News

ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಬಂದ ತಾಯಿ, ಅಳುತ್ತಿದ್ದ ಮಗುವಿಗೆ ತಾಯಿಯಾದ ಮಹಿಳಾ ಪೊಲೀಸ್, ವೈರಲ್ ಆದ ಪೊಟೋ…..!

ಸರ್ಕಾರಿ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಸಾಮಾನ್ಯವಾಗಿರುತ್ತದೆ. ಇದೀಗ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಮಗುವಿನೊಂದಿಗೆ ತಾಯಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ಹೋಗಿದ್ದು, ಈ ವೇಳೆ ಅಳುತ್ತಿದ್ದ ಮಗುವನ್ನು ಅಲ್ಲಿದ್ದ ಮಹಿಳಾ ಪೊಲೀಸ್ ಸುಧಾರಿಸಿದ್ದಾಳೆ. ಈ ಸಂಬಂಧ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಗುಜರಾತ್ ನ ಹೈಕೊರ್ಟ್ ಪ್ಯೂನ್ ಹುದ್ದೆಗಾಗಿ ಅರ್ಜಿ ಕರೆಯಲಾಗಿತ್ತು. ಈ ಸಂಬಂಧ ನಡೆದ ಪರೀಕ್ಷೆಗೆ ಹಾಜರಾಗಲು ಓರ್ವ ಮಹಿಳೆ ತನ್ನ ಆರು ವರ್ಷದ ಮಗುವಿನೊಂದಿಗೆ ಬಂದಿದ್ದರು. ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿ ಮಾತ್ರ ಹೋಗಲು ಅವಕಾಶವಿರುತ್ತದೆ. ಆದರೆ ವಿಧಿಯಿಲ್ಲದೇ ಮಹಿಳೆ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗಬೇಕಾಗಿತ್ತು. ಈ ಸಮಯದಲ್ಲಿ ಪರೀಕ್ಷಾ ಕೇಂದ್ರದ ಬಳಿಯಿರುವ ಪೊಲೀಸ್ ಸಿಬ್ಬಂದಿ ಆಕೆಗೆ ಬೆಂಬಲ ಕೊಟ್ಟರು. ಇನ್ನೂ ಈ ಸಂಬಂಧ ಅಹಮದಾಬಾದ್ ಪೊಲೀಸರು ಈ ವಿಚಾರವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಇನ್ನೂ ಈ ಪೋಸ್ಟ್ ನಲ್ಲಿರುವಂತೆ ಗುಜರಾತ್ ಹೈಕೋರ್ಟ್ ಪ್ಯೂನ್ ಪೋಸ್ಟ್ ಗಾಗಿ ಪರೀಕ್ಷೆಯನ್ನು ನಡೆಸಲಾಗುತ್ತಿತ್ತು, ಈ ಪರೀಕ್ಷೆ ಬರೆಯಲು ಮಹಿಳೆಯೊಬ್ಬರು ಓದವ್ ಎಂಬ ಕೇಂದ್ರಕ್ಕೆ ತನ್ನ ಆರು ತಿಂಗಳ ಮಗುವಿನೊಂದಿಗೆ ಬಂದಿದ್ದಾರೆ. ಇನ್ನೇನು 10 ನಿಮಿಷಗಳಲ್ಲಿ ಪರೀಕ್ಷೆ ಆರಂಭವಾಗುತ್ತಿದೆ ಅನ್ನುವಷ್ಟರಲ್ಲಿ ಅಲ್ಲಿದ್ದ ಮಹಿಳಾ ಪೊಲೀಸ್ ಪೇದೆ ದಯಾ ಬೆನ್ ಮಗುವನ್ನು ಎತ್ತಿಕೊಂಡು ಆಟವಾಡಿಸುತ್ತಾ ನೋಡಿಕೊಂಡಿದ್ದಾರೆ. ಮಹಿಳಾ ಪೊಲೀಸ್ ಸ್ವತಃ ತಾಯಿಯಂತೆ ಮಗುವನ್ನು ಅಳದಂತೆ ನೋಡಿಕೊಂಡಿದ್ದಾರೆ. ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ. ಅನೇಕರು ಮಹಿಳಾ ಪೇದೆ ಮಾಡಿದ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Most Popular

To Top