News

ಸರ್ಕಾರಿ ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡ ಜೋಡಿ, ಕರ್ತವ್ಯದಿಂದ ವಜಾ ಆದ ಹೊರಗುತ್ತಿಗೆ ವೈದ್ಯ….!

ಇತ್ತಿಚಿಗೆ ಪ್ರೀ ವೆಡ್ಡಿಂಗ್ ಶೂಟ್ ಗಳು ಹೆಚ್ಚಾಗಿ ನಡೆಯುತ್ತಿವೆ. ಅದರಲ್ಲೂ ಕೆಲವು ಜೋಡಿಗಳಂತೂ ವಿಚಿತ್ರವಾದ ಪ್ರದೇಶದಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸುತ್ತಿರುತ್ತಾರೆ. ಇದೀಗ ಜೋಡಿಯೊಂದು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದು, ಹೊರಗುತ್ತಿಗೆ ವೈದ್ಯ ಕರ್ತವ್ಯದಿಂದ ವಜಾಗೊಂಡಿದ್ದಾರೆ.

ಚಿತ್ರದುರ್ಗದ ಭರಮಸಾಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯ ಡಾ.ಅಭಿಷೇಕ್ ಎಂಬಾತ ತನ್ನ ಮದುವೆಯ ಸಂಬಂಧ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿದ್ದಾನೆ. ಕಳೆದ ಫೆ.7 ರಂದು ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿದ್ದು, ಈ ಪೊಟೋಗಳು ಹಾಗೂ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ವೈದ್ಯ ಅಭಿಷೇಕ್ ರನ್ನು ಕರ್ತವ್ಯದಿಂದ ವಜಾಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಡಾ.ಅಭಿಷೇಕ್ ತಮ್ಮ ಮದುವೆಯ ಪ್ರೀ ವೆಡ್ಡಿಂಗ್ ಶೂಟ್ ಅನ್ನು ಸಮುದಾಯ ಆರೋಗ್ಯ ಕೇಂದ್ರದ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಮಾಡಿಸಿಕೊಂಡಿದ್ದು, ಈ ಪೊಟೋ ಹಾಗೂ ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲೂ ವೈರಲ್ ಆಗಿತ್ತು ಹಾಗೂ ಮಾದ್ಯಮಗಳಲ್ಲೂ ಬಿತ್ತರವಾಗಿತ್ತು. ಇದನ್ನು ಗಮನಿಸಿದ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳ ವರದಿಯಂತೆ ಡಾ.ಅಭಿಷೇಕ್ ರವರನ್ನು ತಕ್ಷಣದಿಂದ ಜಾರಿ ಬರುವಂತೆ ಕರ್ತವ್ಯದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನು ಗಮನಿಸಿದ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಈ ಕಾರ್ಯವು ನಿಯಮಬಾಹಿರವಾಗಿದ್ದು, ಗುತ್ತಿಗೆ ಆಧಾರದ ವೈದ್ಯರು ಕರ್ತವ್ಯ ಲೋಪವೆಸಗಿರುತ್ತಾರೆ. ಹೀಗಾಗಿ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳ ವರದಿಯನ್ವಯ ಡಾ. ಅಭಿಷೇಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಮಾಹಿತಿ ನೀಡಿದ್ದಾರೆ.

Most Popular

To Top