ್ದಾರೆ. ಬಳಿಕ ಅತ್ಯಾಚಾರ ಮಾಡಿ, ಕ್ರೂರವಾಗಿ ಥಳಿಸಿದ್ದಾರೆ. ಬಳಿಕ ಆಕೆಯನ್ನು ಸೇತುವೆಯಿಂದ ಎಸೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಹೇಳಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ವ್ಯಕ್ತಿಯೊಬ್ಬರು ಆಕೆಯ ಮನೆಯವರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನೂ ಅತ್ಯಾಚಾರವೆಸಗಿದ ಕಾಮುಕರು ನಾಪತ್ತೆಯಾಗಿದ್ದು, ಅವರನ್ನು ಬಂಧಿಸಲು ವಿಶೇಷ ಘಟಕವನ್ನು ಸಹ ರಚನೆ ಮಾಡಲಾಗಿದೆ. ಆರೋಪಿಗಳ ವಿರುದ್ದ ಪೋಕ್ಸೋ, ಗ್ಯಾಂಗ್ ರೇಪ್, ಅಪಹರಣ ಹಾಗೂ ಹಲ್ಲೆ ಕಾಯ್ದೆಗಳಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

Most Popular

To Top