News

ರಾಜ್ಯದಾದ್ಯಂತ ಮುಂಗಾರು ಮಳೆಯ ಅಬ್ಬರ, ನಾಳೆಯಿಂದ ಬಿರುಗಾಳಿ ಸಹಿತ ಭಾರಿ ಮಳೆ…!

ಕರ್ನಾಟಕ ರಾಜ್ಯದಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ. ಕೆಲವೊಂದು ಜಿಲ್ಲೆಗಳಲ್ಲಿ ಸುಮಾರು 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಮೇತ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರದಲ್ಲಿ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇಂದಿನಿಂದ ಜು.25 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿದನ ಚಿಕ್ಕಮಗಳೂರು, ಶಿವಮೊಗ್ಗ, ಕೊಡುಗೂ ಸೇರಿದಂತೆ ಮತಷ್ಟು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಳಗಾವಿ, ಯಾದಗರಿ ಹಾಗೂ ದಕ್ಷಣ ಒಳನಾಡಿನ ಹಾಸನ ಬಳ್ಳಾರಿ ಜಿಲ್ಲೆಗಳಲ್ಲೂ ಸಹ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇನ್ನೂ ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆ ಅತಿ ಭಾರಿ ಮಳೆಯಾಗುವ ಸಾಧ್ಯೆತಯಿದೆ. ಆದ್ದರಿಂದ ಕರಾವಳಿ ಭಾಗದದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೂ ಜುಲೈ 25 ರವರೆಗೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ಆಗಾಗ ಭಾರಿ ಗಾಳಿ ಬೀಸುವ ಸಾಧ್ಯತೆಯಿದೆ.

ಇನ್ನೂ ಉತ್ತರ ಕರ್ನಾಟಕದ ಭಾಗದಲ್ಲಿ ಆವರಿಸಿದ್ದ ಬರದ ವಾತಾವರಣ ಇದೀಗ ಬದಲಾಗಿದೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಆಲಮಟ್ಟಿ ಸೇರಿದಂತೆ ಕೆಲವೊಂದು ಜಲಾಶಯಗಳು ಹಾಗೂ ಬ್ಯಾರೆಜ್ ಗಳ ನೀರಿನ ಒಳಹರಿವು ಸಹ ಹೆಚ್ಚಾಗಿದೆ. ಸುಮಾರು ಶೇ.20 ರಷ್ಟು ಹೆಚ್ಚಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ. ಮಹಾರಾಷ್ಟ್ರದಲ್ಲಿ ಸಹ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ, ಭೀಮಾ ಸೇರಿದಂತೆ ಅನೇಕ ನದಿಗಳ ನೀರಿನ ಮಟ್ಟ ಏರಿಕೆ ಆಗಿದೆ. ಜೊತೆಗೆ ಪ್ರವಾಹದ ಆತಂಕ ಸಹ ಶುರುವಾಗಿದೆ. ಬೆಳಗಾವಿಯಲ್ಲಿ 14 ಸೇತುವೆಗಳು ಸಹ ಮುಳುಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ನೂರಾರು ಎಕರೆ ಬೆಳೆ ಸಹ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Most Popular

To Top