ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ವೇಳಾಪಟ್ಟಿ ಬಿಡುಗಡೆ……!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಪ್ರತೀ ವರ್ಷ ಮೈಸೂರಿನಲ್ಲಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ. ಈ ಬಾರಿ ಸಹ ಅದ್ದೂರಿಯಾಗಿ ದಸರಾ ಹಬ್ಬವನ್ನು ಆಚರಿಸಲು ಸಿದ್ದತೆಗಳು ನಡೆಯುತ್ತಿದೆ.…

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಪ್ರತೀ ವರ್ಷ ಮೈಸೂರಿನಲ್ಲಿ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ. ಈ ಬಾರಿ ಸಹ ಅದ್ದೂರಿಯಾಗಿ ದಸರಾ ಹಬ್ಬವನ್ನು ಆಚರಿಸಲು ಸಿದ್ದತೆಗಳು ನಡೆಯುತ್ತಿದೆ. ಇದೀಗ ದಸರಾ ಆಚರಣಾ ಸಮಿತಿ ನಾಡಹಬ್ಬದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಯಾವ ದಿನಗಳಂದು ಏನೆಲ್ಲಾ ಕಾರ್ಯಕ್ರಮಗಳನ್ನು ನಡೆಯಲಿದೆ ಎಂಬ ಮಾಹಿತಿ ನೀಡಿದೆ.

ಮೈಸೂರಿನ ದಸರಾ ಆಚರಣಾ ಸಮಿತಿ ನವರಾತ್ರಿ ಆಚರಣೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಯಾವ ದಿನ ಯಾವ ಕಾರ್ಯಕ್ರಮಗಳು ನಡೆಯಲಿದೆ ಎನ್ನುವ ಮಾಹಿತಿ ನೀಡಿದೆ. ಅಕ್ಟೋಬರ್‍ 23 ರ ಸೋಮವಾರದಿಂದ ಕಾರ್ಯಕ್ರಮಗಳು ಆರಂಭವಾಗಲಿದೆ. ಅ.23 ರ ಸೋಮವಾರ ಆಯುಧ ಪೂಜೆ, ಮರುದಿನ ವಿಜಯದಶಮಿ ಸಂಭ್ರಮ ಆರಂಭವಾಗಲಿದೆ. ಅಂದು ಮದ್ಯಾಹ್ನ ಸಿಎಂ ಸಿದ್ದರಾಮಯ್ಯ ನಂದಿ ಧ್ವಜ ಪೂಜೆ ಮಾಡಲಿದ್ದಾರೆ. ಸಂಜೆ ಜಂಬೂ ಸವಾರಿ ಆರಂಭವಾಗಲಿದೆ ಎನ್ನಲಾಗಿದೆ.

ಅರಮನೆ ಪೂಜೆಗಳು

  • ಅ.15 ಸಾಯಂಕಾಲ30 ರಿಂದ 7.15 ರ ಶುಭಮೇಷ ಲಗ್ನದಲ್ಲಿ ಅರಮನೆಯಲ್ಲಿನ ಪೂಜೆಗಳು ಆರಂಭವಾಗಲಿವೆ.
  • ಅ.20 ಶುಕ್ರವಾರ: ಕಾತ್ಯಾಯಿನೀ – ಸರಸ್ವತಿ ಪೂಜೆ ನಡೆಯಲಿದೆ.
  • ಅ.21 ಶನಿವಾರ: ಕಾಳರಾತ್ರಿ, ಮಹಿಷಾಸುರ ಸಂಹಾರ ನಡೆಯಲಿದೆ.
  • ಅ.23 ಸೋಮವಾರ: ಆಯುಧ ಪೂಜೆ ನಡೆಯಲಿದೆ.
  • ಅ.24 ಮಂಗಳವಾರ: ವಿಜಯದಶಮಿ ಆಚರಣೆ ನಡೆಯಲಿದೆ. ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಮುಖ್ಯಮಂತ್ರಿಯವರು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 4.40 ರಿಂದ 5.00ರ ಶುಭ ಮೀನ ಲಗ್ನದಲ್ಲಿ ಮಾನ್ಯ ಮುಖ್ಯಮಂತ್ರಿಯವರಿಂದ ಮತ್ತು ಗಣ್ಯಾತಿಗಣ್ಯರಿಂದ ಪುಷ್ಪಾರ್ಚನೆ ನಡೆಯಲಿದೆ. ನಂತರ ವಿಶ್ವವಿಖ್ಯಾತ ಜಂಬೂ ಸವಾರಿ ಪ್ರಾರಂಭವಾಗಲಿದೆ.
  • ಅ.26 ಭಾನುವಾರ: ಬೆಟ್ಟದ ಶ್ರೀಚಾಮುಂಡೇಶ್ವರಿ ರಥೋತ್ಸವ ನಡೆಯಲಿದೆ.