News

ಡಿ.ಕೆ.ಶಿವಕುಮಾರ್ ಲೋಕಸಭಾ ಚುನಾವಣೆ ಮುಗಿದ 15 ದಿನಗಳಲ್ಲಿ ಕರ್ನಾಟಕದ ಸಿಎಂ ಆಗಲಿದ್ದಾರೆ ಎಂದ ಯತ್ನಾಳ್…..!

ಸದ್ಯ ದೇಶದಾದ್ಯಂತ ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಹೆಚ್ಚಾಗುತ್ತಿದೆ. ವಿವಿಧ ಪಕ್ಷಗಳ ನಾಯಕರುಗಳು ಸಂಚಲನಾತ್ಮಕ ಹೇಳಿಕೆಗಳನ್ನು ನೀಡುತ್ತಾ ಸುದ್ದಿಯಾಗುತ್ತಿದ್ದಾರೆ. ಈ ಹಾದಿಯಲ್ಲೇ  ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಬದಲಾಗಲಿದ್ದಾರೆ. ಚುನಾವಣೆ ಮುಗಿದ 15 ದಿನಗಳ ಬಳಿಕ ಡಿ.ಕೆ.ಶಿವಕುಮಾರ್‍ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಕರ್ನಾಟದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಕಾಂಗ್ರೇಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ಭಾರಿ ಪೈಪೋಟಿಯಿದ್ದು, ಆಯಾ ಪಕ್ಷಗಳ ನಾಯಕರುಗಳು ಸಂಚಲನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಚುನಾವಣೆ ಮುಗಿದ 15 ದಿನಗಳಲ್ಲಿ ಡಿ.ಕೆ.ಶಿವಕುಮಾರ್‍ ಸಿಎಂ ಆಗುವ ಪ್ಲಾನ್ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೇಸ್ ಒಡೆದು ಹೋಗುತ್ತದೆ. ಹೊಸ ಸರ್ಕಾರ ರಚನೆಯಾಗುತ್ತದೆ. ಹಾಲಿ ಸಿಎಂ ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಕೆಳಗೆ ಇಳಿದ ಕೂಡಲೇ ಸರ್ಕಾರ ಸಹ ಪತನವಾಗುತ್ತದೆ. ಈ ನಿಟ್ಟಿನಲ್ಲಿ ತಮ್ಮ ಪರವಾಗಿರುವ ಲೋಕಸಭಾ ಸದಸ್ಯರನ್ನು ಆಯ್ಕೆ ಮಾಡಲು ಡಿಕೆಶಿ ಭಾರಿ ಪ್ಲಾನ್ ಮಾಡಿದ್ದಾರೆ. ಇದೇ ಕಾರಣದಿಂದ ಬಾಗಲಕೋಟೆಯಲ್ಲಿ ಒಕ್ಕಲಿಗರು, ಲಿಂಗಾಯತರು ಒಂದೇ ಎಂಬ ಹೇಳಿಕೆ ಸಹ ಕೊಟ್ಟಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.

ಸಚಿವ ಶಿವಾನಂದ ಪಾಟೀಲ್ ಮಗಳನ್ನು ಗೆಲ್ಲಿಸಿದರೇ, ಶಿವಾನಂದ ಪಾಟೀಲ್ ಬೆಂಬಲ ಡಿಕೆಶಿ ಸಿಗಲಿದೆ. ನಾನು ಅವರು ಸೇರಿ ಸಿದ್ದರಾಮಯ್ಯನವರನ್ನು ಕೆಳಗೆ ಇಳಿಸೋಕೆ ಪ್ಲಾನ್ ಮಾಡಿದ್ದೇವೆ ಎಂಬ ಸಂದೇಶವನ್ನು ಸಹ ಡಿಕೆಶಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೇಸ್ ಒಡೆದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಸಿದ್ದರಾಮಯ್ಯನವರು ತಮ್ಮ ಶಕ್ತಿ ಪ್ರದರ್ಶನ ಮಾಡದೇ ಹೋದರೇ ಅವರು ಸಿಎಂ ಸ್ಥಾನ ಕಳೆದುಕೊಳ್ಳುವುದು ಗ್ಯಾರಂಟಿ. ಕಾಂಗ್ರೇಸ್ ಸರ್ಕಾರದಿಂದ ರಾಜ್ಯದ ಜನತೆಗೆ ಕೊಟ್ಟ ಪಂಚ ಗ್ಯಾರಂಟಿಗಳಲ್ಲಿ ಸಿದ್ದರಾಮಯ್ಯನರವ ಸಿಎಂ ಸ್ಥಾನ ಹೋಗೋದು ಸಹ ಒಂದು ಗ್ಯಾರಂಟಿ ಎಂದಿದ್ದಾರೆ.

Most Popular

To Top