News

ಅಬುಧಾಬಿಯಲ್ಲಿ ನಿರ್ಮಾಣಗೊಂಡ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ ನರೇಂದ್ರ ಮೋದಿ…..!

ದುಬೈನಲ್ಲಿ ಮೊದಲ ಹಿಂದೂ ದೇವಾಲಯ ನಿರ್ಮಾಣವಾಗಿದ್ದು, ಈ ದೇವಾಲಯವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಪಶ್ಚಿಮ ಏಷ್ಯಾದ ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಖ್ಯಾತಿಗೂ ಸಹ ಈ ದೇವಾಲಯ ಪಾತ್ರವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಫೆ.13 ಹಾಗೂ 14 ರಂದು ದುಬೈ (ಯುಎಇ)ಗೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ಪ್ರಧಾನಿ ಮೋದಿ ರವರು ದುಬೈ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ 2015 ರಿಂದ ಏಳನೇ ಬಾರಿ ಹಾಗೂ ಕಳೆದ ಎಂಟು ತಿಂಗಳಿಂದ ಇದು ಮೂರನೇ ಭೇಟಿಯಾಗಿದೆ. ಈ ಬಾರಿ ಮೊದಲ ದಿನದಂದು ಅಬುಧಾಬಿಯ ಜಾಯೆದ್ ಸ್ಪೋರ್ಟ್ ಸಿಟಿಯಲ್ಲಿ ಪ್ರಧಾನಿ ಮೋದಿಯವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ.14 ರಂದು ಬಿಎಪಿಎಸ್ ರಾಜಧಾನಿಯಲ್ಲಿ ಹಿಂದೂ ದೇವಾಲಯವನ್ನು ಮೋದಿ ಉದ್ಘಾಟಿಸಲಿದ್ದಾರೆ. ಈ ದೇವಾಲಯವನ್ನು ಪಶ್ಚಿಮ ಏಷ್ಯಾದ ಅತಿದೊಡ್ಡ ಹಿಂದೂ ದೇವಾಲಯ ಎಂದು ಹೇಳಲಾಗಿದೆ. ಇತೆರೆ ದೇವಾಲಯಗಳಿಗಿಂತ ಭಿನ್ನವಾಗಿ ಈ ದೇವಾಲಯ ಇರಲಿದೆಯಂತೆ. ಜೊತೆಗೆ ಈ ದೇವಾಲಯ ಎಲ್ಲಾ ಧರ್ಮಗಳಿಗೂ ಮುಕ್ತ ಪ್ರವೇಶ ಕಲ್ಪಿಸಲಾಗಿದೆ ಎನ್ನಲಾಗಿದೆ.

ಇನ್ನೂ ಪ್ರಮುಖ್ ಸ್ವಾಮಿ ಮಹಾರಾಜ್ ರಂಬುವವರು ಕಳೆದ ಏಪ್ರಿಲ್ 5 1997 ರಲ್ಲಿ ದುಬೈಗೆ ಭೇಟಿ ನೀಡಿದ್ದರು. ಈ ವೇಳೆ ಅಬುಧಾಬಿಯಲ್ಲಿ ಹಿಂದೂ ದೇವಾಲಯ ನಿರ್ಮಾಣ ಮಾಡುವ ಕಲ್ಪನೆಯನ್ನು ಹೊಂದಿದ್ದರು. ಇದೀಗ ಭವ್ಯವಾದ ಹಿಂದೂ ಮಂದಿರ ನಿರ್ಮಾಣವಾಗಿದೆ. ಸಂಪೂರ್ಣವಾಗಿ ಭಾರತೀಯ ಶೈಲಿಯಲ್ಲಿ ನಿರ್ಮಾಣವಾಗಿದೆ. ಕಳೆದ ಡಿಸೆಂಬರ್‍ 2019 ರಲ್ಲಿ ಈ ದೇವಾಲಯದ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಇದೀಗ ಪೂರ್ಣಗೊಂಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈ ದೇವಾಲಯ ಉದ್ಘಾಟಿಸಲಿದ್ದಾರೆ.

Most Popular

To Top