ಮಾಜಿ ಸಿಎಂ ಬಿ.ಎಸ್.ವೈ ವಿರುದ್ದ ಪೋಕ್ಸೋ ಅಡಿ ಪ್ರಕರಣ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ….!

Follow Us :

ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದ ಗಂಭೀರ ಆರೋಪ ಕೇಳಿಬಂದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಮೇರೆಗೆ ಅವರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕಳೆದ ಫೆಬ್ರವರಿ ಮಾಹೆಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಯಡಿಯೂರಪ್ಪ ರವರ ವಿರುದ್ದ ಸದಾಶಿವನಗರದಲ್ಲಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ಕಳೆದ ಫೆ.2 ರಂದು ಸಹಾಯ ಕೇಳಲು ಹೋಗಿದ್ದಾಗ ಬಿ.ಎಸ್.ವೈ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ. ಸಂತ್ರಸ್ತೆ ತಾಯಿ ನೀಡಿದ ದೂರಿನಂತೆ ಸದಾಶಿವರನಗರ ಠಾಣೆಯ ಪೊಲೀಸರು ಯಡಿಯೂರಪ್ಪ ವಿರುದ್ದ ಪೋಕ್ಸೋ ಹಾಗೂ 354(A) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿ ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದಾರೆ.

ಲೋಕಸಭಾ ಚುನಾವಣೆಯ ಸಮಯದಲ್ಲೇ ಯಡಿಯೂರಪ್ಪ ವಿರುದ್ದ ಗಂಭೀರ ಆರೋಪ ಕೇಳಿಬಂದಿದೆ. ಇದೀಗ ಯಡಿಯೂರಪ್ಪ ರವರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಅವರು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಬಂಧನದ ಭೀತಿ ಸಹ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಬಾಲಕಿಯ ತಾಯಿ ಈ ಪ್ರಕರಣದ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ಬ್ಯುಸಿನೆಸ್ ಮ್ಯಾನ್ ಗಳು, ರಾಜಕಾರಣಿಗಳೂ ಸೇರಿದಂತೆ 53 ಮಂದಿ ವಿರುದ್ದ ದೂರು ದಾಖಲಿಸಿದ್ದಾರೆ.