ಸೀರೆಯಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ ರಶ್ಮಿಕಾ, ಸೀರೆಯಲ್ಲಿ ಕಣ್ಣು ಕುಕ್ಕುವಂತಹ ಪೋಸ್ ಕೊಟ್ಟ ನ್ಯಾಷನಲ್ ಕ್ರಷ್…..!

Follow Us :

ಸ್ಯಾಂಡಲ್ ವುಡ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಕಡಿಮೆ ಸಮಯದಲ್ಲೇ ಭಾರಿ ಫೇಂ ಪಡೆದುಕೊಂಡರು. ತೆಲುಗು ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟು ಅಲ್ಲೂ ಸಹ ಒಳ್ಳೆಯ ಸಾಧನೆ ಮಾಡಿದರು. ತೆಲುಗು, ತಮಿಳು ಹಾಗೂ ಹಿಂದಿ ಸಿನೆಮಾಗಳಲ್ಲೂ ಸಹ ರಶ್ಮಿಕಾ ಎಂಟ್ರಿ ಕೊಟ್ಟರು. ಶೀಘ್ರದಲ್ಲೇ ಆಕೆ ಯಾನಿಮಲ್ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದು, ಈ ಸಿನೆಮಾದ ಪ್ರಮೋಷನ್ ಕೆಲಸಗಳು ಭರದಿಂದ ಸಾಗಿದೆ. ಪ್ರಮೋಷನ್ ನಿಮಿತ್ತ ಆಕೆ ಬ್ಲಾಕ್ ಕಲರ್‍ ಸೀರೆಯಲ್ಲಿ ಮಸ್ಮರೈಜ್ ಮಾಡಿದ್ದಾರೆ.

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲೇ ಸ್ಟಾರ್‍ ನಟಿಯಾದರು. ಆಕೆ ಸದಾ ಒಂದಲ್ಲ ಒಂದು ವಿಚಾರಕ್ಕಾಗಿ ಸುದ್ದಿಯಾಗುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದು, ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಇನ್ನೂ ಆಕೆ ಹಂಚಿಕೊಂಡ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಸಹ ಆಗುತ್ತಿರುತ್ತದೆ. ಜೊತೆಗೆ ಅದೇ ಮಾದರಿಯಲ್ಲಿ ಆಕೆಯನ್ನು ವಿಮರ್ಶೆ ಸಹ ಮಾಡುತ್ತಿರುತ್ತಾರೆ. ಇನ್ನೂ ಆಗಾಗ ಆಕೆ ಕೆಲವೊಮ್ಮೆ ಜಾಹಿರಾತುಗಳಲ್ಲೂ ಸಹ ನಟಿಸುತ್ತಿರುತ್ತಾರೆ. ಸೋಷಿಯಲ್ ಮಿಡಿಯಾ ಮೂಲಕವೂ ಸಹ ಅಭಿಮಾನಿಗಳು ರಂಜಿಸುತ್ತಲೇ ಇರುತ್ತಾರೆ. ಇದೀಗ ಆಕೆ ಯಾನಿಮಲ್ ಸಿನೆಮಾದ ಪ್ರಮೋಷನ್ ಕಾರ್ಯಕ್ರಮಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ.

ಯಾನಿಮಲ್ ಸಿನೆಮಾ ಪ್ರಮೋಷನ್ ನಿಮಿತ್ತ ಪತ್ರಿಕಾ ಸಮಾವೇಶವನ್ನು ಏರ್ಪಡಿಸಲಾಗಿತ್ತು. ಈ ವೇಳೆ ರಶ್ಮಿಕಾ ಕ್ಯಾಮೆರಾಗೆ ಬ್ಯೂಟಿಪುಲ್ ಲುಕ್ಸ್ ಕೊಟ್ಟಿದ್ದಾರೆ. ಸೀರೆಯಲ್ಲಿ ಮತಷ್ಟು ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಸೀರೆಯಲ್ಲಿ ಕಣ್ಣುಕುಕ್ಕುವಂತೆ ಪೋಸ್ ಗಳನ್ನು ಕೊಟ್ಟಿದ್ದಾರೆ. ಪ್ರಿಟೆಂಡ್ ಸೀರೆಯಲ್ಲಿ ರಶ್ಮಿಕಾ ಮಂದಣ್ಣ ಮತಷ್ಟು ಸೌಂದರ್ಯವನ್ನು ಸ್ವಂತ ಮಾಡಿಕೊಂಡಿದ್ದಾರೆ. ಈವೆಂಟ್ ಗೂ ಮುಂಚೆ ಆಕೆ ಕ್ಯಾಮೆರಾಗಳಿಗೆ ಪೋಸ್ ಕೊಟ್ಟಿದ್ದಾರೆ. ಸಿಂಪಲ್ ಆಗಿದ್ದರೂ ಸಹ ಕ್ಲಾಸಿಯಾಗಿ ಲುಕ್ಸ್ ಕೊಟ್ಟಿದ್ದಾರೆ. ಬಾಲಿವುಡ್ ಗೆ ಹಾರಿದ ಬಳಿಕ ರಶ್ಮಿಕಾ ಮಂದಣ್ಣ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಇತ್ತೀಚಿಗೆ ಸಂಪ್ರದಾಯಬದ್ದವಾಗಿಯೂ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ಸೀರೆಯಲ್ಲಿ ಅಭಿಮಾನಿಗಳನ್ನು ಆಕರ್ಷಣೆ ಮಾಡುತ್ತಿದ್ದಾರೆ. ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ.

ಯಾನಿಮಲ್ ಸಿನೆಮಾ ಡಿಸೆಂಬರ್‍ 1 ರಂದು ಪ್ಯಾನ್ ಇಂಡಿಯಾ ಸಿನೆಮಾ ಆಗಿ ಬಿಡುಗಡೆಯಾಗಲಿದೆ. ಈ ಸಿನೆಮಾದಲ್ಲಿ ರಶ್ಮಿಕಾ ಹಾಗೂ ರಣಬೀರ್‍ ಕಪೂರ್‍ ಜೋಡಿಯಾಗಿ ನಟಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಸಿನೆಮಾದ ಟ್ರೈಲರ್‍ ಸಹ ಬಿಡುಗಡೆಯಾಗಿದ್ದು, ಒಳ್ಳೆಯ ರೆಸ್ಪಾನ್ಸ್ ಸಹ ಪಡೆದುಕೊಂಡಿದೆ. ಈ ಸಿನೆಮಾದ ಜೊತೆಗೆ ರಶ್ಮಿಕಾ ಕೈಯಲ್ಲಿ ಪುಷ್ಪಾ-2 ಸಿನೆಮಾದಲ್ಲೂ ಸಹ ನಟಿಸಿದ್ದು, ಈ ಸಿನೆಮಾದ ಮೇಲೆ ಆಕೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.