ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ ಸ್ಟೇಬಲ್, ಆ.26 ಕ್ಕೆ ಅವರ ಮದುವೆ ಸಹ ಫಿಕ್ಸ್ ಆಗಿತ್ತಂತೆ..!

Follow Us :

ಬೆಂಗಳೂರಿನ ವಿಜಯನಗರ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಪೇದೆ ನವೀನ್ ಕುಮಾರ್‍ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲಿಗೆ ಅವರು ಹೃದಾಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ದುರ್ದೈವಿ ನವೀನ್ ಕುಮಾರ್‍ ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರು ಎಂದಿನಂತೆ ಕೆಲಸ ಮುಗಿಸಿಕೊಂಡು ಹೋಗಿ ಮನೆಯಲ್ಲಿ ಮಲಗಿದ್ದರು. ಶನಿವಾರ ಅವರು ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಸ್ನೇಹಿತರು ಹಾಗೂ ಅವರ ಮನೆಯವರು ಕರೆ ಸಹ ಮಾಡಿದ್ದಾರೆ. ಕರೆ ಸ್ವೀಕರಿಸದ ಕಾರಣ ಮನೆಗೆ ಹೋಗಿ ನೋಡಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಇನ್ನೂ ಮನೆಯಲ್ಲಿ ಯಾರೂ ಇರಲಿಲ್ಲ. ರಾತ್ರಿ ಹಾಸಿಗೆ ಮೇಲೆ ಯಾವುದೇ ಗಾಯಗಳೂ ಸಹ ಇಲ್ಲದೇ ಮೃತಪಟ್ಟ ಹಿನ್ನೆಲೆಯಲ್ಲಿ ಮೊದಲಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದುಕೊಳ್ಳಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ಬಳಿಕ ಆತ ವಿಷ ಸೇವಿಸಿ ಮೃತಪಟ್ಟಿದ್ದಾಗಿ ತಿಳಿದುಬಂದಿದೆ. ಬಳಿಕ ನವೀನ್ ವಾಸವಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಮದ್ಯದ ಬಾಟಲಿ ಹಾಗೂ ವಿಷದ ಬಾಟಲಿ ಸಹ ಪತ್ತೆಯಾಗಿದೆ.

ಇನ್ನೂ ಮೃತ ನವೀನ್ ಕುಮಾರ್‍ ಮದುವೆ ಸಹ ನಿಗಧಿಯಾಗಿತ್ತಂತೆ. ಇದೇ ತಿಂಗಳ 26ರಂದು ಎರಡನೇ ಮದುವೆ ನಡೆಸಲು ನಿಗಧಿಯಾಗಿತ್ತಂತೆ. ಈ ವಿಚಾರದಿಂದ ಕೌಟುಂಬಿಕ ಕಲಹಗಳ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ಸಹ ವ್ಯಕ್ತವಾಗಿದೆ. ಇನ್ನೂ ನವೀನ್ ಕುಮಾರ್‍ ಆತ್ಮಹತ್ಯೆಗೆ ಕಾರಣವಾದರೂ ಏನಿರಬಹುದು ಎಂಬುದರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಚಂದ್ರ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಜೊತೆಗೆ ನವೀನ್ ಕುಮಾರ್‍ ಸ್ನೇಹಿತ ಭಾವುಕ ನುಡಿಗಳನ್ನು ಸಹ ಪೋಸ್ಟ್ ಮಾಡಿದ್ದು, ಆ ಪೋಸ್ಟ್ ಇದೀಗ ವೈರಲ್ ಆಗುತ್ತಿದೆ.