ಇಂದಿನಿಂದ ನಂದಿನಿ ಹಾಲು ಮೊಸರು ದುಬಾರಿ, ದರ ಹೆಚ್ಚಳ ಮಾಡಿದ ಕೆಎಂಎಫ್….!

Follow Us :

ಕರ್ನಾಟಕ ರಾಜ್ಯದಲ್ಲಿ ಗ್ರಾಹಕರಿಗೆ ಮತ್ತೊಂದು ಹೊರೆ ಬೀಳಲಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ತತ್ತರಿಸುತ್ತಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಬಿದಿದ್ದೆ. ನಂದಿನಿ ಹಾಲು ಪ್ರತೀ ಲೀಟರ್‍ ಗೆ ಹಾಗೂ ಮೊಸರಿನ ದರ ಪ್ರತಿ ಕೆಜಿಗೆ 3 ರೂಪಾಯಿ ಏರಿಕೆ ಯಾಗಿದ್ದು, ಆಗಸ್ಟ್ 1 ರಿಂದಲೇ ಈ ದರ ಅನ್ವಯವಾಗಲಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ ಜುಲೈ 21 ರಂದು ಸಿಎಂ ಸಿದ್ದರಾಮಯ್ಯನವರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಜುಲೈ 21 ರಂದು ಹಾಲಿನ ದರದ ಏರಿಕೆಯ ಬಗ್ಗೆ ಸಭೆ ನಡೆದಿತ್ತು. ಈ ಸಭೆಯಲ್ಲಿ ಹಾಲಿನ ದರ ಏರಿಕೆಯ ಬಗ್ಗೆ ನಿರ್ಧಾರ ಸಹ ತೆಗೆದುಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಹಕರು ಹಾಗೂ ರೈತರನ್ನು ದೃಷ್ಟಿಯಲ್ಲಿಟ್ಟುಕೊಂಡು ಮೂರು ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಕಳೆದ 2022 ರಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಮೇವಿನ ತೊಂದರೆ ಸೇರಿದಂತೆ ಜಾನುವಾರುಗಳಲ್ಲಿ ಕಂಡು ಬಂದ ಚರ್ಮಗಂಟು ರೋಗದ, ಹಾಲಿನ ಮಾರಾಟ ದರ ಹೆಚ್ಚಳದ ವಿಳಂ ಸೇರಿದಂತೆ ವಿವಿಧ ಕಾರಣಗಳಿಂದ ಹೈನುಗಾರರು ಹೈನುಗಾರಿಕೆಯಿಂದ ವಿಮುಖರಾಗುತ್ತಿದ್ದಾರೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದರು.

ಇನ್ನೂ ಜಿಲ್ಲಾ ಹಾಲು ಒಟ್ಟೂಟಗಳಲ್ಲಿ ಹಾಲಿನ ಶೇಖರಣೆ ಸಹ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರನ್ನು ಉತ್ತೇಜಿಸಲು ಉತ್ತಮ ಹಾಲು ಖರೀದಿ ದರ ನೀಡುವುದು ಅತ್ಯಗತ್ಯವಾಗಿದೆ. ಹಾಲು ಉತ್ಪಾದನಾ, ಹಾಲು ಸಂಸ್ಕರಣೆ ವೆಚ್ಚಗಳು ಹಾಗೂ ರಾಜ್ಯದಲ್ಲಿ ಹೈನೋದ್ಯಮ ಉತ್ತೇಜಿಸಲು ಹೆಚ್ಚು ಮಾಡಿರುವ ಮಾರಾಟ ದರವನ್ನು ರೈತರಿಗೆ ವರ್ಗಾಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಹಾಲಿನ ದರ ಏರಿಕೆಯಿಂದಾಗಿ ಸಾರ್ವಜನಿಕರಿಗೆ ಮತಷ್ಟು ಹೊರೆ ಬಿದ್ದಂತಾಗಿದೆ.