News

ಯುವನಿಧಿ ಗ್ಯಾರಂಟಿಗೆ ಡಿ.26 ರಂದು ಅಧಿಕೃತ ಚಾಲನೆ, ಸಿಎಂ, ಡಿಸಿಎಂ ರಿಂದ ಚಾಲನೆ…..! op

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೇಸ್ ಸರ್ಕಾರ ಚುನಾವಣೆ ಸಮಯದಲ್ಲಿ ನೀಡಿದಂತೆ ಯುವನಿಧಿ ಗ್ಯಾರಂಟಿಯನ್ನು ಜಾರಿಗೊಳಿಸಲು ಸಮಯ ಹತ್ತಿರ ಬಂದಿದೆ. ಡಿ.26 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‍ ರವರಿಂದ ಅರ್ಜಿ ಸಲ್ಲಿಕೆಗೆ ಚಾಲನೆ ಸಿಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಶರಣು ಪ್ರಕಾಶ್​ ಪಾಟೀಲ್​ ತಿಳಿಸಿದ್ದಾರೆ.

ರಾಜ್ಯದಲ್ಲಿ ಯುವನಿಧಿ ಯೋಜನೆ 4,81000 ಪದವೀಧರರು, 48,153 ಡಿಪ್ಲೊಮಾ ಪಾಸ್ ಆದವರು ಸೇರಿ ಒಟ್ಟು 5,29,153 ಫಲಾನುಭವಿಗಳಿದ್ದಾರೆ. 2023-24 ರಲ್ಲಿ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ನೀಡಲು 250 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಪದವೀಧರರಿಗೆ ಮಾಸಿಕ 3000 ಹಾಗೂ ಡಿಪ್ಲೋಮಾ ದವರಿಗೆ ಮಾಸಿಕ 1500 ನಿರುದ್ಯೋಗ ಭತ್ಯೆಯನ್ನು ಎರಡು ವರ್ಷದವರೆಗೆ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. 2022-23 ರಲ್ಲಿ ವ್ಯಾಸಂಗ ಮಾಡಿ 2023 ರಲ್ಲಿ ಪಾಸ್ ಆಗಿರಬೇಕು. ಕರ್ನಾಟಕದಲ್ಲಿ ಕನಿಷ್ಟ ಆರು ವರ್ಷಗಳ ಕಾಲ ವಿದ್ಯಾಭ್ಯಾಸ ಮಾಡಿರಬೇಕು. ಸ್ವಯಂ ಉದ್ಯೋಗಿಗಳು, ಸರ್ಕಾರಿ, ಅನುದಾನಿತ, ಖಾಸಗಿ ನೌಕರರಾದರೇ ಹಾಗೂ ವಿದ್ಯಾಭ್ಯಾಸ ಮುಂದುವರೆಸುವಂತಹವವರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹತೆ ಹೊಂದುವುದಿಲ್ಲ ಎಂದು ಸಚಿವರು ಶರಣು ಪ್ರಕಾಶ್ ರವರು ಮಾಹಿತಿ ನೀಡಿದ್ದಾರೆ.

ಇನ್ನೂ ಈ ಯೋಜನೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ ಹಾಗೂ ಸೇವಾ ಸಿಂಧು ಮೂಲಕ ಸಲ್ಲಿಸಬಹುದಾಗಿದೆ. ಎಸ್.ಎಸ್.ಎಲ್.ಸಿ, ಪಿಯುಸಿ ಅಂಕಪಟ್ಟಿ, ಸಿಇಟಿ ಸಂಖ್ಯೆ, ರೇಷನ್ ಕಾರ್ಡ್, ಪದವಿ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ. ಶಿವಮೊಗ್ಗದಲ್ಲಿ ವಿವೇಕಾನಂದ ಜಯಂತಿಯಂದು ಡಿಬಿಟಿ ಮೂಲಕ ಅರ್ಹ ಅರ್ಜಿದಾರರ ಬ್ಯಾಂಕ್ ಖಾತೆಗೆ ಯುವನಿಧಿ ಜಮೆ ಮಾಡಲಾಗುವುದು ಎಂದು ಮಾಹಿತಿ ತಿಳಿಸಿದ್ದಾರೆ.

Most Popular

To Top